Pranitha Subhash: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಪ್ರಣಿತಾ ಸುಭಾಷ್

ಫೋಟೋ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಸಂಗತಿಯನ್ನು ನಟಿ ತಿಳಿಸಿದ್ದಾರೆ. ಇದೇ ವೇಳೆ ಹೆರಿಗೆ ಮಾಡಿಸಿದ ವೈದ್ಯರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

Written by - Puttaraj K Alur | Last Updated : Jun 11, 2022, 07:58 AM IST
  • ಹೆಣ್ಣು ಮಗುವಿಗೆ ಜನ್ಮ ನೀಡಿದ ಬಹುಭಾಷಾ ನಟಿ ಪ್ರಣಿತಾ ಸುಭಾಷ್
  • ಹೆರಿಗೆ ಮಾಡಿಸಿದ ವೈದ್ಯರಿಗೆ ಧನ್ಯವಾದ ತಿಳಿಸಿದ ಸ್ಯಾಂಡಲ್‍ವುಡ್ ನಟಿ
  • ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ ನಟಿ
Pranitha Subhash: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಪ್ರಣಿತಾ ಸುಭಾಷ್ title=
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಪ್ರಣಿತಾ ಸುಭಾಷ್

ಬೆಂಗಳೂರು: ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಬೇಬಿ ಬಂಪ್ ಫೋಟೊಗಳನ್ನು ಹಂಚಿಕೊಂಡಿದ್ದ ನಟಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು. ತಾಯ್ತನದ ಸಂಭ್ರಮ ಎದುರು ನೋಡುತ್ತಿದ್ದ ನಟಿ ಇದೀಗ ಹಣ್ಣು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.   

ತಮ್ಮ ಮಗುವಿನೊಂದಿಗೆ ಖುಷಿಯಲ್ಲಿರುವ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ. ‘ನಮ್ಮ ಹೆಣ್ಣು ಮಗು ಹುಟ್ಟಿದಾಗಿನಿಂದಲೂ ಕಳೆದ ಕೆಲವು ದಿನಗಳು ಅತಿವಾಸ್ತವಿಕವಾಗಿವೆ... ಸ್ತ್ರೀರೋಗತಜ್ಞ ತಾಯಿ(ಡಾ.ಜಯಶ್ರೀ)ಯನ್ನು ಹೊಂದಿರುವ ನಾನು ನಿಜವಾಗಿಯೂ ಅದೃಷ್ಟಶಾಲಿ. ಆದರೆ, ಈ ಗಳಿಗೆ ಅವರಿಗೆ ಭಾವನಾತ್ಮಕವಾಗಿ ಅತ್ಯಂತ ಕಷ್ಟಕರ ಸಮಯವಾಗಿತ್ತು. ಅದೃಷ್ಟವಶಾತ್ ಆಸ್ಟರ್ ಆರ್‌ವಿ(Aster RV Hospital) ಆಸ್ಪತ್ರೆಯಲ್ಲಿ ಡಾ.ಸುನೀಲ್ ಈಶ್ವರ್ ಮತ್ತು ಅವರ ತಂಡ ನಮ್ಮನ್ನು ಚೆನ್ನಾಗಿ ನೋಡಿಕೊಂಡಿತು. ಅವರ ಸಹಾಯದಿಂದ ನನ್ನ ಡೆಲಿವರಿ ಸುಗಮವಾಯಿತು’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅಭಿನಯ ಚಕ್ರವರ್ತಿ' ಕಿಚ್ಚ ಸುದೀಪ್‌ಗೆ ಬ್ಯಾಟ್‌ ಗಿಫ್ಟ್‌ ಕೊಟ್ಟ ಕ್ರಿಕೆಟರ್‌ ಬಟ್ಲರ್..!‌

‘ಅರಿವಳಿಕೆ ತಜ್ಞ ಡಾ.ಸುಬ್ಬು ಮತ್ತು ಅವರ ತಂಡಕ್ಕೆ ನಾನು ಈ ಸಂದರ್ಭದಲ್ಲಿ ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಷಯವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಹೆಚ್ಚುಹೊತ್ತು ಕಾಯಲು ಸಾಧ್ಯವಿಲ್ಲ’ ಅಂತಾ ಅವರು ಕ್ಯಾಪ್ಶನ್ ಬರೆದುಕೊಂಡಿದ್ದಾರೆ.

ಫೋಟೋ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಸಂಗತಿಯನ್ನು ನಟಿ ತಿಳಿಸಿದ್ದಾರೆ. ಇದೇ ವೇಳೆ ಹೆರಿಗೆ ಮಾಡಿಸಿದ ವೈದ್ಯರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

ಉದ್ಯಮಿ ಜೊತೆ ವಿವಾಹವಾಗಿದ್ದ ಪ್ರಣಿತಾ

ಸ್ಯಾಂಡಲ್‍ವುಡ್‍ನಿಂದ ವೃತ್ತಿ ಜೀವನ ಆರಂಭಿಸಿದ್ದರೂ ನಟಿ ಪ್ರಣಿತಾ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕೊರೊನಾ ಸಮಯದಲ್ಲಿ ಪ್ರಣಿತಾ ತಮ್ಮ ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬಹುದಿನಗಳಿಂದ ಪ್ರೀತಿಸುತ್ತಿದ್ದ ಉದ್ಯಮಿ ನಿತಿನ್​ ರಾಜು ಅವರ ಜೊತೆಗೆ ನಟಿ ಸಪ್ತಪದಿ ತುಳಿದಿದ್ದರು.

ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಬೆದರಿಕೆ ಪ್ರಕರಣ: ದೆಹಲಿ ತಲುಪಿದ ಮಹಾರಾಷ್ಟ್ರ ಪೊಲೀಸರು, ಬಿಷ್ಣೋಯ್ ವಿಚಾರಣೆ  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News