ರಜನಿಕಾಂತ್‌ ಜೊತೆ ತೆರೆ ಹಂಚಿಕೊಳ್ಳಲಿರುವ ಶಿವರಾಜ್‌ಕುಮಾರ್! ಯಾವ ಸಿನಿಮಾ? ಇಲ್ಲಿದೆ ನೋಡಿ...

ಕನ್ನಡದ ಸೆಂಚ್ಯೂರಿ ಸ್ಟಾರ್ ಶಿವರಾಜ್‌ಕುಮಾರ್ ಅವರು ಸೂಪರ್‌ಸ್ಟಾರ್ ರಜನಿಕಾಂತ್ ಅವರ ತಲೈವರ್ 169 ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರದ ಶೂಟಿಂಗ್ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. 

Written by - Chetana Devarmani | Last Updated : Jun 8, 2022, 01:43 PM IST
  • ಕನ್ನಡದ ಸೆಂಚ್ಯೂರಿ ಸ್ಟಾರ್ ಶಿವರಾಜ್‌ಕುಮಾರ್
  • ಸೂಪರ್‌ಸ್ಟಾರ್ ರಜನಿಕಾಂತ್ ಅವರ ತಲೈವರ್ 169
  • ರಜನಿಕಾಂತ್‌ ಜೊತೆ ತೆರೆ ಹಂಚಿಕೊಳ್ಳಲಿರುವ ಶಿವಣ್ಣ!
ರಜನಿಕಾಂತ್‌ ಜೊತೆ ತೆರೆ ಹಂಚಿಕೊಳ್ಳಲಿರುವ ಶಿವರಾಜ್‌ಕುಮಾರ್! ಯಾವ ಸಿನಿಮಾ? ಇಲ್ಲಿದೆ ನೋಡಿ... title=
ಶಿವರಾಜ್‌ಕುಮಾರ್

ಕನ್ನಡದ ಸೆಂಚ್ಯೂರಿ ಸ್ಟಾರ್ ಶಿವರಾಜ್‌ಕುಮಾರ್ ಅವರು ಸೂಪರ್‌ಸ್ಟಾರ್ ರಜನಿಕಾಂತ್ ಅವರ ತಲೈವರ್ 169 ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರದ ಶೂಟಿಂಗ್ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಶಿವಣ್ಣ ಅವರು ಸೆಪ್ಟೆಂಬರ್‌ನಲ್ಲಿ ರಜನಿಕಾಂತ್ ಅವರೊಂದಿಗೆ ತಮ್ಮ ಭಾಗಗಳನ್ನು ಚಿತ್ರೀಕರಿಸುವ ನಿರೀಕ್ಷೆಯಿದೆ.  ಈ ಸಿನಿಮಾವನ್ನು ಸನ್ ಪಿಕ್ಚರ್ಸ್ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಲಿದೆ.

ಇದನ್ನೂ ಓದಿ: Grammy award: ಕಸ್ಟಮ್ಸ್‌ನಲ್ಲಿ ಸಿಲುಕಿರುವ ರಿಕಿ ಕೇಜ್ ಗ್ರ್ಯಾಮಿ ಪದಕ!

ಈ ಸಿನಿಮಾಗೆ ತಾತ್ಕಾಲಿಕವಾಗಿ ತಲೈವರ್ 169 ಎಂದು ಹೆಸರಿಸಲಾಗಿದೆ. ಈ ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಯನ್ನು ಮುಂಬರುವ ವಾರಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗ್ತಿದೆ. ಸಿನಿಮಾ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಶಿವರಾಜ್‌ಕುಮಾರ್ ಅವರು, ರಜನಿಕಾಂತ್ ಅವರ ತಲೈವರ್ 169 ರ ಭಾಗವಾಗಿದ್ದಾರೆ ಎಂದು ಖಚಿತಪಡಿಸಿದ್ದಾರೆ. 

"ರಜನಿಕಾಂತ್ ಜೊತೆಗೆ ನಟಿಸುವುದು ಒಂದು ಉತ್ತಮ ಅವಕಾಶ. ಅದು ನನಗೆ ಸಿಕ್ಕಿರುವುದು ಖುಷಿ ತಂದಿದೆ. ಅವರು ನನ್ನ ಬಾಲ್ಯದಿಂದಲೂ ನನಗೆ ಪರಿಚಿತರು. ಪಾತ್ರ ಏನೇ ಇರಲಿ, ಈ ಚಿತ್ರದ ಭಾಗವಾಗಿರುವುದಕ್ಕೆ ನನಗೆ ಸಂತೋಷವಾಗಿದೆ. ರಜನಿ ಸರ್ ಮತ್ತು ನನ್ನನ್ನು ಒಟ್ಟಿಗೆ ಬೆಳ್ಳಿತೆರೆ ಮೇಲೆ ನೋಡಲು ಅಭಿಮಾನಿಗಳು ಇಷ್ಟಪಡುತ್ತಾರೆ ಎಂದು ನನಗೆ ಖಾತ್ರಿಯಿದೆ" ಶಿವರಾಜ್‌ಕುಮಾರ್ ಎಂದಿದ್ದಾರೆ.

ಚಿತ್ರದ ಶೂಟಿಂಗ್ ಶೆಡ್ಯೂಲ್ ಬಗ್ಗೆಯೂ ಅವರು ಮಾಹಿತಿ ಹಂಚಿಕೊಂಡಿದ್ದಾರೆ. "ನನಗೆ ತಿಳಿದಿರುವಂತೆ, ತಂಡವು ಆಗಸ್ಟ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ರಜಿನಿ ಸರ್ ಅವರೊಂದಿಗಿನ ನನ್ನ ಭಾಗಗಳನ್ನು ಸೆಪ್ಟೆಂಬರ್‌ನಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ಶೂಟ್ ಮಾಡಲಾಗುತ್ತದೆ" ಎಂದು ಶಿವರಾಜ್‌ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Vikram Collection: ಕರ್ನಾಟಕ ಬಾಕ್ಸ್ ಆಫೀಸ್​ನಲ್ಲಿ ತಮಿಳು ಸಿನಿಮಾ ‘ವಿಕ್ರಮ್​’ ದಾಖಲೆ

ತಲೈವರ್ 169 ಸೂಪರ್‌ಸ್ಟಾರ್ ರಜನಿಕಾಂತ್ ಮತ್ತು ನೆಲ್ಸನ್ ದಿಲೀಪ್‌ಕುಮಾರ್ ಕಾಂಬಿನೇಷನ್‌ನಲ್ಲಿ ಬರುತ್ತಿರುವ ಮೊದಲ ಸಿನಿಮಾ. ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಅವರು ಚಿತ್ರಕ್ಕೆ ಸಂಗೀತ ಸಂಯೋಜಿಸಲು ನಿರ್ಧರಿಸಿದ್ದಾರೆ. ವರದಿಗಳ ಪ್ರಕಾರ, ತಲೈವರ್ 169 ಅನ್ನು 2023 ರ ಬೇಸಿಗೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆಯಂತೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News