'ದೂರದರ್ಶನ' ದಲ್ಲಿ ವಾಸುಕಿ ವೈಭವ್ ಚಿತ್ರಗೀತೆ.! 'ಕಣ್ಣು ಕಣ್ಣು ಕಾದಾಡುತ ಇರಲಿ' ಹಾಡು ಬಿಡುಗಡೆ

ಸುಕೇಶ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ  ಬರುತ್ತಿರುವ 'ದೂರದರ್ಶನ’ ಚಿತ್ರೀಕರಣ ಈಗಾಗಲೇ ಮುಗಿದಿದೆ. ಇದೀಗ ಚಿತ್ರ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. 

Written by - Ranjitha R K | Last Updated : Nov 11, 2022, 01:13 PM IST
  • ದೂರದರ್ಶನ’ಟೈಟಲ್ ಮೂಲಕವೇ ಭಾರೀ ಸುದ್ದಿ ಮಾಡಿದ ಸಿನಿಮಾ
  • ಪೃಥ್ವಿ ಅಂಬರ್ ನಾಯಕ ನಟನಾಗಿ ಅಭಿನಯಿಸಿರುವ ಚಿತ್ರ
  • ಹೊರ ಬಂತು ಕಣ್ಣು ಕಣ್ಣು ಕಾದಾಡುತ ಇರಲಿ ಹಾಡು
'ದೂರದರ್ಶನ' ದಲ್ಲಿ ವಾಸುಕಿ ವೈಭವ್ ಚಿತ್ರಗೀತೆ.! 'ಕಣ್ಣು ಕಣ್ಣು ಕಾದಾಡುತ ಇರಲಿ'  ಹಾಡು ಬಿಡುಗಡೆ title=
Dooradarshana film song released

ಬೆಂಗಳೂರು :  ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಾಯಕ ನಟನಾಗಿ ಅಭಿನಯಿಸಿರುವ ‘ದೂರದರ್ಶನ’ಟೈಟಲ್ ಮೂಲಕವೇ ಭಾರೀ ಸುದ್ದಿ ಮಾಡಿದೆ. ಸುಕೇಶ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ  ಬರುತ್ತಿರುವ ಈ ಸಿನಿಮಾ ಚಿತ್ರೀಕರಣ ಈಗಾಗಲೇ ಮುಗಿದಿದೆ. ಇದೀಗ ಚಿತ್ರ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ವಿಭಿನ್ನ ಪೋಸ್ಟರ್ ಹಾಗೂ ಟೀಸರ್ ಮೂಲಕ ಎಲ್ಲರ ಗಮನ ಸೆಳೆದ ದೂರ ದರ್ಶನ ಬಿಡುಗಡೆಗೆ ಸಿದ್ದತೆ ನಡೆಸುತ್ತಿದೆ. ಸದ್ಯ ಈ ಚಿತ್ರದ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. 

ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ಚಿತ್ರದ ಮೊದಲ ಹಾಡು ‘ಕಣ್ಣು ಕಣ್ಣು ಕಾದಾಡುತ ಇರಲಿ’ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ವಾಸುಕಿ ವೈಭವ್ ಸಂಗೀತ ಸಂಯೋಜನೆ ಜೊತೆಗೆ ಈ ಹಾಡಿಗೆ ದನಿಯಾಗಿದ್ದಾರೆ. 80, 90ರ ದಶಕದ ಪ್ರೀತಿ, ಪ್ರೇಮವನ್ನು ನೆನಪಿಸುವ ಹಾಡು ಇದಾಗಿದೆ.  ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ಇದನ್ನೂ ಓದಿ : Dil Pasand Review: ಹೇಗಿದೆ ಗೊತ್ತಾ ಡಾರ್ಲಿಂಗ್ ಕೃಷ್ಣ ‘ದಿಲ್ ಪಸಂದ್’..?

ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ಸಿನಿಮಾವನ್ನು ನಿರ್ದೇಶಿಸಿದ್ದಾರೆ.   ಇದು ಇವರ ಮೊದಲ ಸಿನಿಮಾ. ದೂರದರ್ಶನ 80, 90 ದಶಕದಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ಹಳ್ಳಿಯೊಂದಕ್ಕೆ ಟಿವಿ ಎಂಟ್ರಿ ಕೊಟ್ಟಾಗ ಏನೆಲ್ಲ ಆಗುತ್ತದೆ ಅನ್ನೋದು ಈ ಚಿತ್ರದ  ಒನ್ ಲೈನ್  ಕತೆ.  ಡ್ರಾಮಾ ಹಾಗೂ ಹ್ಯೂಮರ್ ಕಥಾಹಂದರ ಒಳಗೊಂಡ  ಈ ಚಿತ್ರದಲ್ಲಿ ಪೃಥ್ವಿ ಅಂಬರ್ ಹಾಗೂ ಅಯಾನ ನಾಯಕ ನಾಯಕಿಯಾಗಿ ನಟಿಸಿದ್ದಾರೆ. 

ಉಗ್ರಂ ಮಂಜು, ಸುಂದರ್ ವೀಣಾ, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಸಿನಿಮಾದಲ್ಲಿದೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ ಚಿತ್ರತಂಡ.

ಇದನ್ನೂ ಓದಿ : ಆ ಮಾಡೆಲ್ ನ ಜೊತೆಗಿನ ಬೋಲ್ಡ್ ಫೋಟೋ ಶೂಟ್ ನಿಂದಾಗಿಯೇ ಮಿರ್ಜಾ–ಮಲಿಕ್ ದಂಪತಿ ಡೈವರ್ಸ್?

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News