Karataka Damanaka: ‘ಕರಟಕ ದಮನಕ’ ಚಿತ್ರದ ಮೊದಲ ಝಲಕ್ ನೋಡಿ ಥ್ರಿಲ್ ಆದ್ರು ಫ್ಯಾನ್ಸ್!

Karataka Damanaka Kannada film: ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Jul 14, 2023, 04:14 PM IST
  • ಶಿವರಾಜಕುಮಾರ್ ಮತ್ತು ಪ್ರಭುದೇವ ಅಭಿನಯದ 'ಕರಟಕ ದಮನಕ' ಚಿತ್ರದ ಮೊದಲ ಝಲಕ್
  • ಎರಡು ಕುತಂತ್ರಿ ನರಿಗಳ ಕಥನವೇ ‘ಕರಟಕ-ದಮನಕ’ ಸಿನಿಮಾ ಎಂದ ನಿರ್ದೇಶಕ ಯೋಗರಾಜ್ ಭಟ್
  • ನಿರ್ಮಾಣದ ಜೊತೆಗೆ ಪ್ರಮುಖ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿರುವ ರಾಕ್‍ಲೈನ್‍ ವೆಂಕಟೇಶ್
Karataka Damanaka: ‘ಕರಟಕ ದಮನಕ’ ಚಿತ್ರದ ಮೊದಲ ಝಲಕ್ ನೋಡಿ ಥ್ರಿಲ್ ಆದ್ರು ಫ್ಯಾನ್ಸ್! title=
'ಕರಟಕ ದಮನಕ' ಚಿತ್ರದ ಮೊದಲ ಝಲಕ್

ನವದೆಹಲಿ: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಮತ್ತು ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೆ ಅಭಿನಯಿಸಿರುವ 'ಕರಟಕ ದಮನಕ' ಚಿತ್ರದ EXCLUSIVE ಮೊದಲ ಝಲಕ್ ಬಿಡುಗಡೆಯಾಗಿದ್ದು, ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಲ್‍ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ ಈ ಸಿನಿಮಾಗೆ ವಿ.ಹರಿಕೃಷ್ಣ ಸಂಗೀತ ನಿರ್ದೇಶವಿದೆ.   

‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು "ಕರಟಕ" ಇನ್ನೊಂದರ ಹೆಸರು "ದಮನಕ". ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ...!! ಎಚ್ಚರಿಕೆ'! ಎಂಬ ಈ ಬರಹದ ಮೂಲಕ ನಿರ್ದೇಶಕ ಯೋಗರಾಜ್ ಭಟ್ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಇದನ್ನೂ ಓದಿ: Sadha : ಮದುವೆಯಾದರೆ ನನ್ನ ʼಆ ಆಸೆಗಳನ್ನುʼ ಮುಂದುವರೆಸಲು ಸಾಧ್ಯವಿಲ್ಲ..! ಅದಕ್ಕೆ ಬೇಡ

ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದು, ಚಿತ್ರಕಥೆಯನ್ನು ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.

ಇದನ್ನೂ ಓದಿ: ಮಂತ್ರಾಲಯ ಸನ್ನಿಧಿ-ಬಳ್ಳಾರಿ ಜಾತ್ರೆಯಲ್ಲಿ "ಉಸಿರೇ ಉಸಿರೇ" ಟೀಸರ್ ರಿಲೀಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News