ಸಲಾರ್ 2 ಸಿನಿಮಾದಲ್ಲಿ ಬಿಟೌನ್‌ ಸುಂದರಿ ಕಿಯಾರಾ ಅಡ್ವಾಣಿ..! ಶೃತಿ ಹಾಸನ್‌ ಗತಿ ಏನು..?

Salaar 2 updates : ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಕೆಜಿಎಫ್‌ ಖ್ಯಾತಿಯ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಪ್ರೇಕ್ಷಕರ ಮುಂದೆ ಬಂದ ಸಲಾರ್ ಭಾಗ 1 ದೊಡ್ಡ ಬ್ಲಾಕ್ಬಸ್ಟರ್ ಆಗಿದೆ.  ಇದೀಗ ಸಲಾರ್ ಭಾಗ 2 ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಅಪ್‌ಡೇಟ್ ಒಂದು ಹೊರ ಬಿದ್ದಿದೆ.

Written by - Krishna N K | Last Updated : Apr 25, 2024, 10:12 PM IST
    • ಸಲಾರ್ ಭಾಗ 1 ದೊಡ್ಡ ಬ್ಲಾಕ್ಬಸ್ಟರ್ ಆಗಿದೆ.
    • ಸಲಾರ್ ಭಾಗ 2 ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
    • ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಅಪ್‌ಡೇಟ್ ಒಂದು ಹೊರ ಬಿದ್ದಿದೆ.
ಸಲಾರ್ 2 ಸಿನಿಮಾದಲ್ಲಿ ಬಿಟೌನ್‌ ಸುಂದರಿ ಕಿಯಾರಾ ಅಡ್ವಾಣಿ..! ಶೃತಿ ಹಾಸನ್‌ ಗತಿ ಏನು..? title=

Prabhas Salaar 2 : ಡಾರ್ಲಿಂಗ್‌ ಪ್ರಭಾಸ್ ಮತ್ತು ಡೈರೆಕ್ಟರ್ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿದ ಬಂದ ಸಲಾರ್ ಸಿನಿಮಾ ಭಾರೀ ನಿರೀಕ್ಷೆಗಳ ನಡುವೆ ಬ್ಲಾಕ್ ಬಸ್ಟರ್ ಹಿಟ್‌ ಎನಿಸಿಕೊಂಡಿದೆ. ಪ್ಯಾನ್ ಇಂಡಿಯಾ ರೇಂಜ್ ನಲ್ಲಿ ಬಿಡುಗಡೆಯಾದ ಈ ಸಿನಿಮಾ ಎಲ್ಲಾ ಭಾಷೆಗಳಲ್ಲಿ ಸೂಪರ್ ಹಿಟ್ ಆಯಿತು. ಈ ಚಿತ್ರದ ಎರಡನೇ ಭಾಗ ಈಗ ಸಲಾರ್ ಭಾಗ 2 ಶೌರ್ಯಾಂಗ ಪರ್ವಂ ಶೀಘ್ರದಲ್ಲೇ ತೆರೆಗೆ ಬರಲಿದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಅವರಿಗಾಗಿ ಈ ಸಿನಿಮಾದ ಬಗ್ಗೆ ಇಂಟ್ರೆಸ್ಟಿಂಗ್ ಅಪ್ಡೇಟ್ ಹೊರಬಿದ್ದಿದೆ.

ಸಲಾರ್‌ 1 ಚಿತ್ರದಲ್ಲಿ ಬಾಲಿವುಡ್ ನಾಯಕಿ ಕಿಯಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿಲ್ಲ. ಎರಡನೇ ಭಾಗದಲ್ಲಿ ಶ್ರುತಿ ಹಾಸನ್ ಜೊತೆಗೆ ಈ ನಾಯಕಿ ಕೂಡ ಬಹುಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಈ ಚಿತ್ರದ ಹೊರತಾಗಿ ಕಿಯಾರಾ ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರದಲ್ಲೂ ಈ ನಟಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:ಸಕಲೇಶಪುರದಲ್ಲಿ ನಾಗಿಣಿ ಖ್ಯಾತಿಯ ನಮೃತಾ : ಫೋಟೋಸ್ ವೈರಲ್

ಕಳೆದ ಕೆಲವು ದಿನಗಳಿಂದ ಪ್ರಶಾಂತ್ ನೀಲ್ ಅವರು ಸಲಾರ್ ಭಾಗ 2 ರ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಸಲಾರ್ 2 ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೇ, ಪ್ರಶಾಂತ್ ನೀಲ್ ಸ್ಕ್ರಿಪ್ಟ್‌ ಬಗ್ಗೆ ಪ್ರಭಾಸ್‌ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. 

ಹೊಂಬಾಳೆ ಫಿಲಂಸ್ ಈ ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ. ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸಲಾರ್ ಪಾರ್ಟ್ 1 ಸಿನಿಮಾ ಬ್ಲಾಕ್ ಬಸ್ಟರ್ ಆದ ಕಾರಣ ಎರಡನೇ ಭಾಗವೂ ಬಾಕ್ಸ್‌ ಆಫೀಸ್‌ನಲ್ಲಿ ಸೌಂಡ್‌ ಮಾಡಲಿದೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News