ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ‘ಬುದ್ಧಿವಂತ’ನ ಹೊಸ ಸಿನಿಮಾ

ಕಲಾವಿದರು ಹಾಗೂ ತಾಂತ್ರಿಕವರ್ಗದ ಕುರಿತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಉಪೇಂದ್ರ ಇದೇ ಸಂದರ್ಭದಲ್ಲಿ ಹೇಳಿದರು.

Written by - YASHODHA POOJARI | Edited by - Puttaraj K Alur | Last Updated : Jun 3, 2022, 08:44 PM IST
  • ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ‘ಬುದ್ಧಿವಂತ’ನ ಹೊಸ ಸಿನಿಮಾಗೆ ಚಾಲನೆ
  • ‘ನಾನು ಮತ್ತು ನೀನು’ ಎಂದು ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಯಲ್ ಸ್ಟಾರ್
  • ಉಪ್ಪಿ ಹೊಸ ಸಿನಿಮಾಗೆ ಕಿಚ್ಚನ ಸುದೀಪ್ ಕ್ಲ್ಯಾಪ್, ಕ್ಯಾಮೆರಾಗೆ ಶಿವಣ್ಣ ಚಾಲನೆ
ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ‘ಬುದ್ಧಿವಂತ’ನ ಹೊಸ ಸಿನಿಮಾ  title=
‘ಬುದ್ಧಿವಂತ’ನ ಹೊಸ ಸಿನಿಮಾಗೆ ಚಾಲನೆ

ಬೆಂಗಳೂರು: ‘A’, ‘ಓಂ’ ನಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿಯೂ ಜನಪ್ರಿಯ. ‘ಉಪ್ಪಿ-2’ ಚಿತ್ರದ ನಂತರ ಉಪ್ಪಿ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ ಶುಭ ಘಳಿಗೆ ಈಗ ಬಂದಿದೆ.‌ ಉಪೇಂದ್ರ ನಿರ್ದೇಶಿಸಿ, ನಾಯಕರಾಗಿಯೂ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ  ಕಿಚ್ಚ ಸುದೀಪ್ ಆರಂಭ ಫಲಕ ತೋರಿದರು. ಹ್ಯಾಟ್ರಿಕ್ ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ಗೀತಾ ಶಿವರಾಜಕುಮಾರ್, ಡಾಲಿ ಧನಂಜಯ, ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

ಲಹರಿ ಫಿಲಂಸ್ ಹಾಗೂ VENUS entertainers ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನದೊಂದಿಗೆ ಉಪೇಂದ್ರ ನಾಯಕರಾಗಿಯೂ ನಟಿಸುತ್ತಿದ್ದಾರೆ. ಮೂರು ನಾಮ(UI)ದ ಚಿಹ್ನೆ ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅನ್ನುತ್ತಿದ್ದಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ.

ಇದನ್ನೂ ಓದಿ: ಭರ್ಜರಿಯಾಗಿ 50 ದಿನ ಕಂಪ್ಲೀಟ್‌ ಮಾಡಿದ KGF Chapter 2

ಒಟ್ಟಿನಲ್ಲಿ ತಮ್ಮ ಹಿಂದಿನ ಚಿತ್ರಗಳಲ್ಲಿ ವಿಭಿನ್ನ ಶೀರ್ಷೆಕೆಯಿಟ್ಟು ಎಲ್ಲರ ತಲೆಗೆ ಕೆಲಸ ಕೊಡುತ್ತಿದ್ದ ಉಪ್ಪಿ ಈ ಚಿತ್ರದಲ್ಲೂ ಹಾಗೆಯೇ ಮಾಡಿದ್ದಾರೆ. ‘ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಇಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ಕಥೆ ಸಿದ್ದಮಾಡಿಕೊಂಡಿರುತ್ತೇನೆ. ಮತ್ತೆ ಬೇರೆ ಅಲೋಚನೆ ಬಂದರೆ, ಬದಲಿಸುತ್ತೀನಿ’ ಎಂದು ಉಪ್ಪಿ ತಿಳಿಸಿದರು.

‘ಚಿತ್ರದ ಶೀರ್ಷಿಕೆ ಹಾಗೂ ಕುದುರೆ ಪೋಸ್ಟರ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಅದರ ಬಗ್ಗೆ ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ಹೊಳೆಯುತ್ತಿದೆ. ನಿಮ್ಮಗೆಲ್ಲಾ ಏನು ಅನಿಸುವುದೊ, ಅದು ಚಿತ್ರದಲ್ಲಿ ಇರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ಹೇಳಲು ಬರುವುದಿಲ್ಲ ಎಂದ ಉಪೇಂದ್ರ, ‘ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ. ನಿಮ್ಮ ನಿರೀಕ್ಷೆ ಸುಳ್ಳು ಮಾಡುವುದಿಲ್ಲ’ವೆಂದು ತಿಳಿಸಿದರು.

ಇದನ್ನೂ ಓದಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಿನಿಮಾಗಳ ಬಗ್ಗೆ ಅಮಿತ್ ಶಾ ಮೆಚ್ಚುಗೆ

ಕಲಾವಿದರು ಹಾಗೂ ತಾಂತ್ರಿಕವರ್ಗದ ಕುರಿತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಉಪೇಂದ್ರ ಇದೇ ಸಂದರ್ಭದಲ್ಲಿ ಹೇಳಿದರು. ‘ಉಪೇಂದ್ರ ನಿರ್ದೇಶನಕ್ಕೆ ಒಪ್ಪಿರುವುದು ಖುಷಿಯಾಗಿದೆ. ಶಿವಣ್ಣ ಹಾಗೂ ಗೀತಕ್ಕ ಅವರ ಆಶೀರ್ವಾದದಿಂದ 3ನೇ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಖ್ಯಾತ ಲಹರಿ ಫಿಲಂಸ್ ನವರು ನಾವು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮ ಹಾರೈಕೆ ಇರಲಿ’ ಎಂದು ಕೆ.ಪಿ.ಶ್ರೀಕಾಂತ್ ಹೇಳಿದರು.

‘ನಾನು ಹಾಗೂ ಉಪೇಂದ್ರ ಸಹಪಾಠಿಗಳು. ತುಂಬಾ ವರ್ಷಗಳಿಂದ ಅವರು ನನಗೆ ಪರಿಚಯ. ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷ ನೀಡಿದೆ’ ಎಂದು ಲಹರಿ ವೇಲು ತಿಳಿಸಿದರು. ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕಾಕ್ರೋಜ್ ಸುಧಿ, ನಟಿ ತ್ರಿವೇಣಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News