Sudeep in DKD: ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ನಲ್ಲಿ ಕಿಚ್ಚ ಸುದೀಪ್‌! ಈ ದಿನದಂದು ಪ್ರಸಾರವಾಗಲಿದೆ ಶೋ

Sudeep in Dance Karnataka Dance: ಸದ್ಯ ಎಲ್ಲ ಸಿನಿ ಪ್ರಿಯರೂ, ವಿಕ್ರಾಂತ್‌ ರೋಣ ರಿಲೀಸ್‌ಗಾಗಿ ಕಾಯುತ್ತಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ನಡೆದ ಡಾನ್ಸ್ ಕರ್ನಾಟಕ ಡಾನ್ಸ್ ಶೋ ಶೂಟಿಂಗ್ ನಲ್ಲಿ ಸುದೀಪ್ ಭಾಗಿಯಾಗಿದ್ದಾರೆ.

Written by - Chetana Devarmani | Last Updated : Jun 30, 2022, 01:01 PM IST
  • ವಿಕ್ರಾಂತ್‌ ರೋಣ ಪ್ರಮೋಷನ್‌ನಲ್ಲಿ ನಟ ಕಿಚ್ಚ ಸುದೀಪ್‌ ಸದ್ಯ ಸಖತ್‌ ಬ್ಯುಸಿಯಾಗಿದ್ದಾರೆ
  • ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ʻಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼ
  • ʻಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼ ವೇದಿಕೆಯ ಮೇಲೆ ಕಿಚ್ಚ ಸುದೀಪ್
Sudeep in DKD: ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ನಲ್ಲಿ ಕಿಚ್ಚ ಸುದೀಪ್‌! ಈ ದಿನದಂದು ಪ್ರಸಾರವಾಗಲಿದೆ ಶೋ title=
ಕಿಚ್ಚ ಸುದೀಪ್ 

Sudeep in Dance Karnataka Dance: ವಿಕ್ರಾಂತ್‌ ರೋಣ ಪ್ರಮೋಷನ್‌ನಲ್ಲಿ ನಟ ಕಿಚ್ಚ ಸುದೀಪ್‌ ಸದ್ಯ ಸಖತ್‌ ಬ್ಯುಸಿಯಾಗಿದ್ದಾರೆ. ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ʻಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼ ವೇದಿಕೆಯ ಮೇಲೆ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ. ಅಲ್ಲದೇ ನಟ ಶಿವರಾಜ್‌ ಕುಮಾರ್‌ ಜೊತೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: Vikrant Rоna: ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ನಂ.1 ಸ್ಥಾನದಲ್ಲಿದೆ ʻವಿಕ್ರಾಂತ್‌ ರೋಣʼ

ಜುಲೈ 28 ರಂದು ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ರಿಲೀಸ್ ಆಗುತ್ತಿದೆ. ಬಿಡುಗಡೆ ದಿನಾಂಕ ಸನಿಹವಾಗುತ್ತಿದ್ದಂತೆ ಪ್ರಮೋಷನ್‌ ಕಾರ್ಯ ಚುರುಕುಗೊಳಿಸಿದ್ದಾರೆ. ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಹಲವು ಕಡೆ ಸುದೀಪ್ ಹಾಗೂ ಚಿತ್ರತಂಡ ಸಿನಿಮಾ ಪ್ರಚಾರ ಮಾಡಿ ಬಂದಿದ್ದಾರೆ. 

 

 
 
 
 

 
 
 
 
 
 
 
 
 
 
 

A post shared by Zee Kannada (@zeekannada)

 

ರಾ.. ರಾ.. ರಕ್ಕಮ್ಮ ಹಾಡಿನಿಂದ ಸಿನಿಮಾ ಮೇಲಿನ ಕುತೂಹಲ ಹೆಚ್ಚಾಗಿತ್ತು. ಅದಾದ ನಂತರ ಬಂದ ಟ್ರೈಲರ್‌ ಚಿತ್ರದ ಮೇಲಿದ್ದ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ. ಸದ್ಯ ಎಲ್ಲ ಸಿನಿ ಪ್ರಿಯರೂ, ವಿಕ್ರಾಂತ್‌ ರೋಣ ರಿಲೀಸ್‌ಗಾಗಿ ಕಾಯುತ್ತಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ನಡೆದ ಡಾನ್ಸ್ ಕರ್ನಾಟಕ ಡಾನ್ಸ್ ಶೋ ಶೂಟಿಂಗ್ ನಲ್ಲಿ ಸುದೀಪ್ ಭಾಗಿಯಾಗಿದ್ದಾರೆ.

ಇದನ್ನೂ ಓದಿ: Vikrant Rona: ʻವಿಕ್ರಾಂತ್‌ ರೋಣʼನ ಬಗ್ಗೆ ಹೀಗಂದ್ರು ಅಮಿತಾಬ್‌ ಬಚ್ಚನ್‌!

ಸ್ಪರ್ಧಾಳುಗಳ ಜೊತೆ ಮಾತನಾಡಿದ ಕಿಚ್ಚ, ವಿಕ್ರಾಂತ್ ರೋಣ ಸಿನಿಮಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ತಮ್ಮ ಒಡನಾಟದ ಬಗ್ಗೆಯೂ ಕೆಲವು ಸಿಹಿ ಮಾತುಗಳನ್ನು ಹೇಳಿದ್ದಾರೆ. ಈ ಎಪಿಸೋಡ್‌ ಇದೇ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News