ವಿಷ್ಣು ಸ್ಮಾರಕ ನಿರ್ಮಾಣ ಹೋರಾಟಕ್ಕೆ ಸುದೀಪ್​, ಧನಂಜಯ್​ ಬೆಂಬಲ

Vishnuvardhan Memorial: ಇದೀಗ ವಿಷ್ಣು ಅಭಿಮಾನಿಗಳು ಸ್ಮಾರಕಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್‌ ಮತ್ತು ಡಾಲಿ ಧನಂಜಯ ಬೆಂಬಲ ನೀಡಿದ್ದಾರೆ.   

Written by - Chetana Devarmani | Last Updated : Dec 17, 2023, 01:26 PM IST
  • ವಿಷ್ಣು ಸ್ಮಾರಕಕ್ಕಾಗಿ ಅಭಿಮಾನಿಗಳ ಹೋರಾಟ
  • ವಿಷ್ಣುವರ್ಧನ್ ಸ್ಮಾರಕ ಕುರಿತು ಸುದೀಪ್ ಟ್ವೀಟ್
  • ವಿಷ್ಣುವರ್ಧನ್ ಸ್ಮಾರಕ ಹೋರಾಟಕ್ಕೆ ಧನಂಜಯ್ ಬೆಂಬಲ
ವಿಷ್ಣು ಸ್ಮಾರಕ ನಿರ್ಮಾಣ ಹೋರಾಟಕ್ಕೆ ಸುದೀಪ್​, ಧನಂಜಯ್​ ಬೆಂಬಲ   title=

Vishnuvardhan Memorial: ಸಾಹಸ ಸಿಂಹ ವಿಷ್ಣುವರ್ಧನ್‌ ಅಗಲಿ ಡಿಸೆಂಬರ್‌ 30 ಕ್ಕೆ ಬರೋಬ್ಬರಿ 14 ವರ್ಷ ಆಗಲಿದೆ.  2009ರ ಡಿಸೆಂಬರ್​ 30ರಂದು ವಿಷ್ಣವರ್ಧನ್​ ಇಹಲೋಕ ತ್ಯಜಿಸಿದರು. ಅಂದಿನಿಂದಲೂ ಅವರ ಅಭಿಮಾನಿಗಳ ಒಕ್ಕೊರಲ ಕೂಗು ಒಂದೇ.. ಅದು ವಿಷ್ಣು ಸ್ಮಾರಕ ನಿರ್ಮಾಣ. ದಶಕ ಕಳೆದರೂ ವಿಷ್ಣು ಸ್ಮಾರಕ ನಿರ್ಮಾಣ ಮಾತ್ರ ಮರಿಚಿಕೆಯಾಗಿ ಉಳಿದಿದೆ. ಇದೀಗ ವಿಷ್ಣು ಅಭಿಮಾನಿಗಳು ಸ್ಮಾರಕಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್‌ ಮತ್ತು ಡಾಲಿ ಧನಂಜಯ ಬೆಂಬಲ ನೀಡಿದ್ದಾರೆ. 

ವಿಷ್ಣವರ್ಧನ್​ ಅವರು ನಿಧನರಾದಾಗಿನಿಂದಲೂ ಅಭಿಮಾನ್‌ ಸ್ಟುಡಿಯೋದಲ್ಲಿ  ಅವರ ಸ್ಮಾರಕಕ್ಕೆ ಭೂಮಿ ಒದಗಿಸುವಂತೆ ವಿಷ್ಣು ಫ್ಯಾನ್ಸ್‌ ಮನೆವಿ ಮಾಡುತ್ತಿದ್ದಾರೆ. ಮೈಸೂರಿನಲ್ಲಿ  ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗಿದ್ದರೂ ಬೆಂಗಳೂರಿನಲ್ಲಿ ಇದುವರೆಗೆ ಸ್ಮಾರಕ ನಿರ್ಮಾಣ ಕಾರ್ಯ ಆರಂಭ ಕೂಡ ಆಗಿಲ್ಲ. ಬೆಂಗಳೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಅವರ ಅಭಿಮಾನಿಗಳು ಹೋರಾಟ ಆರಂಭಿಸಿದ್ದಾರೆ. 

ಇದನ್ನೂ ಓದಿ: ಶ್ರುತಿ ಹಾಸನ್ ಮದ್ಯಪಾನ ಬಿಡಲು ಇಷ್ಟು ವರ್ಷ ಬೇಕಾಯ್ತು, ಡ್ರಗ್ಸ್ ಬಗ್ಗೆ ನಟಿಯ ಬಿಗ್ ಸೀಕ್ರೇಟ್ ರಿವೀಲ್! 

ವಿಷ್ಣುವರ್ಧನ್ ಅಭಿಮಾನಿಗಳ ಹೋರಾಟಕ್ಕೆ ನಟ ಡಾಲಿ ಧನಂಜಯ ಮತ್ತು ಕಿಚ್ಚ ಸುದೀಪ ಬೆಂಬಲವಾಗಿ ನಿಂತಿದ್ದಾರೆ. ವಿಷ್ಣುವರ್ಧನ್ ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ವಿಷ್ಣು ಅಭಿಮಾನಿಗಳ ಹೋರಾಟಕ್ಕೆ ನಟ ಡಾಲಿ ಧನಂಜಯ ಬೆಂಬಲ ಸೂಚಿಸಿದ್ದಾರೆ.

 

 

ಕನ್ನಡ ಚಿತ್ರರಂಗದ ಮೇರು ನಟ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ ಕಾಣಲಿ ಎಂದು ಡಾಲಿ ಧನಂಜಯ ಟ್ವೀಟ್ ಮಾಡಿದ್ದಾರೆ. 

 

 

ವಿಷ್ಣು ಸ್ಮಾರಕ ನಿರ್ಮಾಣ ಹೋರಾಟಕ್ಕೆ ಸುದೀಪ್‌ ಸಹ ಬೆಂಬಲಿಸಿದ್ದಾರೆ. ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು - ಇಂದು ಒಂದೇ ನಿಲುವು ಎಂದಿದ್ದಾರೆ. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲ ಇದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಕಿಚ್ಚ ಸುದೀಪ್ ಟ್ವೀಟ್​ ಮಾಡಿದ್ದಾರೆ. 

ಇದನ್ನೂ ಓದಿ: ಧೂಳೆಬ್ಬಿಸಿದ ʻಕಾಟೇರʼ ಆಕ್ಷನ್ ಪ್ಯಾಕ್ಡ್ ಟ್ರೇಲರ್‌: ವಿಭಿನ್ನ ಪಾತ್ರದಲ್ಲಿ ಚಾಲೆಂಜಿಂಗ್‌ಸ್ಟಾರ್‌! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News