ಕಾವೇರಿ ಸಮಸ್ಯೆ ಬಗೆಹರಿಸುವಂತೆ ರಾಜಕೀಯ ನಾಯಕರಿಗೆ ಬಹಿರಂಗ ಪತ್ರ ಬರೆದ ಕಿಚ್ಚ ಸುದೀಪ್!‌

Kiccha Sudeep on Kaveri water Dispute: ದಶಕಗಳಿಂದ ನಡೆಯುತ್ತಿರುವ ಕಾವೇರಿ ನೀರು ಹಂಚಿಕೆ ವಿವಾದ ಇದೀಗ ಮತ್ತೆ ಶುರುವಾಗಿದೆ. ಈ ಹೋರಾಟಕ್ಕೆ ದರ್ಶನ್‌ ಅಂಬರೀಷ್‌ ಸೇರಿದಂತೆ ಅನೇಕರು ಬೆಂಬಲ ಸೂಚಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್‌ ಸಹ ಬಹಿರಂಗ ಪತ್ರ ಬರೆಯುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.   

Written by - Savita M B | Last Updated : Sep 26, 2023, 11:58 AM IST
  • ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ನಡೆಯುತ್ತಿರುವ ಕಾವೇರಿ ಹೋರಾಟ
  • ಕಾವೇರಿ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ
  • ಇದೀಗ ಕಿಚ್ಚ ಸುದೀಪ್‌ ಸಹ ಈ ಹೋರಾಟಕ್ಕೆ ಬೆಂಬಲ ನೀಡಿ, ಬಹಿರಂಗ ಪತ್ರ ಬರೆದಿದ್ದಾರೆ
ಕಾವೇರಿ ಸಮಸ್ಯೆ ಬಗೆಹರಿಸುವಂತೆ ರಾಜಕೀಯ ನಾಯಕರಿಗೆ ಬಹಿರಂಗ ಪತ್ರ ಬರೆದ ಕಿಚ್ಚ ಸುದೀಪ್!‌ title=

Kaveri water Dispute: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ನಡೆಯುತ್ತಿರುವ ಕಾವೇರಿ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈಗಾಗಲೇ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ರೈತರ ಬೆಂಬಲಕ್ಕೆ ನಿಂತಿದ್ದಾರೆ. ಅಲ್ಲದೇ ಸೋಷಿಯಲ್‌ ಮಿಡಿಯಾ ಮೂಲಕವೂ ಹಲವು ಸೆಲೆಬ್ರಿಟಿಗಳು ರೈತರ ಪರವಾಗಿ ಬೆಂಬಲ ಸೂಚಿಸಿದ್ದಾರೆ. 

ಇದೀಗ ಕಿಚ್ಚ ಸುದೀಪ್‌ ಸಹ ಈ ಹೋರಾಟಕ್ಕೆ ಬೆಂಬಲ ನೀಡಿದ್ದು, ಕಾವೇರಿ ನೀರಿನ ಸಮಸ್ಯೆ ಕುರಿತು ಬಹಿರಂಗ ಪತ್ರ ಬರೆದಿದ್ದಾರೆ.  ಈ ಸಮಸ್ಯೆಯನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ರಾಜಕೀಯ ನಾಯಕರಲ್ಲಿ ಮನವಿಮಾಡಿಕೊಂಡಿದ್ದಾರೆ. ಅವರು ಬರೆದ ಪತ್ರದ ವಿವರ ಇಲ್ಲಿದೆ....

ಇದನ್ನೂ ಓದಿ- ಸೌದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಉರುಳು ಸೇವೆ ಸಲ್ಲಿಸಿದ ಇನಾಮ್ದಾರ ಚಿತ್ರ ನಟ ರಂಜನ್ ಛತ್ರಪತಿ

" ಸಮಸ್ತ ಕನ್ನಡ ಜನತೆಗೆ ನಮಸ್ಕಾರ... ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ’ ಎನ್ನುವ ಭರವಸೆಯ ಮಾತುಗಳೊಂದಿಗೆ ಸುದೀಪ್‌ ಪತ್ರ ಬರೆಯಲಾರಂಭಿಸಿದ್ದಾರೆ. 

‘ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಮಾತ್ರವಲ್ಲದೆ ಕುಡಿಯುವ ನೀರಿಗೆ ಸಹ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ, ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ಟ್ರಿಬ್ಯೂನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ’ 

"ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ, ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ."

"ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ. ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ, ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು" ಎಂದು ಬಹಿರಂಗ ಪತ್ರ ಬರೆಯುವ ಮೂಲಕ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. 

ಇದನ್ನೂ ಓದಿ- ಸಿನಿರಂಗಕ್ಕೆ ಮತ್ತಿಬ್ಬರು ಸ್ಟಾರ್‌ ಪುತ್ರಿಯರ ಆಗಮನ..ಯಾರವರು ಅಂತೀರಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News