Klaantha Kannada Movie: ‘ಕ್ಲಾಂತ’ ಮೂಲಕ ಚಿತ್ರರಂಗಕ್ಕೆ ನಟಿ ಸಂಗೀತಾ ಭಟ್ ಕಮ್‌ಬ್ಯಾಕ್!

Klaantha Kannada Movie: ಈ ಹಿಂದೆ ‘ರಂಗನ್ ಸ್ಟೈಲ್’, ‘ದಗಲು ಬಾಜಿ’ ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Apr 25, 2023, 03:38 PM IST
  • ‘ಕ್ಲಾಂತ’ ಮೂಲಕ ಚಿತ್ರರಂಗಕ್ಕೆ ನಟಿ ಸಂಗೀತಾ ಭಟ್ ಕಮ್‌ಬ್ಯಾಕ್ ಮಾಡಿದ್ದಾರೆ
  • ‘ಕ್ಲಾಂತ’ದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಿದ ಚಿತ್ರತಂಡ
  • ‘ಕ್ಲಾಂತ’ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಚಿತ್ರವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ
Klaantha Kannada Movie: ‘ಕ್ಲಾಂತ’ ಮೂಲಕ ಚಿತ್ರರಂಗಕ್ಕೆ ನಟಿ ಸಂಗೀತಾ ಭಟ್ ಕಮ್‌ಬ್ಯಾಕ್! title=
ಚಿತ್ರರಂಗಕ್ಕೆ ನಟಿ ಸಂಗೀತಾ ಭಟ್ ಕಮ್‌ಬ್ಯಾಕ್!

ಬೆಂಗಳೂರು: ಕನ್ನಡದಲ್ಲಿ ಇದೀಗ ಹೊಸ ಬಗೆಯ ಶೀರ್ಷಿಕೆ ಸಿನಿಮಾಗಳು ಬಹಳಷ್ಟು ಸದ್ದು ಮಾಡುತ್ತಿವೆ. ಈ ಪಟ್ಟಿಗೆ ಈಗ ಹೊಸ ಸೇರ್ಪಡೆ ‘ಕ್ಲಾಂತ’. ಈ ಹಿಂದೆ ‘ರಂಗನ್ ಸ್ಟೈಲ್’, ‘ದಗಲು ಬಾಜಿ’ ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಂದು ‘ಕ್ಲಾಂತ’ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿತ್ತು. ಈ ಬಗ್ಗೆ ಚಿತ್ರತಂಡ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡಿತು.

ನಿರ್ದೇಶಕ ವೈಭವ್ ಪ್ರಶಾಂತ್ ಮಾತನಾಡಿ, ಇದು ನನ್ನ 4ನೇ ಸಿನಿಮಾ. ಯುವಜನತೆಗೆ ಒಳ್ಳೆ ಸಂದೇಶ ಕೊಡುವ ಚಿತ್ರವಾಗಿದ್ದು, ಅಪ್ಪ-ಅಮ್ಮನಿಗೆ ಸುಳ್ಳು ಹೇಳಿ ತಪ್ಪು ದಾರಿ ಹಿಡಿಯಬೇಡಿ ಎಂಬ ಕಂಟೆಂಟ್ ಸುತ್ತ ಸಿನಿಮಾ ಮಾಡಲಾಗುತ್ತಿದೆ. ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ʼಅಚಾತುರ್ಯದಿಂದ ನಿಮಗೆ ನೋವು ಮಾಡಿದ್ದೇನೆ‌ʼ..! ಮಾಧ್ಯಮಗಳಿಗೆ ʼಡಿಬಾಸ್‌ʼ ಬಹಿರಂಗ ಪತ್ರ

ನಟಿ ಸಂಗೀತ ಭಟ್ ಮಾತನಾಡಿ, ನನಗೆ ಈ ಸಿನಿಮಾ ತುಂಬಾ ಸ್ಪೆಷಲ್. ತುಂಬಾ ವರ್ಷದಿಂದ ಸಿನಿಮಾದಿಂದ ದೂರ ಇದ್ದೆ. ನಾನು ಕಂಬ್ಯಾಕ್ ಮಾಡಿದ ನಂತರ ಸೈನ್ ಮಾಡಿದ ಮೊದಲ ಚಿತ್ರವಿದು. ಟೀನೇಜ್ ಹುಡುಗಿ ದಾಟಿ ಈಗ ತಾನೇ ಕೆಲಸ ಮಾಡುವ ಪಾತ್ರ ನನ್ನದು. ಹೆಚ್ಚಾಗಿ ಕಾಡಿನಲ್ಲಿ ಶೂಟ್ ಮಾಡಲಾಗಿದ್ದು, ಒಂದೊಳ್ಳೆ ಅನುಭವ ದೊರೆತಿದೆ. ಇಲ್ಲಿ ನನ್ನ ಪಾತ್ರಕ್ಕೆ ಬೇಕಾದ ಫಿಟ್ನೆಸ್, ಎಕ್ಸ್‍ಪ್ರೆಸ್ ಬದಲಾಯಿಸಿದ್ದೇನೆ. ಫೈಟ್ ಸೀಕ್ವೆನ್ಸ್ ಮಾಡಿದ್ದು, ಖುಷಿಕೊಟ್ಟಿದೆ ಎಂದು ಹೇಳಿದರು.

ನಾಯಕ ವಿಘ್ನೇಶ್ ಮಾತನಾಡಿ, ‘ತುಂಬಾ ಖುಷಿಯಾಗುತ್ತಿದೆ. ಕನ್ನಡದಲ್ಲಿ ಇದು ಮೊದಲ ಸಿನೆಮಾ. ತುಳುವಿನಲ್ಲಿ ಪ್ರಶಾಂತ್ ಸರ್ ಜೊತೆ ಸಿನಿಮಾ ಮಾಡಿದ್ದೇನೆ. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರಕ್ಕೂ ನಿಮ್ಮ ಬೆಂಬಲ ಇರಲಿ’ ಎಂದು ಹೇಳಿದರು. ‘ಕ್ಲಾಂತ’ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಚಿತ್ರವಾಗಿದ್ದು, ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಎಂ.ವಿಘ್ನೇಶ್ ನಾಯಕನಾಗಿ, ಸಂಗೀತ ಭಟ್ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ಶೋಭ್ ರಾಜ್, ವೀಣಾ ಸಂಗೀತ, ಕಾಮಿಡಿ‌ ಕಿಲಾಡಿಯ ದೀಪಿಕಾ, ಪ್ರವೀಣ್ ಜೈನ್, ಯುವ ಹಾಗೂ ಸ್ವಪ್ನ, ತಿಮ್ಮಪ್ಪ ಕುಲಾಲ್ ನಟಿಸುತ್ತಿದ್ದಾರೆ.

ಇದನ್ನೂ ಓದಿ: Malaika arora : ವಯಸ್ಸು ಬರೀ ಸಂಖ್ಯೆ ಅಷ್ಟೇ ಅಲ್ವಾ..! ಮಲೈಕಾ ಅಂದಕ್ಕೆ ಸರಿಸಾರಿ ಯಾರು..?

ಎಸ್.ಪಿ.ಚಂದ್ರಕಾಂತ್ ಸಂಗೀತ, ಪಿ.ಆರ್.ಸೌಂದರ್ ರಾಜ್ ಸಂಕಲನ, ಮೋಹನ್ ಲೋಕನಾಥ್ ಛಾಯಾಗ್ರಹಣ ಚಿತ್ರಕ್ಕಿದೆ. ಸಂತೋಷ್ ನಾಯ್ಕ್, ವರಾಹ ರೂಪಂ ಖ್ಯಾತಿಯ ಶಶಿರಾಜ್ ಕಾವೂರ್, ವೈಭವ್ ಪ್ರಶಾಂತ್ ಸಾಹಿತ್ಯ ಹಾಡುಗಳಿಗಿದ್ದು, ವಿನೋದ್ ಸ್ಟಂಟ್, ಮಹೇಶ್ ದೇವ್ ಸಂಭಾಷಣೆ ಸಿನಿಮಾಕ್ಕಿದೆ. 2 ಹಾಡುಗಳಿಗೆ ರಘು ಅವರ ನೃತ್ಯ ಸಂಯೋಜನೆ ಇದೆ . ಅನುಗ್ರಹ ಪವರ್ ಮೀಡಿಯಾ ಬ್ಯಾನರ್‍ನಡಿ ಉದಯ್ ಅಮ್ಮಣ್ಣಾಯ ಬಂಡವಾಳ ಹೂಡಿದ್ದು, ಅರುಣ್ ಗೌಡ, ಪ್ರದೀಪ್ ಗೌಡ ಸಹ ನಿರ್ಮಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News