Anjali Menon New Movie: ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ಇದೀಗ ಖ್ಯಾತ ಮಲಯಾಳಂ ನಿರ್ದೇಶಕಿ ಅಂಜಲಿ ಮೆನನ್ ಅವರೊಂದಿಗೆ ಹೊಸ ತಮಿಳು ಚಿತ್ರಕ್ಕಾಗಿ ಕೈ ಜೋಡಿಸಿದೆ. "ಬ್ಯಾಂಗ್ಲೂರ್ ಡೇಸ್", "ಉಸ್ತಾದ್ ಹೊಟೇಲ್", "ಮಂಜಡಿಕುರು", "ಕೂಡೆ" ಮತ್ತು ಇತ್ತೀಚಿನ "ವಂಡರ್ ವುಮನ್" ಅಂತಹಾ ಹೆಸರಾಂತ ಚಿತ್ರಗಳನ್ನು ಕೊಡುಗೆಯಾಗಿ ನೀಡಿರುವ ನಿರ್ದೇಶಕಿ ಅಂಜಲಿ ಮೆನನ್ ಇದೀಗ ತಮಿಳು ಚಿತ್ರವನ್ನು ನಿರ್ದೇಶಿಸಲು ಸಜ್ಜಾಗಿದ್ದಾರೆ.
ಕೆ ಆರ್ ಜಿ ಸ್ಟುಡಿಯೋಸ್ ಈ ಸಹಯೋಗದ ಮೂಲಕ ಕನ್ನಡ ಚಿತ್ರರಂಗಕ್ಕೂ ಹಾಗೂ ಇನ್ನಿತರ ಚಿತ್ರರಂಗಕ್ಕೂ ಇರುವ ಅಂತರವನ್ನು ಕಡಿಮೆ ಮಾಡಿ, ಸಮಗ್ರ ನಿರ್ಮಾಣದ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸುತ್ತಿದೆ ಎಂದರೆ ತಪ್ಪಾಗಲಾರದು.
ಕೆ ಆರ್ ಜಿ ಸ್ಟುಡಿಯೋಸ್ ತನ್ನ ಸಿನಿಮಾ ವಿತರಣೆಯನ್ನು 2017ರಲ್ಲಿ ಆರಂಭಿಸಿ, ಇಲ್ಲಿಯ ವರೆಗೂ ಸರಿಸುಮಾರು 100 ಚಿತ್ರಗಳನ್ನು ವಿತರಿಸಿದೆ. 2020ರಲ್ಲಿ, "ರತ್ನನ್ ಪ್ರಪಂಚ" ಚಿತ್ರದ ಮೂಲಕ ಚಿತ್ರ ನಿರ್ಮಾಣವನ್ನು ಆರಂಭಿಸಿತು. ರೋಹಿತ್ ಪದಕಿಯವರ ನಿರ್ದೇಶನದಲ್ಲಿ, ಡಾಲಿ ಧನಂಜಯ್ ಅಭಿನಯದಲ್ಲಿ ಮೂಡಿಬಂದ ಈ ಚಿತ್ರ Amazon primeನಲ್ಲಿ ಬಿಡುಗಡೆಗೊಂಡು ಎಲ್ಲರ ಮನೆ ಮಾತಾಗಿತ್ತು. ನಂತರದಲ್ಲಿ , ಮಾರ್ಚ್ 2023ರಲ್ಲಿ ತೆರೆ ಕಂಡ "ಗುರುದೇವ್ ಹೊಯ್ಸಳ" ಬಹಳ ದೊಡ್ಡ ಮಟ್ಟದಲ್ಲಿ ಮೆಚ್ಚುಗೆಯನ್ನು ಗಳಿಸಿತ್ತು.
ಇದನ್ನೂ ಓದಿ: Allu Arjun: ಅಲ್ಲು ಅರ್ಜುನ್ ಕಾರ್ ಡ್ರೈವರ್ ಸಂಬಳ ಎಷ್ಟು ಗೊತ್ತಾ?
ಕೆ ಆರ್ ಜಿ ಸ್ಟುಡಿಯೋಸ್ ನ ಈ ಸಹಯೋಗ ವಿಭಿನ್ನ ಕಥಾ ವಸ್ತುವನ್ನು ಒಳಗೊಂಡಿರುವ ಚಿತ್ರಗಳನ್ನು ಸಿನಿ ಪ್ರೇಮಿಗಳಿಗೆ ಉಣಬಡಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ. ಅಷ್ಟೇ ಅಲ್ಲದೆ, ದಕ್ಷಿಣ ಭಾರತದ 4 ಭಾಷೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಗುರಿಯನ್ನು ಹೊಂದಿದೆ.
ಈ ಕುರಿತು ನಿರ್ದೇಶಕಿ ಅಂಜಲಿ ಮೆನನ್ ಮಾತನಾಡಿ, ಸಿನಿಮಾಗಳು ಭಾಷೆ ಎಂಬ ಗೋಡೆಯನ್ನು ದಾಟಿ ಎಲ್ಲರನ್ನು ತಲುಪುತ್ತಿರುವ ಈ ಕಾಲದಲ್ಲಿ ಕೆ ಆರ್ ಜಿ ಸ್ಟುಡಿಯೋಸ್ ಅಂತಹ ಸಂಸ್ಥೆಯೊಡನೆ ನಾನು ಕೈ ಜೋಡಿಸಿರುವುದು ಸಮಂಜಸವೇ ಎನಿಸುತ್ತಿದೆ. ನಮ್ಮ ಈ ಸಹಯೋಗದಲ್ಲಿ ಉನ್ನತ ಮಟ್ಟದ ಚಿತ್ರ ನಿರ್ಮಾಣ ಹಾಗೂ ನಿರ್ದೇಶನವನ್ನು ಎದುರು ನೋಡುತ್ತಿದ್ದೇನೆ ಎಂದರು.
ಕೆ ಆರ್ ಜಿ ಸ್ಟುಡಿಯೋಸ್ ಸಂಸ್ಥಾಪಕರು ಮತ್ತು ನಿರ್ಮಾಪಕರು ಆದ ಕಾರ್ತಿಕ್ ಗೌಡ ಮಾತನಾಡಿ, ಅಂಜಲಿ ಮೆನನ್ ಮತ್ತು ನಮ್ಮ ಸಹಯೋಗ ಕೆ ಆರ್ ಜಿ ಸ್ಟುಡಿಯೋಸ್ ನಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ ಎಂದರೆ ಉತ್ಪ್ರೇಕ್ಷೆಯಲ್ಲ. "ಸಿನಿಮಾ"ಗೆ ಇರುವ ಶಕ್ತಿಯನ್ನು ನಾವು ನಂಬುತ್ತೇವೆ. ಅದು ತೆರೆಯ ಮೇಲೆ ಯಾವ ರೀತಿಯ "ಜಾದುವನ್ನಾದರೂ" ಸೃಷ್ಟಿಸಬಲ್ಲದು. ಈ ನಿಟ್ಟಿನಲ್ಲಿ ನಮ್ಮ ಸಹಯೋಗ ಬಹಳ ಅರ್ಥಪೂರ್ಣವಾಗಲಿದೆ ಎಂದು ನಂಬಿದ್ದೇನೆ. ಈ ಕುರಿತು ನಮ್ಮ ಪಯಣ ಶುರು ಆಗಲು ಕಾರಣ ನನ್ನ ಸ್ನೇಹಿತ ಹಾಗೂ Entertainment Executive ವಿಜಯ್ ಸುಬ್ರಹ್ಮಣ್ಯಂ. ಚಿತ್ರದ ಕಥಾವಸ್ತುವಿಗೆ, ಅದರ ನಿರೂಪಣೆಗೆ ಇರುವ ಶಕ್ತಿಯನ್ನು ಕುರಿತು ಹಾಗೂ ಉನ್ನತ ಮಟ್ಟದ ನಿರ್ಮಾಣವು ಪ್ರೇಕ್ಷಕರ ಮೇಲೆ ಯಾವ ರೀತಿಯ ಪ್ರಭಾವ ಬೀರಲಿದೆ ಎಂದೆಲ್ಲಾ ನಾವು ಚರ್ಚಿಸಿದ್ದೇವೆ. ನಮ್ಮಲ್ಲಿರುವ ಸಾಮರ್ಥ್ಯವನ್ನು ಆತ ಗಮನಿಸಿ,ನಮಗೆ ಮಾರ್ಗದರ್ಶಕನಾಗಿ ಹಾಗೂ ನಮ್ಮೊಡನೆ ಸಹ-ನಿರ್ಮಾಪಕನಾಗಿ ಕೈ ಜೋಡಿಸಿದಕ್ಕಾಗಿ ನಾನು ಆಭಾರಿಯಾಗಿರುತ್ತೇನೆ. "ತುಲ್ಸಿಯಾ" ಸಂಸ್ಥೆಯ ಸ್ಥಾಪಕರಾದ ಚೈತನ್ಯ ಹೆಗಡೆ ಅಂತಹ ಸಮಾನ ಮನಸ್ಕರ ಸಹಕಾರದಿಂದ ಅತ್ಯುನ್ನತ ಗುಣಮಟ್ಟದ ಚಿತ್ರಗಳನ್ನು ನೀಡುವ ಭರವಸೆ ನಮ್ಮ ಸಂಸ್ಥೆ ನೀಡಲಿದೆ.
ಇದನ್ನೂ ಓದಿ: ಧ್ರುವ ಸರ್ಜಾ ವಿಮಾನ ದುರಂತದಿಂದ ಬಚಾವ್.. ಕೂದಲೆಳೆ ಅಂತರದಲ್ಲಿ ಪಾರಾದ ʻಮಾರ್ಟಿನ್ʼ ತಂಡ!!
ಕೆ ಆರ್ ಜಿ ಸ್ಟುಡಿಯೋಸ್ ಸಂಸ್ಥೆಯ ಈ ಸಹಯೋಗ ಕೇವಲ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸುವುದಷ್ಟೇ ಅಲ್ಲದೆ, ಕಥಾ ನಿರೂಪಣೆಯಲ್ಲಿ ಹೊಸ ಆವಿಷ್ಕಾರಗಳನ್ನು ಸ್ಥಳೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ತರಲಿದೆ ಎಂಬ ಭರವಸೆಯನ್ನು ನಾವು ಹೊಂದಿದ್ದೇವೆ. ದಕ್ಷಿಣ ಭಾರತೀಯ ಸಿನಿಮಾದ ಭವಿಷ್ಯವನ್ನು ರೂಪಿಸಲು ಸಜ್ಜಾಗಿರುವ ಕೆ ಆರ್ ಜಿ ಸ್ಟುಡಿಯೋಸ್ ಸಂಸ್ಥೆಗೆ ಗುಣಮಟ್ಟದ ಕಥಾ ವಸ್ತು ಹಾಗೂ ನವೀನ ಕಥಾ ನಿರೂಪಣೆಗೆ ಅಂಜಲಿ ಮೆನನ್ ಜೊತೆಗಿನ ಸಹಯೋಗ ಬಲು ದೊಡ್ಡ ಉದಾಹರಣೆ ಮತ್ತು ಮಾದರಿಯಾಗಲಿದೆ ಎಂದು ನಂಬಿದ್ದೇನೆ.
"ತುಲ್ಸಿಯಾ" ದೇಶದ ಅತ್ಯುನ್ನತ ಬರಹಗಾರರನ್ನು, ನಿರ್ದೇಶಕರನ್ನು, ನಟರನ್ನು ಒಳಗೊಂಡಿರುವಂತಹ "content management" ಸಂಸ್ಥೆಯಾಗಿದೆ. ಈ ಸಂಸ್ಥೆಯನ್ನು ಪ್ರತಿನಿಧಿಸುವ ಅಂಜಲಿ ಮೆನನ್ ಅವರೊಂದಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.