ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್ ಜಿ ಸ್ಟುಡಿಯೋಸ್ ಪದಾರ್ಪಣೆ

KRG Studios: ಅನೇಕ ನವೀನ ಕಥಾ ವಸ್ತುವನ್ನು ಚಿತ್ರರಂಗಕ್ಕೆ ಪರಿಚಯಿಸುವ ಮಹೋದ್ದೇಶವನ್ನು ಕೆಆರ್ ಜಿ ಸ್ಟುಡಿಯೋಸ್ ಹೊಂದಿದೆ.

Written by - YASHODHA POOJARI | Last Updated : Feb 29, 2024, 03:17 PM IST
  • ಕೆಆರ್ ಜಿ ಸ್ಟುಡಿಯೋಸ್
  • ತಮಿಳು, ಮಲಯಾಳಂ ಗೆ ಕೆಆರ್ ಜಿ ಸ್ಟುಡಿಯೋಸ್
  • ಹೆಸರಾಂತ ಚಲನಚಿತ್ರ ನಿರ್ಮಾಣ ಸಂಸ್ಥೆ
ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್ ಜಿ ಸ್ಟುಡಿಯೋಸ್ ಪದಾರ್ಪಣೆ title=

ಬೆಂಗಳೂರು: ಕೆಆರ್ ಜಿ ಸ್ಟುಡಿಯೋಸ್ ಒಂದು ಹೆಸರಾಂತ ಚಿತ್ರ ನಿರ್ಮಾಣ, ವ್ಯಾಪಾರ ಹಾಗೂ ವಿತರಣಾ ಸಂಸ್ಥೆಯಾಗಿದ್ದು, ಹಲವಾರು ಯಶಸ್ವಿ ಚಿತ್ರಗಳನ್ನು ಕೊಡುಗೆಯಾಗಿ ನೀಡಿದೆ‌. ಇದೀಗ ಈ ಸಂಸ್ಥೆ ಬೇರೆ ಭಾಷೆಯ ಚಿತ್ರರಂಗಕ್ಕೂ ಕಾಲಿಡುತ್ತಿದೆ. 

ಸೂಫಿಯುಂ ಸುಜಾತಯುಂ,‌ಹೋಮ್, ಅಂಗಮಲೇ ಬಾಯ್ಸ್ ನಂತಹ ಯಶಸ್ವಿ ಮಲಯಾಳಂ ಚಿತ್ರಗಳನ್ನು ನೀಡಿರುವ Friday Film Houseನೊಂದಿಗೆ "ಪಡಕ್ಕಲಂ" ಎಂಬ ಮಲಯಾಳಂ ಚಿತ್ರಕ್ಕಾಗಿ ಕೆಆರ್ ಜಿ ಕೈ ಜೋಡಿಸಿದೆ.ಈ‌ ಚಿತ್ರಕಥೆಯನ್ನು ಮನು ಸ್ವರಾಜ್ ಬರೆದು ನಿರ್ದೇಶಿಸಲಿದ್ದಾರೆ. 

ಇದನ್ನೂ ಓದಿ: ಸ್ಟಾರ್ ಸುವರ್ಣದಲ್ಲಿ ಬರ್ತಿದೆ ʻಲಕ್ಷ್ಮಿ ಟಿಫನ್ ರೂಮ್ʼ.. ಕನಸುಗಳನ್ನು ಹೊತ್ತ ವರಲಕ್ಷ್ಮಿಯ ಕಥೆ! 

ಬೇಸಿಲ್ ಜೋಸೆಫ್ ನಂತಹ ಖ್ಯಾತ ನಿರ್ದೇಶಕರೊಂದಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿರುವ ಖ್ಯಾತಿ ಇವರದ್ದು. ಕೆ ಆರ್ ಜಿ ಸ್ಟುಡಿಯೋಸ್ ಮತ್ತು Friday Film House  ಸಹಯೋಗದಲ್ಲಿ ಈಗಾಗಲೇ ಮೂಡಿ ಬಂದಿರುವ "ಅಬ್ಬಬ್ಬ" ಎಂಬ ಹಾಸ್ಯಭರಿತ ಕನ್ನಡ ಚಿತ್ರ, "ವಾಲಟಿ" ಎಂಬ ಮಲಯಾಳಂ ಚಿತ್ರದ ಕನ್ನಡ ಡಬ್ಬಿಂಗ್ ಹಾಗೂ ಬಿಡುಗಡೆ ಎಲ್ಲೆಡೆ ಸದ್ದು ಮಾಡಿತ್ತು.

ಇನ್ನು ಹೆಸರಾಂತ ಹಿಂದಿ ಚಿತ್ರ ನಿರ್ಮಾಣ ಸಂಸ್ಥೆಯಾದ ಟಿ.ವಿ.ಎಫ್ ನೊಂದಿಗೆ "ಪೌಡರ್" ಎಂಬ ಕನ್ನಡ ಚಿತ್ರವನ್ನು ಎದುರು ನೋಡುತ್ತಿದೆ. ಅಷ್ಟೇ ಅಲ್ಲದೆ, Bangalore Days, ಉಸ್ತಾದ್ ಹೊಟೇಲ್ ಖ್ಯಾತಿಯ ಅಂಜಲಿ ಮೆನನ್ ನಿರ್ದೇಶನದಲ್ಲಿ ತಮಿಳು ಚಿತ್ರವೊಂದನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೂ ಕಾಲಿಡಲಿದೆ.

ಇದನ್ನೂ ಓದಿ: Ashika Ranganath: ನಟಿ ಆಶಿಕಾ ರಂಗನಾಥ್ ಮನೆಗೆ ಹೊಸ ಅಳಿಯನ ಆಗಮನ.! 

ಇನ್ನು ಇಂತಹ ಅನೇಕ ನವೀನ ಕಥಾ ವಸ್ತುವನ್ನು ಚಿತ್ರರಂಗಕ್ಕೆ ಪರಿಚಯಿಸುವ ಮಹೋದ್ದೇಶವನ್ನು ಕೆಆರ್ ಜಿ ಸ್ಟುಡಿಯೋಸ್ ಹೊಂದಿದೆ. ಈ ಮೂಲಕ ಕನ್ನಡ ಚಿತ್ರಗಳ ಮಾರ್ಕೆಟಿಂಗ್ ವ್ಯಾಪ್ತಿಯನ್ನು ಹೊರ ರಾಜ್ಯಗಳಲ್ಲಿ ವಿಸ್ತರಿಸಲು ಹೊರಟಿದೆ.

ಸದ್ಯಕ್ಕೆ ಕೆಆರ್ ಜಿ ಬ್ಯಾನರ್ ನಲ್ಲಿ ಪೌಡರ್, ಉತ್ತರಕಾಂಡ, ಕಿರಿಕೆಟ್ 11, ಕೆ.ಕೆ ಮುಂತಾದ ಚಿತ್ರಗಳು ತಯಾರಾಗುತ್ತಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News