ಸಖತ್ ಸೌಂಡ್ ಮಾಡುತ್ತಿದೆ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಟ್ರೇಲರ್

ದಿಗಂತ್-ಐಂದ್ರಿತಾ ರೇ ನಾಯಕ-ನಾಯಕಿಯಾಗಿ ನಟಿಸಿರುವ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಟ್ರೇಲರ್ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿದೆ.

Written by - YASHODHA POOJARI | Edited by - Puttaraj K Alur | Last Updated : Mar 31, 2022, 07:35 PM IST
  • ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಟ್ರೇಲರ್
  • ತಾರಾ ಜೋಡಿ ದಿಗಂತ್ - ಐಂದ್ರಿತಾ ರೇ ನಾಯಕ-ನಾಯಕಿಯಾಗಿ ನಟಿಸಿರುವ ಚಿತ್ರ
  • ಏಪ್ರಿಲ್ ಕೊನೆಯಲ್ಲಿ ತೆರೆಗೆ ಬರಲು ಸಜ್ಜಾಗಿರುವ ಚಿತ್ರ ವೀಕ್ಷಿಸಲು ಕಾತುರರರಾಗಿರುವ ಅಭಿಮಾನಿಗಳು
ಸಖತ್ ಸೌಂಡ್ ಮಾಡುತ್ತಿದೆ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಟ್ರೇಲರ್ title=
‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಟ್ರೇಲರ್  

ಬೆಂಗಳೂರು: ಚಿತ್ರ ಬಿಡುಗಡೆಗೂ ಮುನ್ನ ಹೊರಬರುವ ಟ್ರೇಲರ್(Movie Trailer)ನೋಡಿದ ಕೂಡಲೇ ಅಭಿಮಾನಿಗಳಲ್ಲಿ ಸಿನಿಮಾ ನೋಡುವ ಕಾತುರ ಮತ್ತಷ್ಟು ಹೆಚ್ಚುತ್ತದೆ.

ತಾರಾ ಜೋಡಿ ದಿಗಂತ್ - ಐಂದ್ರಿತಾ ರೇ(Diganth & Aindrita Ray)ನಾಯಕ-ನಾಯಕಿಯಾಗಿ ನಟಿಸಿರುವ  ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’(Kshamisi Nimma Khaatheyalli Hanavilla)ಚಿತ್ರದ ಟ್ರೇಲರ್ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟ್ರೇಲರ್‌ಗೆ ಭಾರೀ ಪ್ರಶಂಸೆ ಸಿಕ್ಕಿದೆ. ಇದೇ ಏಪ್ರಿಲ್ ಕೊನೆಯಲ್ಲಿ ಚಿತ್ರ ತೆರೆಗೆ ಬರುತ್ತಿದ್ದು, ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: Upendra: ಏಪ್ರಿಲ್ 1ಕ್ಕೆ ‘ಹೋಮ್ ಮಿನಿಸ್ಟರ್’ ಆಗಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ!

ಸಿಲ್ಕ್ ಮಂಜು ನಿರ್ಮಿಸಿರುವ ಈ ಚಿತ್ರವನ್ನು ವಿನಾಯಕ ಕೋಡ್ಸರ ನಿರ್ದೇಶಿಸಿದ್ದಾರೆ. ರವೀಂದ್ರ ಜೋಶಿ  ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಜ್ವಲ್ ಪೈ ಸಂಗೀತ ನಿರ್ದೇಶನ ಹಾಗೂ ನಂದಕಿಶೋರ್ ಛಾಯಾಗ್ರಹಣವಿರುವ ಈ ಚಿತ್ರದ  ಮುಖ್ಯ ಪಾತ್ರದಲ್ಲಿ ದಿಗಂತ್, ಐಂದ್ರಿತಾ ರೇ, ರಜನಿ ರಾಘವನ್(Ranjani Raghavan) ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: ಟ್ರೋಲ್ ಆಯ್ತು ಉಪೇಂದ್ರ ಹೊಸ ಡಿಪಿ! ಉಪ್ಪಿ ಹೊಸ ಅವತಾರ ಕಂಡು ದಂಗಾದ ಫ್ಯಾನ್ಸ್..

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News