Kushi Trailer: "ಗಂಡ ಹೇಗಿರಬೇಕು ಎನ್ನುವುದನ್ನು ಈ ಸಮಾಜಕ್ಕೆ ತೋರಿಸ್ತೀನಿ"

Kushi Film Trailer : ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಸಿನಿಮಾ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಶಿವ ನಿರ್ವಣ ನಿರ್ದೇಶನದಡಿಯಲ್ಲಿ ಮೂಡಿಬರಲಿರುವ ಈ ಸಿನಿಮಾ ಇದೀಗ ಟ್ರೈಲರ್‌ನಿಂದ ಮತ್ತಷ್ಟು ಗಮನ ಸೆಳೆದಿದೆ.  

Written by - Savita M B | Last Updated : Aug 9, 2023, 09:04 PM IST
  • ರೊಮ್ಯಾಂಟಿಕ್ ಎಂಟರ್‌ಟೈನರ್ 'ಖುಷಿ' ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ
  • ಇದೀಗ ಟ್ರೈಲರ್ ರಿಲೀಸ್ ಆಗಿ ಸದ್ದು ಮಾಡ್ತಿದೆ.
  • ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿದೆ
Kushi Trailer: "ಗಂಡ ಹೇಗಿರಬೇಕು ಎನ್ನುವುದನ್ನು ಈ ಸಮಾಜಕ್ಕೆ ತೋರಿಸ್ತೀನಿ" title=

Kushi Film : ರೊಮ್ಯಾಂಟಿಕ್ ಎಂಟರ್‌ಟೈನರ್ 'ಖುಷಿ' ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದ್ದು, ಇದೀಗ ಟ್ರೈಲರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಈ ಸಿನಿಮಾದಲ್ಲಿ ಜಯರಾಂ, ಸಚಿನ್ ಖಡೇಕರ್, ಮುರಳಿ ಶರ್ಮಾ, ಜ್ಯೂಲಿ ಲಕ್ಷ್ಮಿ, ಅಲಿ, ರೋಹಿಣಿ, ವೆನ್ನಲ ಕಿಶೋರ್ ಸೇರಿದಂತೆ ದೊಡ್ಡ ತಾರಾಗಣವಿದೆ.

ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದು, ಕೆಲ ದಿನಗಳ ಹಿಂದೆ ಸಮಂತಾ ಅನಾರೋಗ್ಯ ಸಮಸ್ಯೆಯಿಂದ ಸಿನಿಮಾ ಚಿತ್ರೀಕರಣ ನಿಂತು ಹೋಗಿತ್ತು. ಇತ್ತೀಚೆಗೆ ಸಿನಿಮಾ ಚಿತ್ರೀಕರಣ ಆರಂಭವಾಗಿ ಬಿಡುಗಡೆ ಹಂತಕ್ಕೆ ಬಂದು ನಿಂತಿದೆ. ಸೆಪ್ಟೆಂಬರ್ 1ಕ್ಕೆ ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರಲಿದೆ.

 

ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥಾಹಂದರವನ್ನು ಹೊಂದಿರುವ ಈ ಸಿನಿಮಾದಲ್ಲಿ ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಮುಖಾಮುಖಿಯಾಗುತ್ತಾರೆ.  ಅವಳನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. 

ಇದನ್ನೂ ಓದಿ-Mahesh Babu : ತಂದೆ ಆಸ್ತಿ ಕೊಡದಿದ್ರು, ನಟ ಕುಬೇರನಾಗಿದ್ದೇಗೆ? ಪ್ರಿನ್ಸ್ ಎಷ್ಟು ಸಾವಿರ ಕೋಟಿ ಆಸ್ತಿ ಒಡೆಯ ಗೊತ್ತಾ?

ಮುಂದೆ ಅವಳು ಮುಸ್ಲಿಂ ಯುವತಿ ಅಲ್ಲ ಎಂಬುದು ತಿಳಿಯುತ್ತದೆ. ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ಆದರೂ ಮದುವೆಯಾದ ಜೋಡಿಗಳು ಎಷ್ಟು ಕಷ್ಟ ಅನುಭವಿಸುತ್ತಾರೆ ಎನ್ನುವದೇ ಖುಷಿ ಸಿನಿಮಾ ಕಥೆ

ಇನ್ನು ಇತ್ತೀಚೆಗೆ ಸಮಂತಾ ನಟಿಸಿದ ಸಿನಿಮಾಗಳು ಅಷ್ಟಾಗಿ ಸದ್ದುಮಾಡಲಿಲ್ಲ. ಚಿತ್ರಗಳು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆದರೂ ಸಹ ಸಿನಿಮಾಗಳು ಸೋಲುಂಡಿದ್ದವು. ಇದಲ್ಲದೇ ವಿಜಯ್‌ ದೇವರಕೊಂಡ ಸಹ ಲೈಗರ್‌ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಮಿಂಚಲು ಪ್ರಯತ್ನಿಸಿದರು ಆದರೆ ಅದು ಸಾಧ್ಯವಾಗಲಿಲ್ಲ. ಹಾಗಾಗಿ ವಿಜಯ್‌ ಸಮಂತಾ ಇಬ್ಬರು ಸೋಲಿನ ಸುಳಿಗೆ ಸಿಲುಕಿದ್ದು, 'ಖುಷಿ' ಸಿನಿಮಾ ಮೂಲಕ ಯಶಸ್ಸಿನ ನಿರೀಕ್ಷೆಯಲ್ಲಿದ್ದಾರೆ. 

ಇದನ್ನೂ ಓದಿ-ಯಶ್‌ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಮಿಂಚಲು ರಾಧಿಕಾ ಸಹಕಾರ ಹೇಗಿತ್ತು ಗೊತ್ತಾ..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News