55 ಲಕ್ಷ ಮೊತ್ತದಲ್ಲಿ ಲೀಲಮ್ಮನ ಸ್ಮಾರಕ: ಗುದ್ದಲಿ ಪೂಜೆ ನೆರವೇರಿಸಿದ ವಿನೋದ್ ರಾಜ್!

Leelavati Memorial: ಚಂದನವನದ ತಾರೆ ಹಿರಿಯ ನಟಿ ಲೀಲಾವತಿ ಅವರ ಸ್ಮಾರಕ ನಿರ್ಮಾಣಕ್ಕೆ ಜನವರಿ 14 ರಂದು ಅವರ ಪುತ್ರ ವಿನೋದ್‌ ರಾಜ್‌ ಚಾಲನೆ ನೀಡಿದ್ದಾರೆ.  

Written by - Zee Kannada News Desk | Last Updated : Jan 14, 2024, 03:30 PM IST
  • ಹಿರಿಯ ನಟಿ ಲೀಲಾವತಿ ಕಳೆದ ವರ್ಷ ಡಿಸೆಂಬರ್‌ 8 ರಂದು ವಯೋಸಹಜ ಖಾಯಿಲೆಯಿಂದ ನಿಧನರಾದರು.
  • ಹಿರಿಯ ನಟಿಯ ಸ್ಮಾರಕ ನಿರ್ಮಾಣ ಹಿನ್ನೆಲೆ ಇಂದಿನ ಪೂಜೆಯ ಕಾರ್ಯದಲ್ಲಿ ವಿನೋದ್ ರಾಜ್, ಪತ್ನಿ ಅನು ಹಾಗೂ ಪುತ್ರ ಯುವರಾಜ್ ಭಾಗಿಯಾಗಿದ್ದಾರೆ.
  • ಅಮ್ಮನವರ ಸಮಾಧಿ ಕೇವಲ ಸಮಾಧಿ ಅಲ್ಲ ಅದು ಒಂದು ಆಧ್ಯಾತ್ಮಿಕ ಕ್ಷೇತ್ರವನ್ನಾಗಿ ಮಾಡುತ್ತೇವೆ ಎಂದು ವಿನೋದ್‌ ರಾಜ್‌ ಮಾತನಾಡಿದ್ದಾರೆ.
55 ಲಕ್ಷ ಮೊತ್ತದಲ್ಲಿ ಲೀಲಮ್ಮನ ಸ್ಮಾರಕ: ಗುದ್ದಲಿ ಪೂಜೆ ನೆರವೇರಿಸಿದ ವಿನೋದ್ ರಾಜ್! title=

South Actress Leelavati Memorial: ಬಹುಭಾಷಾ ಹಿರಿಯ ನಟಿ ಲೀಲಾವತಿ ಕಳೆದ ವರ್ಷ ಡಿಸೆಂಬರ್‌ 8 ರಂದು ವಯೋಸಹಜ ಖಾಯಿಲೆಯಿಂದ ನಿಧನರಾದವರು, ಇಂದು ನೆಲಮಂಗಲದ ತೋಟ ಮನೆಯ ಬಳಿ ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ವಿನೋದ್ ರಾಜ್ ಚಾಲನೆ ನೀಡಿದ್ದಾರೆ. ಜನವರಿ 14 ರಂದು ಲೀಲಾವತಿ ಸ್ಮಾರಕಕ್ಕೆ ವಿನೋದ್ ರಾಜ್ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

ಹಿರಿಯ ನಟಿಯ ಸ್ಮಾರಕ ನಿರ್ಮಾಣ ಹಿನ್ನೆಲೆ ಇಂದಿನ ಪೂಜೆಯ ಕಾರ್ಯದಲ್ಲಿ ವಿನೋದ್ ರಾಜ್, ಪತ್ನಿ ಅನು ಹಾಗೂ ಪುತ್ರ ಯುವರಾಜ್ ಭಾಗಿಯಾಗಿದ್ದಾರೆ. ಸ್ಮಾರಕ ಚಾಲನೆಯ ಬಳಿಕ ಮಾಧ್ಯಮದ ಮುಂದೆ ಮಾತನಾಡಿದ ವಿನೋದ್ ರಾಜ್, ಲೀಲಾವತಿ ಅವರ ಸ್ಮಾರಕ 55 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಈ 120 ದಿನಗಳಲ್ಲಿ ಸ್ಮಾರಕ ಕೆಲಸ ಮುಗಿಯಲಿದೆ ಎಂದು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ಥಿಯೇಟರ್‌ನಲ್ಲಿ ಮಾತ್ರವಲ್ಲ OTTಯಲ್ಲೂ 'ಹನುಮಾನ್' ಆರ್ಭಟ..! ಜೈ ಭಜರಂಗಿ

ವಿನೋದ್‌ ರಾಜ್‌ "ತಾಯಿಯ ಸ್ಮಾರಕವನ್ನು ನನ್ನ ಆಸೆಯಂತೆ ನಿರ್ಮಿಸಲು ನಿರ್ಧರಿಸಿದ್ದೇನೆ. ಲೀಲಾವತಿಯವರ ಮೊದಲ ಸಿನಿಮಾದಿಂದ ಕೊನೆಯ ಚಿತ್ರದವರೆಗೆ ಫೋಟೋ ಗ್ಯಾಲರಿಯನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದೇವೆ. ಅಮ್ಮನವರ ಸಮಾಧಿ ಕೇವಲ ಸಮಾಧಿ ಅಲ್ಲ ಅದು ಒಂದು ಆಧ್ಯಾತ್ಮಿಕ ಕ್ಷೇತ್ರವನ್ನಾಗಿ ಮಾಡುತ್ತೇವೆ. ತಾಯಿಯ ಸ್ಮಾರಕಕ್ಕಾಗಿ ಸರ್ಕಾರದಿಂದ ಯಾವುದೇ ಅಪೇಕ್ಷೆ, ಹಣ ಪಡೆಯದೆ ನಾವೇ ಸಮಾಧಿ ಕಟ್ಟಲು ತೀರ್ಮಾನ ಮಾಡಿದ್ದೇವೆ" ಎಂದು ಮಾತನಾಡಿದ್ದಾರೆ.

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ, "ನಟಿ ಲೀಲಾವತಿ ಅವರು ಮಾಡಿರುವ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಲೀಲಾವತಿ ಅವರು ಎಂದೆಂದಿಗೂ ತುಂಬಿದ ಕೊಡ. ಯಾವಾಗಲೂ ಸಿನಿಮಾಗಳಲ್ಲಿ ನೀತಿ ಪಾಠ ಇರಬೇಕು. ಇವತ್ತಿನ ದಿನಗಳ ಸಿನಿಮಾಗಳಲ್ಲಿ ಆ ಕೊರತೆ ಎದ್ದು ಕಾಣುತ್ತಿದೆ ಎಂದು ಮಾತನಾಡಿದ್ದಾರೆ. ನಾವು ಎಂದಿಗೂ ವಿನೋದ್ ರಾಜ್ ಜೊತೆ ಇರುತ್ತೇವೆ ಅವರು ಸ್ಮಾರಕ ಕೆಲಸ ಬೇಗ ಮುಗಿಸಲಿ" ಎಂದು ಹೇಳಿದ್ದಾರೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News