ಮೊದಲ ಹಂತದ ಚಿತ್ರೀಕರಣ ಮುಗಿಸಿದ ʼಮಾರ್ಗರೇಟ್ ಲವರ್ ಆಫ್ ರಾಮಾಚಾರಿʼ

ಬಹುನಿರೀಕ್ಷಿತ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. 

Written by - YASHODHA POOJARI | Edited by - Krishna N K | Last Updated : Jun 29, 2023, 08:54 PM IST
  • ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ.
  • ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ.
  • ಈ ಚಿತ್ರದಲ್ಲಿ ಯುವ ಪ್ರತಿಭೆ ಅಭಿಲಾಷ್ ಹಾಗೂ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ನಟಿಸಿದ್ದಾರೆ.
ಮೊದಲ ಹಂತದ ಚಿತ್ರೀಕರಣ ಮುಗಿಸಿದ ʼಮಾರ್ಗರೇಟ್ ಲವರ್ ಆಫ್ ರಾಮಾಚಾರಿʼ title=

Margaret Lover of Ramachari : ಯುವ ಪ್ರತಿಭೆ ಅಭಿಲಾಷ್ ಹಾಗೂ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ ಸಹಕಾರ ನೀಡಿದೆ. ಬಹಳ ನೈಜ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಷ್, ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್’, ‘ಲವ್ ಮಾಕ್ಟೇಲ್’, ‘ಬಡವ ರಾಸ್ಕಲ್’, ‘ಗುರುದೇವ್ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಶ್ ಗುರುತಿಸಿಕೊಂಡಿದ್ದಾರೆ. ನಾಗರಹಾವು ಸಿನಿಮಾದಲ್ಲಿ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.

ಇದನ್ನೂ ಓದಿ: ಹೊಸ ಕಾರು ಖರೀದಿಸಿದ ನಟ ನಾಗಾರ್ಜುನ..! ಬೆಲೆ ಕೇಳಿದ್ರೆ ತಲೆ ತಿರುಗುತ್ತೆ

ಅಭಿಲಾಷ್ ರಾಮಾಚಾರಿ ಅಲಿಯಾಸ್ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್ ಮೊಂಥೆರೋ ಮೀರಾ ರಾಘವ್ ರಾಮ್ ಅಲಿಯಾಸ್ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಜಹಾಂಗೀರ್, ಸುಮನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ವನಿತಾ ಎಚ್.ಎನ್. ಹಾಗೂ ಹರೀಶ್ ‘ನಿಹಾಂತ್ ಪ್ರೊಡಕ್ಷನ್ಸ್’ ಮೂಲಕ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಆದಷ್ಟು ಬೇಗ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಆರಂಭಿಸಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News