ಸಕ್ಕತ್ ಸ್ಟುಡಿಯೋದ ಸಖತ್ ಅಪ್ ಡೇಟ್...! 'ಮರ್ಯಾದೆ ಪ್ರಶ್ನೆ' ಶೀಘ್ರದಲ್ಲೇ ರಿಲೀಸ್

Maryade Prashne movie: ಸ್ಯಾಂಡಲ್‌ವುಡ್‌ನಲ್ಲಿ ಅಂಗಳದಲ್ಲಿ 'ಮರ್ಯಾದೆ ಪ್ರಶ್ನೆ’ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ನೋಡುಗನ ಮುಂದೆ ತಂದಿಟ್ಟಿತ್ತು. ಸಾಕಷ್ಟು ಸಿನಿಮೋತ್ಸಾಹವಿರುವ ಆರ್ ಜೆ ಪ್ರದೀಪ್ ಅವರು ತಮ್ಮದೇ ಸಕ್ಕತ್ ಸ್ಟುಡಿಯೋ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ಸಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಸಕ್ಕತ್ ಸ್ಟುಡಿಯೋ, ಈ ಹಿಂದೆ ವೆಬ್‌ಸಿರೀಸ್‌ ಗಮನ ಸೆಳೆದಿದ್ದ ಈ ನಿರ್ಮಾಣ ಸಂಸ್ಥೆ ಈಗ ಸಿನಿರಂಗಕ್ಕೂ ಹೆಜ್ಜೆ ಇಟ್ಟಿದೆ.

Written by - Krishna N K | Last Updated : Sep 7, 2024, 04:49 PM IST
    • 'ಮರ್ಯಾದೆ ಪ್ರಶ್ನೆ’ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ
    • ಆರ್ ಜೆ ಪ್ರದೀಪ್ ಸಕ್ಕತ್ ಸ್ಟುಡಿಯೋ ನಿರ್ಮಾಣ ಸಿನಿಮಾ
    • ಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಸಕ್ಕತ್ ಸ್ಟುಡಿಯೋ
ಸಕ್ಕತ್ ಸ್ಟುಡಿಯೋದ ಸಖತ್ ಅಪ್ ಡೇಟ್...! 'ಮರ್ಯಾದೆ ಪ್ರಶ್ನೆ' ಶೀಘ್ರದಲ್ಲೇ ರಿಲೀಸ್ title=

Maryade Prashne web series : ಸಕ್ಕತ್ ಸ್ಟುಡಿಯೋ ಸಖತ್ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಚಿತ್ರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. RCB ಕಪ್ ಗೆಲ್ಲಬೇಕು ಅಂತಾ ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೋ,  ರ್ಯಾಪರ್‌ ಆಲ್ ಓಕೆ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಡಿಸಿತ್ತು. ಹೀಗೆ ಆರಂಭದಿಂದಲೂ ಬಗೆ ಬಗೆಯಲ್ಲಿ ಪ್ರಚಾರ ಮಾಡುತ್ತಿರುವ ಚಿತ್ರತಂಡ ಗೌರಿ ಗಣೇಶ ಹಬ್ಬದ ದಿನವಾದ ಇಂದು ಥ್ರಿಲ್ಲಿಂಗ್ ಅಪ್ ಡೇಟ್ ಕೊಟ್ಟಿದೆ.

ಮರ್ಯಾದೆ ಪ್ರಶ್ನೆ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ವಿಘ್ನ ವಿಪತ್ತುಗಳಿಲ್ಲದೆ ನಿಮ್ಮೆಲ್ಲರನ್ನು ತಲುಪುತ್ತೇವೆ ಅತಿ ಶೀಘ್ರದಲ್ಲೇ..ಹಬ್ಬ ಮಾಡೋಣ ರೆಡಿ  ಇರಿ..ಇದು ಮರ್ಯಾದೆ ಪ್ರಶ್ನೆ ಎಂದು ಚಿತ್ರತಂಡ ಘೋಷಣೆ ಮಾಡಿದೆ. ಪ್ರತಿಭಾನ್ವಿತರ ದಂಡೇ ಚಿತ್ರದಲ್ಲಿದ್ದು, ಭಿನ್ನ ಪಾತ್ರಗಳಿಗೆ ಹಲವರು ಬಣ್ಣ ಹಚ್ಚಿದ್ದಾರೆ. 

ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಬಳಿಕ ಪವಿತ್ರಾಗೌಡ ಕರೆ ಮಾಡಿದ್ದು ಯಾರಿಗೆ?

ರಾಕೇಶ್‌ ಅಡಿಗ, ಸುನೀಲ್‌ ರಾವ್‌, ಶೈನ್‌‌ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್‌, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್‌ ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಸಕ್ಕತ್‌ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್‌ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಪ್ರದೀಪ್‌ ಅವರೇ ಕಥೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಸಾಥ್ ಕೊಟ್ಟಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ ಪ್ರದೀಪ್. 

ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News