Megha Shetty: ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಮೇಘಾ ಶೆಟ್ಟಿ!

Megha Shetty: ಸ್ಮಾಲ್‌ ಸ್ಕ್ರೀನ್‌ನಲ್ಲಿ ತಮ್ಮ ಅಭಿನಯದ ಮೂಲಕ ಜನರ ಮನಗೆದ್ದ ಮೇಘಾ ಶೆಟ್ಟಿ ಇದೀಗ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆಯಲ್ಲಿ ಮಿಂಚುತ್ತಿರುವ ಮೇಘಾ ಶೆಟ್ಟಿಗೆ ಸದ್ಯ ಬಿಗ್ ಸಿನಿಮಾಗಳ ಆಫರ್ ಬರುತ್ತಿದೆ. 

Written by - Chetana Devarmani | Last Updated : Jun 6, 2022, 05:37 PM IST
  • ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾದ ಮೇಘಾ ಶೆಟ್ಟಿ
  • ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಮೇಘಾ ಶೆಟ್ಟಿ
  • ಹೊಸ ಹೀರೋ ಕವೀಶ್ ಶೆಟ್ಟಿ ಜೊತೆಗೆ ತೆರೆ ಹಂಚಿಕೊಂಡ ನಟಿ
Megha Shetty: ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಮೇಘಾ ಶೆಟ್ಟಿ!  title=
ಮೇಘಾ ಶೆಟ್ಟಿ

Megha Shetty: ಸ್ಮಾಲ್‌ ಸ್ಕ್ರೀನ್‌ನಲ್ಲಿ ತಮ್ಮ ಅಭಿನಯದ ಮೂಲಕ ಜನರ ಮನಗೆದ್ದ ಮೇಘಾ ಶೆಟ್ಟಿ ಇದೀಗ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಜೀ ಕನ್ನಡ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ 'ಜೊತೆ ಜೊತೆಯಲಿ' ಧಾರಾವಾಹಿಯಲ್ಲಿ ಅನು ಸಿರಿಮನೆ ಆಗಿ ಪಾತ್ರವಹಿಸಿದ್ದ ಮೇಘಾ ಶೆಟ್ಟಿ, ಸಿಕ್ಕಾಪಟ್ಟೆ ಫೇಮಸ್ ಆಗುತ್ತಿದ್ದಾರೆ. 

ಇದನ್ನೂ ಓದಿ: Bairagi: ಶಿವಣ್ಣ ಅಭಿನಯದ 123ನೇ ಚಿತ್ರ 'ಬೈರಾಗಿ' ರಿಲೀಸ್‌ ಡೇಟ್‌ ಫಿಕ್ಸ್‌

ಕಿರುತೆರೆಯಲ್ಲಿ ಮಿಂಚುತ್ತಿರುವ ಮೇಘಾ ಶೆಟ್ಟಿಗೆ ಸದ್ಯ ಬಿಗ್ ಸಿನಿಮಾಗಳ ಆಫರ್ ಬರುತ್ತಿದೆ. ಬಿಗ್‌ ಸ್ಕ್ರೀನ್‌ ಮೇಲೆ ರಂಜಿಸುವ ಅವಕಾಶ ಸಿಗುತ್ತಿದ್ದರೂ, ಅನು ಸಿರಿಮನೆಯಾಗಿ ಇಂದಿಗೂ ಎಲ್ಲರನ್ನು ರಂಜಿಸುತ್ತಿದ್ದಾರೆ. ಇದೀಗ ಮೇಘಾ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹೊಸ ವಿಚಾರವನ್ನು ಹಂಚಿಕೊಂಡಿದ್ದಾರೆ. 

 

 

ಸದ್ಯ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ 'ತ್ರಿಬಲ್ ರೈಡಿಂಗ್', ನಟ  ಡಾರ್ಲಿಂಗ್ ಕೃಷ್ಣ ಜೊತೆಗೆ 'ದಿಲ್ ಪಸಂದ್‌' ಸಿನಿಮಾಗಳಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಹಾಗೆಯೇ, ಹೊಸ ಹೀರೋ ಕವೀಶ್ ಶೆಟ್ಟಿ ಜೊತೆಗೆ ಪ್ಯಾನ್ ಇಂಡಿಯಾ ಮೂವಿಯಲ್ಲೂ ಮೇಘಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. 

ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ ಕಾಂಬಿನೇಷನ್‌ನ ಈ ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ಅನ್ನು ನಟ, ನಿರ್ದೇಶಕ ರಿಷಬ್ ಶೆಟ್ಟಿ ರಿವೀಲ್ ಮಾಡಿದ್ದಾರೆ. 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಎಂಬ ಪ್ಯಾನ್‌ ಇಂಡಿಯಾ ಸಿನಿಮಾ ಇದಾಗಿದ್ದು, ಟೈಟಲ್‌ ರಿವೀಲ್‌ ಮಾಡಿದ ರಿಷಬ್‌ ಶೆಟ್ಟಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ತಲೆಗೆ ಹುಳ ಬಿಡ್ತಿದೆ ಉಪೇಂದ್ರ ನಿರ್ದೇಶನದ "UI" ಚಿತ್ರದ ಹೊಸ ಪೋಸ್ಟರ್

ಸಡಗರ ರಾಘವೇಂದ್ರ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ನಟಿಸುತ್ತಿರುವ ಆಫ್ಟರ್ ಆಪರೇಷನ್ ಲಂಡನ್ ಕೆಫೆ ಸಿನಿಮಾ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣಲಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News