ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ..!? ಯಾರಾಗ್ತಾರೆ ಕಮಲ ಪಡೆ ನೂತನ ಸಾರಥಿ..?

Modi 3.0 Cabinet :ಇನ್ನೇನು ಕೆಲವೇ ಕ್ಷಣಗಳಲ್ಲಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಬಾರಿ ಮೋದಿ ಸಂಪುಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಹ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಮುಂದೆ ಕಮಲಪಡೆಯ ನೂತನ ಸಾರಥಿ ಯಾರಾಗ್ತಾರೆ ಅಂತ ಕಾರ್ಯಕರ್ತರು ಮತ್ತು ನಾಯಕರು ಯೋಚಿಸುತ್ತಿದ್ದಾರೆ.

Written by - Krishna N K | Last Updated : Jun 9, 2024, 06:29 PM IST
    • ಕೇಂದ್ರ ಸಚಿವ ಸಂಪುಟಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಯ್ಕೆ
    • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಯಾರಿಗೆ ಹಸ್ತಾಂತರವಾಗಲಿದೆ?
    • ಇಂದು 60ಕ್ಕೂ ಹೆಚ್ಚು ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ..!? ಯಾರಾಗ್ತಾರೆ ಕಮಲ ಪಡೆ ನೂತನ ಸಾರಥಿ..? title=

BJP Prasident : ಕೇಂದ್ರ ಮತ್ತು ರಾಜ್ಯಗಳಲ್ಲಿ ರಾಜಕೀಯ ಬೆಳವಣಿಗೆಗಳು ವೇಗವಾಗಿ ಬದಲಾಗುತ್ತಿವೆ. ಮೋದಿ 3.0 ಆಡಳಿತದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಯಾರಿಗೆ ಹಸ್ತಾಂತರವಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ.   

ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಿದೆ. ಭಾರತೀಯ ಜನತಾ ಪಕ್ಷವು ಅತಿ ಹೆಚ್ಚು ಸಂಸದ ಸ್ಥಾನಗಳನ್ನು ಗೆದ್ದು ಮೈತ್ರಿಯಲ್ಲಿ ಮೊದಲ ದೊಡ್ಡ ಪಕ್ಷವಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತು. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಗದ್ದುಗೆ ಏರುತ್ತಿದ್ದಾರೆ. ಇಂದು ಪ್ರಧಾನಿ ಮೋದಿ ಜತೆಗೆ 60ಕ್ಕೂ ಹೆಚ್ಚು ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. 

ಇದನ್ನೂ ಓದಿ: ಮೋದಿ ನೂತನ ಸಂಪುಟಕ್ಕೆ ಅಣ್ಣಾಮಲೈ ಸೇರ್ಪಡೆ..! ಇಂದು ಅಧಿಕಾರ ಸ್ವೀಕಾರ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮೋದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ನೂತನ ಅಧ್ಯಕ್ಷರಾಗಿ ಯಾರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮೋದಿ ದೇಶ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಇನ್ನು ನಡ್ಡಾ ಅವರ ಐದು ವರ್ಷಗಳ ಅಧಿಕಾರಾವಧಿಯಲ್ಲಿ, ಆರು ತಿಂಗಳ ಕಾರ್ಯಾಧ್ಯಕ್ಷರು ಸೇರಿದಂತೆ, 29 ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣೆಗಳು ನಡೆದವು, ಅದರಲ್ಲಿ ಬಿಜೆಪಿ ಏಕಾಂಗಿಯಾಗಿ ಅಥವಾ ಮಿತ್ರಪಕ್ಷಗಳೊಂದಿಗೆ 16 ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿತು, ಅವರಿಗೆ 55% ಸ್ಟ್ರೈಕ್ ರೇಟ್ ನೀಡಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News