ಧ್ರುವ ಸರ್ಜಾರ ಬಹು ನಿರೀಕ್ಷಿತ "ಭರ್ಜರಿ" ಆಟ ಶುರು

ಅಭಿಮಾನಿಗಳಿಗಾಗಿ ಬೆಂಗಳೂರಿನ ಗೌಡನ ಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಬೆಳಿಗ್ಗೆ 06:30ಕ್ಕೆ ವಿಶೇಷ ಪ್ರದರ್ಶನ ಆಯೋಜಿಸಿದ ಚಿತ್ರತಂಡ.

Last Updated : Sep 15, 2017, 11:25 AM IST
ಧ್ರುವ ಸರ್ಜಾರ ಬಹು ನಿರೀಕ್ಷಿತ "ಭರ್ಜರಿ" ಆಟ ಶುರು title=
Pic : Twitter

ಬೆಂಗಳೂರು: ಮೂರು ವರ್ಷಗಳ ನಂತರ ತೆರೆ ಕಾಣುತ್ತಿರುವ ಧ್ರುವ ಸರ್ಜಾ ಅವರ 'ಭರ್ಜರಿ' ಸಿನಿಮಾಗೆ ಎಲ್ಲೆಡೆ ಹರ್ಷ ವ್ಯಕ್ತವಾಗಿದೆ. ಇಂದು ಬೆಳಗ್ಗಿನಿಂದಲೇ ಅಭಿಮಾನಿಗಳು ಧ್ರುವ ಸರ್ಜಾ ಅವರ ಕಟ್ ಔಟ್ಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಭರ್ಜರಿ ಸಿನಿಮಾಕ್ಕೆ ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ.

ಅಭಿಮಾನಿಗಳಿಗಾಗಿ ಬೆಂಗಳೂರಿನ ಗೌಡನ ಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಬೆಳಿಗ್ಗೆ 06:30ಕ್ಕೆ ವಿಶೇಷ ಪ್ರದರ್ಶನವನ್ನು ಚಿತ್ರತಂಡ ಆಯೋಜಿಸಿತ್ತು. 

ಬಹಳ ದಿನಗಳಿಂದ ಕಾಯುತ್ತಿದ್ದ ಅಭಿಮಾನಿಗಳನ್ನು ಭರ್ಜರಿ ಸಿನಿಮಾ ಫುಲ್ ಫಿದಾ ಮಾಡಿದೆ. ಸ್ಯಾಂಡಲ್ ವುಡ್ ನಲ್ಲಿ 'ಭರ್ಜರಿ' ಹೌಸ್ ಫುಲ್ ಪ್ರದರ್ಶನಗೊಳ್ಳುತ್ತಿದೆ.

ಆರ್.ಎಸ್.ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗಿರುವ ಚೇತನ್ ನಿರ್ದೇಶನದ ಭರ್ಜರಿ ಚಿತ್ರದಲ್ಲಿ ರಚಿತಾ ರಾಮ್ ಮತ್ತು ಹರಿಪ್ರಿಯಾ ಧ್ರುವ ಸರ್ಜಾಗೆ ನಾಯಕಿಯರಾಗಿ ಪಾತ್ರವಹಿಸಿದ್ದಾರೆ.

Trending News