ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ನಿಧನಕ್ಕೆ ಕಂಬನಿ ಮಿಡಿದ ನಾಗತಿಹಳ್ಳಿ ಚಂದ್ರಶೇಖರ್ 

ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರ ಅಕಾಲಿಕ ನಿಧನ ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.ಇದೆ ವೇಳೆ ಅವರ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕಂಬನಿ ಮಿಡಿದಿದ್ದಾರೆ.

Written by - Manjunath N | Last Updated : Jul 13, 2024, 09:27 PM IST
  • ಹಸನ್ಮುಖಿಯಾಗಿ ಮಲ್ಲಿಗೆ ಮುಡಿದು ಶವಪೆಟ್ಟಿಗೆ ಯೊಳಗೆ ಮಲಗಿದ್ದ ಅಪರ್ಣಾಳನ್ನು ಕಂಡಾಗ ಅಸಂಖ್ಯ ನೆನಪುಗಳು ಅಶ್ರು ರೂಪದಲ್ಲಿ ಹೊರಬರುತ್ತಿವೆ.
  • ನನ್ನ ಬರವಣಿಗೆ ಎಂದರೆ ಆಕೆಗೆ ಅಚ್ಚುಮೆಚ್ಚು
  • ನನ್ನ ಕಥೆ-ಕಾದಂಬರಿಗಳ ಕೆಲ ಸಾಲುಗಳನ್ನು ಕಂಠಪಾಠ ಮಾಡಿದಂತೆ ಒಪ್ಪಿಸುತ್ತಿದ್ದಳು.
ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ನಿಧನಕ್ಕೆ ಕಂಬನಿ ಮಿಡಿದ ನಾಗತಿಹಳ್ಳಿ ಚಂದ್ರಶೇಖರ್  title=

ಬೆಂಗಳೂರು: ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರ ಅಕಾಲಿಕ ನಿಧನ ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.ಇದೆ ವೇಳೆ ಅವರ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಊಟಕ್ಕೆ ಬಂದು ಗೆಳೆಯನ ಪತ್ನಿಯನ್ನೇ ಪಟಾಯಿಸಿ ಗರ್ಭಿಣಿಯನ್ನಾಗಿಸಿದ ಟೀಂ ಇಂಡಿಯಾದ ಕ್ರಿಕೆಟಿಗ ಈತನೇ!

ಇನ್ನೇನು ಕಾರ್ಯಕ್ರಮಕ್ಕೆ ಹೊರಡಬೇಕೆಂಬಂತೆ ಹಸನ್ಮುಖಿಯಾಗಿ ಮಲ್ಲಿಗೆ ಮುಡಿದು ಶವಪೆಟ್ಟಿಗೆ ಯೊಳಗೆ ಮಲಗಿದ್ದ ಅಪರ್ಣಾಳನ್ನು ಕಂಡಾಗ ಅಸಂಖ್ಯ ನೆನಪುಗಳು ಅಶ್ರು ರೂಪದಲ್ಲಿ ಹೊರಬರುತ್ತಿವೆ. ನನ್ನ ಬರವಣಿಗೆ ಎಂದರೆ ಆಕೆಗೆ ಅಚ್ಚುಮೆಚ್ಚು. ನನ್ನ ಕಥೆ-ಕಾದಂಬರಿಗಳ ಕೆಲ ಸಾಲುಗಳನ್ನು ಕಂಠಪಾಠ ಮಾಡಿದಂತೆ ಒಪ್ಪಿಸುತ್ತಿದ್ದಳು.’ಚುಕ್ಕಿ ಚಂದ್ರಮರ ನಾಡಿನಲ್ಲಿ’ ಆಕೆಯ ಮೆಚ್ಚಿನ ಕಾದಂಬರಿ.ಅದನ್ನು ಯಾವುದೋ ಹುಡುಗಿ ಬರೆದು ಅದು ನನ್ನ ಹೆಸರಲ್ಲಿ ಅಚ್ಚಾಗಿದೆ ಎಂದು ಛೇಡಿಸುತ್ತಿದ್ದಳು.ಆಗ ನಾನು ಬರೆದ ಕಾಗದಗಳನ್ನು ಬಹಳ ಕಾಲ ಕಾದಿರಿಸಿದ್ದಳೆಂದು ವಸ್ತಾರೆ ಹೇಳುತ್ತಿದ್ದರು ಎಂದು ಅಪರ್ಣಾ ಅವರ ಜೊತೆಗಿನ ನೆನಪುಗಳನ್ನು ಸ್ಮರಿಸಿದ್ದಾರೆ.

ಇದನ್ನೂ ಓದಿ: ಗಿಲ್-ಜೈಸ್ವಾಲ್ ಸ್ಫೋಟಕ ಬ್ಯಾಟಿಂಗ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್’ಗಳ ಭರ್ಜರಿ ಜಯ

ಅಲ್ಪಕಾಲೀನ ಅಮೆರಿಕಾ ಬದುಕು ಅವಳಿಗೆ ಕಹಿ ಉಣಿಸಿತ್ತು. ಸಾಹಿತ್ಯ, ಸಂಗೀತ, ರಂಗಭೂಮಿ, ಕಿರುತೆರೆ, ಸಿನಿಮಾ ಹೀಗೆ ಬಹುವಿಧ ಆಸಕ್ತಿಗಳಿಂದ  ಅಲಂಕೃತಳಾಗಿದ್ದ ಅಪರ್ಣಾ, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಅಸ್ಖಲಿತ, ಪ್ರೌಢ ಮತ್ತು ಭಾವಪೂರ್ಣನಿರೂಪಣೆಗೆ ಮಾದರಿಯಾಗಿದ್ಜಳು. ಆಕೆಯ ಅನಾರೋಗ್ಯದ ಸಂಗತಿಯನ್ನು ನೆರೆಮನೆಯಲ್ಲಿರುವ ನನಗೂ ತಿಳಿಸದ ಸ್ವಾಭಿಮಾನಿ. ಮುಂಜಾನೆಯ ನನ್ನ ಕೆಲವು ವಾಕಿಂಗ್ ನಲ್ಲಿ ಮಹಡಿಯಿಂದ ಮುಗುಳ್ನಗೆಯೊಡನೆ ಕೈ ಬೀಸುತ್ತಿದ್ದ ಈ ಸಾಹಿತ್ಯಾಭಿಮಾನಿ ಇನ್ನಿಲ್ಲ. ತನ್ನ ಬದುಕೆಂಬ ಸಮಾರಂಭದ ಕೊನೆಯ ವಂದನಾರ್ಪಣೆ ಹೇಳಿ ಹೋದ ಅಪರ್ಣಾಗೆ ನನ್ನ ಅಶ್ರುತರ್ಪಣ ಎಂದು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News