ಬೆಂಗಳೂರು: ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ (Puneeth Rajkumar) ಹೆಸರಿನಲ್ಲಿ ಉಪಗ್ರಹ ತಯಾರಿಸಲಾಗುತ್ತಿದೆ. ಪುನೀತ್ ರಾಜ್ಕುಮಾರ್ ಹೆಸರಿನ ಈ ಉಪಗ್ರಹ ಉಡಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಇದನ್ನೂ ಓದಿ: ಸಿಂಪಲ್ ಸುನಿ ಹೊಸ ಸಿನಿಮಾ 'ಗತವೈಭವ'.. ಸಿನಿಪ್ರಿಯರ ಕುತೂಹಲ ಹೆಚ್ಚಿಸಿದ ಟೀಸರ್!
ಈ ಬಗ್ಗೆ ಸಚಿವ ಅಶ್ವತ್ಥ ನಾರಾಯಣ (Ashwath Narayan) ಹೇಳಿಕೆ ನೀಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ನಿಜಕ್ಕೂ ಖುಷಿಪಟ್ಟಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಉಪಗ್ರಹ ಉಡಾವಣೆ ಯೋಜನೆಗೆ ಸಚಿವರೇ ಚಾಲನೆ ನೀಡಿದ್ದಾರೆ.
ಇಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರಿನ ಮಲ್ಲೇಶ್ವರದ 18ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಸಚಿವ ಅಶ್ವತ್ಥ ನಾರಾಯಣ ಭೇಟಿ ನೀಡಿದ್ದರು.
ಇದನ್ನೂ ಓದಿ: Radhe Shyam: 'ರಾಧೆ ಶ್ಯಾಮ್' ಚಿತ್ರತಂಡ ಸೇರಿದ ಸೆಂಚುರಿ ಸ್ಟಾರ್ ಶಿವರಾಜಕುಮಾರ್
ಸ್ವಾತಂತ್ರ್ಯ ಬಂದು 75 ವರ್ಷ ಆಗುತ್ತಿರೋ ಹಿನ್ನೆಲೆಯಲ್ಲಿ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ 75 ಉಪಗ್ರಹಗಳನ್ನ (Satellite) ಉಡಾವಣೆ ಮಾಡುತ್ತಿದೆ. ಇದರಲ್ಲಿ ಒಂದು ಉಪಗ್ರಹವನ್ನು ರಾಜ್ಯ ಸರ್ಕಾರದ ಸಹಕಾರದಲ್ಲಿ ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ದೇಶದಲ್ಲಿ ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿದೆ.
ಉಪಗ್ರಹ ತಯಾರಿಕೆಗಾಗಿ ಬೆಂಗಳೂರಿನ ಸರಕಾರಿ ಶಾಲೆಯ 100 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದಕ್ಕೆ 'ಪುನೀತ್ ರಾಜ್ ಕುಮಾರ್ ಉಪಗ್ರಹ' ಎಂದು ಹೆಸರಿಡಲಾಗಿದೆ.
ಅಕ್ಟೋಬರ್ 29, 2021 ರಂದು ನಟ ಪುನೀತ್ ರಾಜ್ಕುಮಾರ್ ವಿಧಿವಶರಾದರು. ಅಪ್ಪು ನಿಧನದ ನಂತರ ರಾಜ್ಯದ ಅನೇಕ ರಸ್ತೆಗಳಿಗೆ, ವೃತ್ತಗಳಿಗೆ ಅವರ ಹೆಸರನ್ನು ಇಡಲಾಯಿತು. ಇದೀಗ ಉಪಗ್ರಹ ಉಡಾವಣೆ ಯೋಜನೆಗೂ ಪುನೀತ್ ಹೆಸರಿಟ್ಟಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.