ದಸರಾದಂದು ಸೆಟ್ಟೇರಿದ ನ್ಯಾಚುರಲ್ ಸ್ಟಾರ್ ನಾನಿ 31ನೇ ಸಿನಿಮಾ

Written by - YASHODHA POOJARI | Edited by - Manjunath N | Last Updated : Oct 26, 2023, 12:26 AM IST
  • ನಿರ್ಮಾಪಕ ಡಿವಿವಿ ದಾನಯ್ಯ ಚಿತ್ರಕಥೆಯನ್ನು ನಿರ್ದೇಶಕರಿಗೆ ಹಸ್ತಾಂತರಿಸಿದರು
  • ನಿರ್ಮಾಪಕ ದಿಲ್ ರಾಜು ಕ್ಯಾಮೆರಾಗೆ ಚಾಲನೆ ನೀಡಿದ್ರೆ, ವಿವಿ ವಿನಾಯಕ್ ಕ್ಲಾಪ್ ಮಾಡಿದರು
  • ನಟ ಎಸ್.ಜೆ.ಸೂರ್ಯ ಸೇರಿದಂತೆ ಇಡೀ ಚಿತ್ರತಂಡ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು
ದಸರಾದಂದು ಸೆಟ್ಟೇರಿದ ನ್ಯಾಚುರಲ್ ಸ್ಟಾರ್ ನಾನಿ 31ನೇ ಸಿನಿಮಾ title=

ನ್ಯಾಚುರಲ್ ಸ್ಟಾರ್ ನಾನಿ ಈಗ ಸಿಕ್ಕಾಪಟ್ಟೆ ಬ್ಯೂಸಿಯಾಗಿದ್ದಾರೆ. ದಸರಾ ಸಿನಿಮಾದ ಬ್ಲಾಕ್ ಬಸ್ಟರ್ ಹಿಟ್ ಬಳಿಕ ಅವರು ಸಾಲು ಸಾಲು ಚಿತ್ರಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಮೊನ್ನೆಯಷ್ಟೇ ನಾನಿ 31ನೇ ಸಿನಿಮಾ ಅನೌನ್ಸ್ ಆಗಿತ್ತು. ಈ ಹಿಂದೆ ಕಾಮಿಡಿ ಕಥಾಹಂದರದ ಅಂಟೆ ಸುಂದರಾನಿಕಿ ಎಂಬ ಚಿತ್ರ ನಿರ್ದೇಶನ ಮಾಡಿದ್ದ ವಿವೇಕ್ ಆತ್ರೇಯಾ ಮತ್ತೊಮ್ಮೆ ನಾನಿ ಜೊತೆ ಕೈ ಜೋಡಿಸಿದ್ದಾರೆ. ದಸರಾ ಹಬ್ಬದ ಅಂಗವಾಗಿ ಹೈದ್ರಾಬಾದ್ ನಲ್ಲಿ ’ಸೂರ್ಯನ ಶನಿವಾರ’ ಸಿನಿಮಾ ಸೆಟ್ಟೇರಿದೆ.

ಇದನ್ನೂ ಓದಿ : ಟಗರು ಪಲ್ಯ ಚಿತ್ರತಂಡದ ಜೊತೆ ಜೀ ಕನ್ನಡ ನ್ಯೂಸ್ ಸಂದರ್ಶನ

ನಿರ್ಮಾಪಕ ಡಿವಿವಿ ದಾನಯ್ಯ ಚಿತ್ರಕಥೆಯನ್ನು ನಿರ್ದೇಶಕರಿಗೆ ಹಸ್ತಾಂತರಿಸಿದರು. ನಿರ್ಮಾಪಕ ದಿಲ್ ರಾಜು ಕ್ಯಾಮೆರಾಗೆ ಚಾಲನೆ ನೀಡಿದ್ರೆ, ವಿವಿ ವಿನಾಯಕ್ ಕ್ಲಾಪ್ ಮಾಡಿದರು. ನಟ ಎಸ್.ಜೆ.ಸೂರ್ಯ ಸೇರಿದಂತೆ ಇಡೀ ಚಿತ್ರತಂಡ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ನೆನೆಸಿದ ಖರ್ಜೂರ ತಿಂದರೆ ಆರೋಗ್ಯಕ್ಕಿವೆ ಹಲವಾರು ಲಾಭಗಳು..! ತಪ್ಪದೇ ಸೇವಿಸಿ 

’ಸೂರ್ಯನ ಶನಿವಾರ’ ಪಕ್ಕ ಮಾಸ್ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಈ ಸಿನಿಮಾದ ಕಥೆ ಹಾಗೂ ಪಾತ್ರಕ್ಕಾಗಿ ನಾನಿ ಸಾಕಷ್ಟು ವರ್ಕೌಟ್ ಮಾಡುತ್ತಿದ್ದಾರೆ. ಪ್ರಿಯಾಂಕಾ ಅರುಳ್ ಮೋಹನ್ ನಾಯಕಿಯಾಗಿದ್ದು, ತಮಿಳು ಸ್ಟಾರ್ ನಟ ಎಸ್‌ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ಜೇಕ್ಸ್ ಬಿಜಾಯ್ ಸಂಗೀತ, ಮುರಳಿ ಜಿ ಛಾಯಾಗ್ರಹಣವಿದೆ.

’ಸೂರ್ಯನ ಶನಿವಾರ’ ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಮೂಡಿಬರಲಿದೆ. ತ್ರಿಬಲ್ ಆರ್ ಸೇರಿದಂತೆ ಹಲವರು ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಡಿಡಿವಿ ಎಂಟರ್ ಟೈನರ್ ಬ್ಯಾನರ್ ನಡಿಯಲ್ಲಿ ದಾನಯ್ಯ ಹಾಗೂ ಕಲ್ಯಾಣ್ ದಾಸರಿ ’ಸೂರ್ಯನ ಶನಿವಾರ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News