ತೆರೆಗೆ ಬರಲಿದೆ ಶಿವಣ್ಣ - ಪ್ರಭುದೇವ ಅಭಿನಯದ ಚಿತ್ರ , ಭಟ್ರ ನಿರ್ದೇಶನದಲ್ಲಿ ಭರದಿಂದ ಸಾಗಿದೆ ಚಿತ್ರೀಕರಣ

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.  

Written by - YASHODHA POOJARI | Edited by - Ranjitha R K | Last Updated : Aug 29, 2022, 02:48 PM IST
  • ಶಿವಣ್ಣ, ಪ್ರಭುದೇವ ನಟನೆಯ ಚಿತ್ರ
  • ಬೆಂಗಳೂರಿನಲ್ಲಿ ನಡೆಯುತ್ತಿದೆ ಚಿತ್ರೀಕರಣ
  • ಯೋಗರಾಜ್ ಭಟ್ ನಿರ್ದೇಶನದ ಸಿನಿಮಾ
 ತೆರೆಗೆ ಬರಲಿದೆ ಶಿವಣ್ಣ - ಪ್ರಭುದೇವ ಅಭಿನಯದ ಚಿತ್ರ ,  ಭಟ್ರ ನಿರ್ದೇಶನದಲ್ಲಿ ಭರದಿಂದ ಸಾಗಿದೆ ಚಿತ್ರೀಕರಣ title=
shivarajkumars new film shooting

ಬೆಂಗಳೂರು :  ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ.

ಹೌದು, ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. 

ಇದನ್ನೂ ಓದಿ : "700 ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕೆ ನನಗೆ ವಿಷಾದವಿಲ್ಲ" ಎಂದ ನಟಿ

ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ. ಚಿತ್ರಕ್ಕೆ ಇನ್ನೂ ಯಾವುದೇ ಹೆಸರಿಟ್ಟಿಲ್ಲ. 

ಶಿವಣ್ಣ - ಪ್ರಭುದೇವ- ಯೋಗರಾಜ್ ಭಟ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಂತಹ ಸಿನಿ ದಿಗ್ಗಜರ ಕಾಂಬಿನೇಶನ್‌ನಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಅಪರೂಪದ ಚಿತ್ರವನ್ನು ಕಣ್ತುಂಬಿಕೊಳ್ಳಲು ಕನ್ನಡ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ : ‘ತಾಯಿ ಬರ್ತ್ ಡೇಗೆ ಮಗನ ಭರ್ಜರಿ ಗಿಫ್ಟ್’: ಸುಮಲತಾ ಹುಟ್ಟುಹಬ್ಬದಂದು ಅಭಿಷೇಕ್ ಸಿನಿಮಾದ ಪೋಸ್ಟರ್ ರಿಲೀಸ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News