‘ಫೋಟೋ’ ಟ್ರೇಲರ್ ಬಿಡುಗಡೆ : ಯುವ ಪ್ರತಿಭೆ ಉತ್ಸವ್ ಕನಸಿಗೆ ಡಾಲಿ ಧನಂಜಯ್-ಲೂಸಿಯಾ ಪವನ್ ಸಾಥ್

ನಟರಾಕ್ಷಸ ಡಾಲಿ ಧನಂಜಯ್ ಹಾಗೂ ಲೂಸಿಯಾ ಖ್ಯಾತಿಯ ಪವನ್ ಕುಮಾರ್ ಟ್ರೇಲರ್ ರಿಲೀಸ್ ಮಾಡಿದ್ದಾರೆ. ಶ್ರೀರಂಗಪಟ್ಟದಲ್ಲಿರುವ ಪ್ರಕಾಶ್ ರಾಜ್ ಒಡೆತನದ ನಿರ್ದಿಗಂತ ಫಾರಂ ಹೌಸ್ ನಲ್ಲಿ ಫೋಟೋ ಟ್ರೇಲರ್ ಬಿಡುಗಡೆಯಾಗಿದೆ.  

Written by - Ranjitha R K | Last Updated : Feb 22, 2024, 04:42 PM IST
  • 'ಫೋಟೋ'ಗೆ ಸಾಥ್ ಕೊಟ್ಟ ಡಾಲಿ ಧನಂಜಯ್-ಲೂಸಿಯಾ ಪವನ್..
  • ಫೋಟೋ’ ಮೊದಲ ನೋಟ ರಿಲೀಸ್
  • ಮಾರ್ಚ್ 15ಕ್ಕೆ ಪ್ರೇಕ್ಷಕರ ಎದುರು ಬರ್ತಿದೆ ಚಿತ್ರ
 ‘ಫೋಟೋ’ ಟ್ರೇಲರ್ ಬಿಡುಗಡೆ : ಯುವ ಪ್ರತಿಭೆ ಉತ್ಸವ್ ಕನಸಿಗೆ ಡಾಲಿ ಧನಂಜಯ್-ಲೂಸಿಯಾ ಪವನ್ ಸಾಥ್ title=

ಬೆಂಗಳೂರು : ಕನ್ನಡದಲ್ಲೀಗ ಕಂಟೆಂಟ್ ಆಧಾರಿತ ಸಿನಿಮಾಗಳ ಪ್ರಭೆ ಜೋರಾಗಿದೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಚಿತ್ರ ಫೋಟೋ. ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರ ಮೆಚ್ಚುಗೆ ಪಡೆದ ಈ ಸಿನಿಮಾದ ಮೊದಲ ನೋಟ ಅನಾವರಣಗೊಂಡಿದೆ. ನಟರಾಕ್ಷಸ ಡಾಲಿ ಧನಂಜಯ್ ಹಾಗೂ ಲೂಸಿಯಾ ಖ್ಯಾತಿಯ ಪವನ್ ಕುಮಾರ್ ಟ್ರೇಲರ್ ರಿಲೀಸ್ ಮಾಡಿದ್ದಾರೆ. ಶ್ರೀರಂಗಪಟ್ಟದಲ್ಲಿರುವ ಪ್ರಕಾಶ್ ರಾಜ್ ಒಡೆತನದ ನಿರ್ದಿಗಂತ ಫಾರಂ ಹೌಸ್ ನಲ್ಲಿ ಫೋಟೋ ಟ್ರೇಲರ್ ಬಿಡುಗಡೆಯಾಗಿದೆ.

ಟ್ರೇಲರ್ ಬಿಡುಗಡೆ ಬಳಿಕ ಡಾಲಿ ಧನಂಜಯ್ ಮಾತನಾಡಿ, ಉತ್ಸವ್ ಅವರು ತುಂಬಾ ಚೆನ್ನಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ತುಂಬಾ ಖುಷಿ ವಿಚಾರ ಏನೆಂದರೆ ಇತ್ತೀಚೆಗೆ ಬರುತ್ತಿರುವ ಯುವ ನಿರ್ದೇಶಕರು ಒಳ್ಳೊಳ್ಳೆ ಸಿನಿಮಾಗಳನ್ನು ಬೇರೆ ಬೇರೆ ರೀತಿಯ ಸಿನಿಮಾಗಳನ್ನು ನಮ್ಮ ಕನ್ನಡದ ಜನಗಳ ಮುಂದೆ ಬರುತ್ತಿದ್ದಾರೆ. ಅದು ತುಂಬಾ ಖುಷಿ ವಿಚಾರ ಎಂದಿದ್ದಾರೆ.

ಇದನ್ನೂ ಓದಿ : Aishani Shetty : ತುಳುನಾಡಿನ ಸೊಬಗನ್ನು ಬೀರುವ ಫೋಟೋಶೂಟ್ ಮಾಡಿಸಿದ ವಾಸ್ತು ಪ್ರಕಾರದ ಹುಡುಗಿ

ಲೂಸಿಯಾ ಪವನ್ ಮಾತನಾಡಿ, ಫೋಟೋ ಸಿನಿಮಾದ ಪೋಸ್ಟರ್ ನ್ನು ಸೋಷಿಯಲ್ ಮೀಡಿಯಾದಲ್ಲಿ ಎಲ್ಲರೂ ಪೋಸ್ಟ್ ಮಾಡುತ್ತಿದ್ದರು. ತುಂಬಾ ಚೆನ್ನಾಗಿದೆ ಅಂತಾ ಫೀಡ್ ಬ್ಯಾಕ್ ಬರುತ್ತಿತ್ತು. ನಾನು ಸಿನಿಮಾ ನೋಡಿದ್ದೇನೆ,.ತುಂಬಾ ಪ್ರಭಾವ ಬೀರಿತು ಎದ್ನು ಹೇಳಿದ್ದಾರೆ.  

ನನಗೆ ಉತ್ಸವ್ ಸಿನಿಮಾನಾ ಬಹಳ ದಿನಗಳಿಂದ ತೋರಿಸುವ ಆಸೆ ಇತ್ತು. ಬೇರೆ ಬೇರೆ ಕಾರಣಗಳಿಂದ ಬ್ಯುಸಿ ಇದ್ದೆ. ಸಿನಿಮಾ ನೋಡಿ ಆದ್ಮೇಲೆ 15 ರಿಂದ 20 ನಿಮಿಷ ಮಾತನಾಡಲು ಆಗಲಿಲ್ಲ. ಅಷ್ಟೂ ದುಃಖ ಬಂತು. ಲಾಕ್ ಡೌನ್ ನಲ್ಲಿ ನೋಡಿದ ನೈಜ ಸ್ಥಿತಿ ಇದು. ಆ  ನೋವುಗಳನ್ನು ದಾಖಲೆ ಮಾಡ್ಬೇಕು ಅಂತಾ 21 ವರ್ಷದ ಹುಡುಗನಿಗೆ ಅನಿಸಿದೆಯಲ್ಲ ಅದನ್ನು ಮೆಚ್ಚಬೇಕು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ : Youtuber Shanmukh: ಅನೀರಿಕ್ಷತವಾಗಿ ಗಾಂಜಾ ಸಮೇತ ಪೊಲೀಸರ ಕೈಗೆ ಸಿಕ್ಕಿಬಿದ್ದ ಖ್ಯಾತ ಯೂಟ್ಯೂಬರ್ ಷಣ್ಮುಖ್‌!

ಮಸಾರಿ ಟಾಕೀಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಫೋಟೋ ಸಿನಿಮಾದಲ್ಲಿ ಮಹಾದೇವ ಹಡಪದ್, ಸಂಧ್ಯಾ ಅರಕೆರೆ, ಜಹಾಂಗೀರ್, ಮತ್ತು ವೀರೇಶ್ ಗೊನ್ವಾರ್ ನಟಿಸಿದ್ದಾರೆ. ಚಿತ್ರಕ್ಕೆ ದಿನೇಶ್ ದಿವಾಕರನ್ ಅವರು ಕ್ಯಾಮೆರಾ ಹಿಡಿದಿದ್ದು, ಮತ್ತು ರವಿ ಹಿರೇಮಠ್ ಹಿನ್ನೆಲೆ ಸಂಗೀತ, ಶಿವರಾಜ್ ಮೆಹೂ ಕತ್ತರಿ ಕೆಲಸ ಚಿತ್ರಕ್ಕಿದೆ. ಮಾರ್ಚ್ 15ಕ್ಕೆ ಎಲ್ಲರಿಂದ ಲೈಕ್ ಪಡೆಯೋದಿಕ್ಕೆ ಫೋಟೋ ತೆರೆಗೆ ಬರ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News