ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ವಿತರಣೆ(Pornography Case)ಯಲ್ಲಿ ನಾನೆಂದಿಗೂ ತೊಡಗಿಸಿಕೊಂಡಿರಲಿಲ್ಲವೆಂದು ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ(Shilpa Shetty) ಪತಿ ರಾಜ್ ಕುಂದ್ರಾ(Raj Kundra) ಹೇಳಿದ್ದಾರೆ. ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.
ಈ ಒಟ್ಟಾರೆ ಪ್ರಕರಣವೇ ತಮ್ಮನ್ನು ಸಿಲುಕಿಸಿ ಹಾಕಲು ಮಾಡಿದ ವ್ಯವಸ್ಥಿತ ಸಂಚಿನ ಭಾಗವೆಂದು ಅವರು ಹೇಳಿದ್ದಾರೆ. ಇದೊಂದು ಮಾಯಾಜಾಲವಾಗಿದ್ದು, ಇದರಲ್ಲಿ ನಾನು ಸಿಲುಕಿದ್ದೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿ ವಿಚಾರಣೆ ಎದುರಿಸಲು ತಾವು ಸಿದ್ಧವೆಂದು ಕುಂದ್ರಾ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ನಟ ಪುನೀತ್ ರಾಜ್‍ಕುಮಾರ್ ನಾಮಫಲಕ ಕೆಡವಿದ ಕಿಡಿಗೇಡಿಗಳು: ಗ್ರಾಮಸ್ಥರ ಆಕ್ರೋಶ
ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ವಿತರಣೆ ಪ್ರಕರಣ(Production of Pornography )ಕ್ಕೆ ಸಂಬಂಧಿಸಿದಂತೆ ಜು.19ರಂದು ರಾಜ್ ಕುಂದ್ರಾ ಅವರನ್ನು ಬಂಧಿಸಲಾಗಿತ್ತು. 2 ತಿಂಗಳ ಕಾಲ ಜೈಲುವಾಸ ಅನುಭವಿಸಿದ ಬಳಿಕ ಸೆ.22ರಂದು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟುದಿನ ಮೌನವಾಗಿದ್ದ ಕುಂದ್ರಾ, ಇದೀಗ ತಮ್ಮ ವಿರುದ್ಧದ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ನನ್ನ ಕುರಿತು ಆಧಾರವಿಲ್ಲದ ಅನೇಕ ಮಾಹಿತಿಗಳು ಹರಿದಾಡುತ್ತಿವೆ. ನನ್ನ ಮೌನವನ್ನು ದೌರ್ಬಲ್ಯವೆಂದು ಪರಿಗಣಿಸಲಾಗಿದೆ. ನಾನು ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ವಿತರಣೆ ಮಾಡಿಲ್ಲ. ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಮಾಡಲಾಗಿದೆ. ಈ ಪ್ರಕರಣ ಈಗ ವಿಚಾರಣೆಯ ಹಂತದಲ್ಲಿದೆ. ಹೀಗಾಗಿ ನಾನು ಯಾವುದೇ ಸ್ಪಷ್ಟನೆ ನೀಡಲ್ಲ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದ್ದು, ಇದರಲ್ಲಿ ಸತ್ಯ ಗೆಲ್ಲುತ್ತದೆ’ ಅಂತಾ ಹೇಳಿದ್ದಾರೆ.
‘ವಿಚಾರಣೆ(Pornography Case) ಮುಗಿಯುವುದಕ್ಕಿಂತಲೂ ಮುನ್ನವೇ ಮಾಧ್ಯಮದವರು ನನ್ನನ್ನು ಆರೋಪಿಯನ್ನಾಗಿ ಮಾಡಿದ್ದಾರೆ. ಇದರಿಂದ ನನಗೆ ಮತ್ತು ನನ್ನ ಕುಟುಂಬದವರಿಗೆ ತುಂಬಾ ನೋವಾಗಿದೆ. ನಾನು ಮುಖ ಮುಚ್ಚಿಕೊಂಡು ಓಡಾಡುವುದಿಲ್ಲ. ನನ್ನ ಖಾಸಗಿತನಕ್ಕೆ ಬೆಲೆ ನೀಡಿ ಎಂದು ನಾನು ವಿನಂತಿಸಿಕೊಳ್ಳುತ್ತೇನೆ. ನನ್ನ ಕುಟುಂಬವೇ ನನಗೆ ಮುಖ್ಯ. ದಯವಿಟ್ಟು ನನ್ನ ವಿರುದ್ಧ ಸುಳ್ಳು ಸುಳ್ಳು ಆರೋಪಗಳನ್ನು ಮಾಡಬೇಡಿ’ ಅಂತಾ ಕುಂದ್ರಾ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: Panama Papers Case: ಇ.ಡಿ ವಿಚಾರಣೆಗೆ ಹಾಜರಾದ ನಟಿ ಐಶ್ವರ್ಯಾ ರೈ ಬಚ್ಚನ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.