Puneeth Rajkumar: ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್ ರಾಜಕುಮಾರ್

Puneeth Rajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. 

Written by - YASHODHA POOJARI | Edited by - Chetana Devarmani | Last Updated : Dec 22, 2022, 03:43 PM IST
  • ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನ
  • ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್
  • ಸರಕಾರಕ್ಕೆ ಪತ್ರ ಬರೆದಿದ್ದ ಅಪ್ಪು ಅಭಿಮಾನಿ ಸಂಘಗಳು
Puneeth Rajkumar: ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್ ರಾಜಕುಮಾರ್  title=
ಪುನೀತ್ ರಾಜಕುಮಾರ್

Puneeth Rajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ ನಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ.

ಇದನ್ನೂ ಓದಿ : "ಸುದೀಪ್ ಮತ್ತು ದರ್ಶನ್ ಒಂದಾದರೆ ಚಿತ್ರರಂಗ ನಂದನವನವಾಗುತ್ತದೆ"- ನಟ ಜಗ್ಗೇಶ್

ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ್’ ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದ’ ಭಾಗವನ್ನು ಪಠ್ಯದಲ್ಲಿ ಬಳಸಿಕೊಂಡಿದೆ ಬೆಂಗಳೂರು ವಿಶ್ವವಿದ್ಯಾಲಯ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದು, ಡಾ.ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ.ರಘುನಂದನ್ ಬಿ.ಆರ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.

ಮೊನ್ನೆಯಷ್ಟೇ ‘ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈನ್ ನಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೂ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : Vedha : ಈ ವಾರ ತೆರೆಗೆ ಶಿವಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ "ವೇದ"

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News