'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದಲ್ಲಿ ರಮ್ಯಾ ನಟಿಸಲಿಲ್ಲ: ಸ್ಪಷ್ಟನೆ ನೀಡಿದ ಸ್ಯಾಂಡಲ್‌ವುಡ್‌ ಕ್ವೀನ್!

Swathi Muttina Male Haniye: ಸ್ಯಾಂಡಲ್‌ವುಡ್‌ ಕ್ವೀನ್ ನಟಿ ರಮ್ಯ ಮೊದಲ ಬಾರಿ‌ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದು, ಈ ಹಿಂದೆ ಚಿತ್ರದಲ್ಲಿ ನಾಯಕಿಯಾಗಿ ನಟಿಸಬೇಕೆತ್ತು. ಆದರೆ ಈ ಜಾಗಕ್ಕೆ ನಟಿ ಸಿರಿ ನಾಯಕಿ ಪಾತ್ರ ನಿರ್ವಹಿಸಿದ್ದು, ಇದಕ್ಕೆ ಸದ್ಯ ರಮ್ಯ ಸ್ಪಷ್ಟನೆ ನೀಡಿದ್ದಾರೆ.

Written by - Zee Kannada News Desk | Last Updated : Nov 13, 2023, 01:26 PM IST
  • ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರವು ತೆರೆಗೆ ಬರುವುದಕ್ಕೆ ಸಜ್ಜಾಗಿದ್ದು, ವಿಶೇಷವೆಂದರೆ, ಇದು ನಟಿ ರಮ್ಯಾ ನಿರ್ಮಾಣದ ಮೊದಲ ಸಿನಿಮಾ.
  • ನಟಿ ರಮ್ಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ, ತಾವು ನಾಯಕಿಯಾಗಿ ನಟಿಸಬೇಕಿದಲ್ಲಿ, ಆದರೆ ಅದು ಸಾಧ್ಯವಾಗದೆ, ಕೊನೆಗೆ ಆ ಜಾಗಕ್ಕೆ ನಟಿ ಸಿರಿ ರವಿಕುಮಾರ್ ಆಗಮಿಸಿದಕ್ಕೆ ಸ್ಪಷ್ಟನೆ ನೀಡಿದ್ದಾರೆ.
  • ನನ್ನ ಕಮ್‌ಬ್ಯಾಕ್ ಚಿತ್ರವು ಚಿತ್ರಮಂದಿರದಲ್ಲಿಯೇ ಬಿಡುಗಡೆ ಆಗಬೇಕೆಂದು ನಾನು ಬಯಸಿದ್ದೆ ಎಂದ ನಟಿ ರಮ್ಯ.ʼ
'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದಲ್ಲಿ ರಮ್ಯಾ ನಟಿಸಲಿಲ್ಲ: ಸ್ಪಷ್ಟನೆ ನೀಡಿದ ಸ್ಯಾಂಡಲ್‌ವುಡ್‌ ಕ್ವೀನ್! title=

Ramya Speaks About Swathi Muttina Male Haniye: ಸ್ಯಾಂಡಲ್‌ವುಡ್‌ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರವು ತೆರೆಗೆ ಬರುವುದಕ್ಕೆ ಸಜ್ಜಾಗಿದ್ದು, ವಿಶೇಷವೆಂದರೆ, ಇದು ನಟಿ ರಮ್ಯಾ ನಿರ್ಮಾಣದ ಮೊದಲ ಸಿನಿಮಾ. ಎಲ್ಲ ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ನಾಯಕಿಯಾಗಿ ರಮ್ಯಾ ಅವರೇ ನಟಿಸಬೇಕಿತ್ತು. ಆದರೆ ಅದು ಸಾಧ್ಯವಾಗದೆ, ಕೊನೆಗೆ ಆ ಜಾಗಕ್ಕೆ ನಟಿ ಸಿರಿ ರವಿಕುಮಾರ್ ಆಗಮಿಸಿದರು. ಇದೀಗ ಚಿತ್ರ ತೆರೆಗೆ ಬರುವ ಹೊತ್ತಿನಲ್ಲಿ, ತಾನೇಕೆ ಈ ಸಿನಿಮಾದಲ್ಲಿ ನಟಿಸಲಿಲ್ಲ ಎಂಬ ಬಗ್ಗೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.

ನಟಿ ರಮ್ಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಬಗ್ಗೆ ವಿವರಿಸುತ್ತಾ, "ದೀಪಾವಳಿ ಹಬ್ಬದ ಶುಭಾಶಯಗಳು.. ಹಳೆಯದನ್ನು ಮರೆತು ಹೊಸತಿನೆಡೆಗಿನ ಪಯಣ.. 'ಸ್ವಾತಿ ಮುತ್ತಿನ ಮಳೆ ಹನಿಯೇ'- ಇದು ನನಗೆ ಬಹಳ ವಿಶೇಷವಾದ ಚಿತ್ರ. ನಿರ್ಮಾಪಕಿಯಾಗಿ ನನ್ನ ಮೊದಲ ಚಿತ್ರ ಎಂದಷ್ಟೇ ಅಲ್ಲ, ಬದಲಿಗೆ ಜೀವನದ ಬಗ್ಗೆ ನನ್ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಿಸಿದ ವಿಷಯಾಧರಿತ ಚಿತ್ರ. ಪ್ರೀತಿಸಿದವರ ಅಗಲಿಕೆಯ ನೋವು, ಅದರಿಂದ ಹೊರ ಬರಲು ಅಸಾಧ್ಯವೆಂದು ತಿಳಿದಿದ್ದರೂ, ನಾವು ಮಾಡುವ ಪ್ರಯತ್ನ. ಈ ಅನುಭವವು ನಮ್ಮನ್ನು ಹೆಚ್ಚು ಪಕ್ಷಗೊಳಿಸುತ್ತದೆ. 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರವು ಈ ಪ್ರಕ್ರಿಯೆಯನ್ನು ಮನಸ್ಸಿಗೆ ನಾಟುವಂತೆ ಸೆರೆಹಿಡಿದಿದೆ" ಎಂದು ರಮ್ಯಾ ಬರೆದುಕೊಂಡಿದ್ದಾರೆ.

ಇದನ್ನು ಓದಿ: "ನೀವು ಬರೀ ಟ್ರೈಲರ್ ನೋಡಿದ್ದೀರಲ್ಲ.. ಇದು ಗನ್ ಕಣಪ್ಪ.. ಬನ್ ಅಲ್ಲ ಅಂತ." ಎಂದ ದರ್ಶನ್:‌ ʼಬ್ಯಾಡ್‌ ಮ್ಯಾನರ್ಸʼ ಚಿತ್ರದ ಹಿಂಟ್‌ ರಿವಿಲ್!

"ನಿಮ್ಮಲ್ಲಿ ಹಲವರಿಗೆ ಈ ಪ್ರಶ್ನೆ ಇದೆ ಎಂದು ನನಗೆ ತಿಳಿದಿದೆ. ನಾನು ಚಿತ್ರದಿಂದ ಹೊರಗುಳಿದದ್ದು ಏಕೆಂದರೆ, ಅದು ಓಟಿಟಿಯಲ್ಲಿ ಬಿಡುಗಡೆಯಾಗುವುದೆಂದು ನಿರ್ಧರಿಸಿದ್ದೆವು. ನನ್ನ ಕಮ್‌ಬ್ಯಾಕ್ ಚಿತ್ರವು ಚಿತ್ರಮಂದಿರದಲ್ಲಿಯೇ ಬಿಡುಗಡೆ ಆಗಬೇಕೆಂದು ನಾನು ಬಯಸಿದ್ದೆ. ಚಿತ್ರವನ್ನು ಖರೀದಿಸುವುದಾಗಿ ಭರವಸೆ ನೀಡಿದ ಓಟಿಟಿ ವೇದಿಕೆಯು ನಂತರ ಹಿಂದೆ ಸರಿಯಿತು. ಕನ್ನಡದಲ್ಲಿ ಇದು ಹೆಚ್ಚಾಗಿ ನಡೆಯುತ್ತದೆ" ಎಂದು ರಮ್ಯಾ  ಹೇಳಿದ್ದಾರೆ.

"ಸಿನಿಮಾದಲ್ಲಿನ ಸಿರಿಯ ನಟನೆ ಅದ್ಭುತ. ರಾಜ್ ತಾವು ಒಬ್ಬ ಪ್ರತಿಭಾನ್ವಿತ ನಟರೆಂದು ನಿರೂಪಿಸಿದ್ದಾರೆ. ಕಥೆಯನ್ನು ಅವರು ವಿವರಿಸಿದಾಗ, ಕಥೆಯ ಬಗೆಗಿನ ವಿವರಣೆ ನನ್ನನ್ನು ಭಾವುಕಳನ್ನಾಗಿಸಿತು. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ, ಮಿಧುನ್ ಮುಕುಂದನ್ ಹಿನ್ನೆಲೆ ಸಂಗೀತ ಬಹಳ ಚೆನ್ನಾಗಿ ಮೂಡಿಬಂದಿದ್ದು, 'ಪ್ರೇರಣಾ ಥೀಮ್..' ನನ್ನ ನೆಚ್ಚಿನ ಹಾಡಾಗಿದೆ. ನೀವೆಲ್ಲರೂ ಈ ಹಾಡು ಕೇಳಬೇಕೆಂಬ ಕಾತುರ ನನಗಿದೆ. ಈ ಚಿತ್ರದ ತಿರುಳು ನಿಮ್ಮ ಮನದಲ್ಲಿ ಬಹಳ ಸಮಯ ಉಳಿಯುತ್ತದೆ ಎಂಬುದು ನನ್ನ ಆಶಯ, ಇಡೀ ಚಿತ್ರತಂಡಕ್ಕೆ, ವಿಶೇಷವಾಗಿ ಸುನಯನಾ, ಕೆವಿನ್‌, ಕಾರ್ತಿಕ್ ಮತ್ತು ಯೋಗಿ ಇವರಿಗೆ ನನ್ನ ಮನಃಪೂರ್ವಕ ಧನ್ಯವಾದಗಳು" ಎಂದು ಈ ನಟಿ ತಿಳಿದ್ದಾರೆ.

ಇದನ್ನು ಓದಿ: ದೀಪಾವಳಿ ದಿನ ಕ್ಯಾಮರಾಗೆ ಹೀಗೆ ಪೋಸ್‌ ಕೊಟ್ರೆ ಮಸ್ತ್‌ ಫೋಟೋಸ್‌ ಬರ್ತವೆ..! ಟ್ರೈ ಮಾಡಿ ಗರ್ಲ್ಸ್‌

ನಟಿ ರಮ್ಮಯ ಕೊನೆಯದಾಗಿ "ನಿಮ್ಮನ್ನು ಸೇರಲು ಹಲವು ಮಾರ್ಗಗಳನ್ನು ನಾವು ಹುಡುಕುತ್ತೇವೆ. 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರವು ಇದೇ ನವೆಂಬರ್ 24ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು, ನಿಮ್ಮ ಪ್ರೀತಿಪಾತ್ರರೊಂದಿಗೆ ಸಿನಿಮಾವನ್ನು ವೀಕ್ಷಿಸಿ. ಪ್ರೀತಿಯ ಸ್ವಾದವನ್ನು ಸವಿಯಿರಿ..' ಎಂದು ಹೇಳುತ್ತ ಮತ್ತೊಮ್ಮೆ ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ಕೊರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News