Kabza Movie : ಉಪ್ಪಿ ಪ್ಯಾನ್ಸ್ ಗೆ ಗುಡ್ ನ್ಯೂಸ್ : 'ಕಬ್ಜ' ಸಿನಿಮಾ ಟೀಸರ್ ಬಿಡುಗಡೆಗೆ ಡೇಟ್ಸ್ ಫಿಕ್ಸ್!

ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ  "ಕಬ್ಜ"ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. 

Written by - YASHODHA POOJARI | Last Updated : Sep 13, 2022, 01:34 PM IST
  • ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ
  • ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ'ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ
  • ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆ
Kabza Movie : ಉಪ್ಪಿ ಪ್ಯಾನ್ಸ್ ಗೆ ಗುಡ್ ನ್ಯೂಸ್ : 'ಕಬ್ಜ' ಸಿನಿಮಾ ಟೀಸರ್ ಬಿಡುಗಡೆಗೆ ಡೇಟ್ಸ್ ಫಿಕ್ಸ್! title=

ಬೆಂಗಳೂರು : ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ'ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. 

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. 
ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ ನಿಗದಿಯಾಗಿದೆ. ಚಿತ್ರದ ನಾಯಕ ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ "ಕಬ್ಜ" ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ : BBK Season 9 : ಬಿಗ್ ಬಾಸ್ ಮನೆಗೆ ನಟ ಅನಿರುದ್ಧ!

ಕನ್ನಡಿಗರ ಹೆಮ್ಮೆಯ "ಕೆ.ಜಿ.ಎಫ್ 2" ಚಿತ್ರ ಈಗಾಗಲೇ ವಿಶ್ವದಾದ್ಯಂತ ವಿಜಯ ಪತಾಕೆ ಹಾರಿಸಿದೆ‌. ಕನ್ನಡಿಗರ ಮತ್ತೊಂದು ಹೆಮ್ಮೆಯ "ಕಬ್ಜ" ಚಿತ್ರ ಕೂಡ ಗೆಲ್ಲಲೇಬೇಕು. ಚಿತ್ರತಂಡದ ಅಪಾರ ಶ್ರಮದಿಂದ ನಿರ್ಮಾಣವಾಗಿರುವ "ಕಬ್ಜ" ಚಿತ್ರ ಗೆದ್ದರೆ ಕನ್ನಡ ಚಿತ್ರ ಗೆದ್ದಂತೆ. ಈ ಚಿತ್ರ ಗೆದ್ದರೆ ಮತ್ತೊಮ್ಮೆ ಬಾಲಿವುಡ್ ನಲ್ಲಿ ನಾವೇ ನಂಬರ್ ಒನ್ ಆಗಲಿದ್ದೇವೆ ಎನ್ನುತ್ತಿರುವ ಕನ್ನಡ ಕಲಾಭಿಮಾನಿಗಳು, "ಕಬ್ಜ"  ಪ್ಯಾನ್ ಇಂಡಿಯಾ ಚಿತ್ರ ಪ್ರಪಂಚದಾದ್ಯಂತ ಪ್ರಚಂಡ ಯಶಸ್ಸು ಸಾಧಿಸಲಿ ಎಂದು ತುಂಬು ಮನಸ್ಸಿನಿಂದ ಹಾರೈಸುತ್ತಿದ್ದಾರೆ. 

ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸೆಪ್ಟೆಂಬರ್ 17ರಂದು ಟೀಸರ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಆರ್ ಚಂದ್ರು ಹೇಳಿದ್ದಾರೆ.

ಇದನ್ನೂ ಓದಿ : Golden Visa: ದುಬೈನಲ್ಲಿ ಗೋಲ್ಡನ್ ವೀಸಾ ಪಡೆದ ಕಿಚ್ಚ ಸುದೀಪ್! ಏನಿದರ ಲಾಭ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News