Renukaswamy Murder Case: ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು!

Renukaswamy Murder Case: ನಟ ದರ್ಶನ್‌  ಕೂದಲಿನ ಮಾದರಿ ಸಂಗ್ರಹಿಸಲು ಪೊಲೀಸರು ಅವರು ಧರಿಸಿದ್ದ ವಿಗ್‌ಅನ್ನು ತೆಗೆಸಿದ್ದಾರೆಂದು ವರದಿಯಾಗಿದೆ. ಪೊಲೀಸರು ಆರೋಪಿ ದರ್ಶನ್ ರಕ್ತ ಹಾಗೂ ಕೂದಲಿನ ಸ್ಯಾಂಪಲ್‌ ಪಡೆದುಕೊಂಡಿದ್ದಾರೆ.

Written by - Puttaraj K Alur | Last Updated : Jun 19, 2024, 11:09 PM IST
  • ಪ್ರಕರಣ ಸಂಬಂಧ ಆರೋಪಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ
  • ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೂದಲಿನ ಸ್ಯಾಂಪಲ್‌ ಸಂಗ್ರಹ
  • ಆಸ್ಪತ್ರೆಯಲ್ಲಿ ನಟ ದರ್ಶನ್‌ ಧರಿಸಿದ್ದ ವಿಗ್‌ ತೆಗೆಸಿದ ಪೊಲೀಸರು
Renukaswamy Murder Case: ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು! title=
ಕೂದಲಿನ ಸ್ಯಾಂಪಲ್‌ ಸಂಗ್ರಹ!

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌, ಆತನ ಗೆಳತಿ ಪವಿತ್ರಾ ಗೌಡ ಸೇರಿದಂತೆ 18 ಆರೋಪಿಗಳು ಸದ್ಯ ಜೈಲು ಹಕ್ಕಿಗಳಾಗಿದ್ದಾರೆ. ಕಳೆದ 9 ದಿನಗಳಿಂದ ಪೊಲೀಸ್‌ ಠಾಣೆಯಲ್ಲಿರುವ ಆರೋಪಿಗಳನ್ನು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಪ್ರಕರಣ ಸಂಬಂಧ ಆರೋಪಿಗಳಿಗೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ತಪಾಸಣೆಗಾಗಿ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ನಟ ದರ್ಶನ್ ಅವರು ತಲೆಗೆ ಹಾಕಿದ್ದ ವಿಗ್ ಅನ್ನು ಪೊಲೀಸರು ತೆಗೆಸಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ದರ್ಶನ್ ಪತ್ನಿ ಇರುವ ಅಪಾರ್ಟ್ಮೆಂಟ್ ನಲ್ಲಿ ದಿನಕ್ಕೊಂದು ಸಮಸ್ಯೆ ಎದುರಾಗುತ್ತೆ : ಪ್ರಶಾಂತ ಸಂಬರಗಿ

ಪೊಲೀಸರ ಕಸ್ಟಡಿಯಲ್ಲಿರುವ ಎಲ್ಲಾ ಆರೋಪಿಗಳನ್ನು ನಾಳೆ ಅಂದರೆ ಗುರುವಾರ(ಜೂನ್‌ 20) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಈ ಹಿನ್ನೆಲೆ ಪ್ರಕರಣದ A-1 ಆರೋಪಿ ಪವಿತ್ರಾ ಗೌಡ, A-2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರೋಗ್ಯ ತಪಾಸಣೆಗೆ ಕರೆದುಕೊಂಡು ಹೋಗಲಾಗಿತ್ತು. 

ಈ ವೇಳೆ ಉಳಿದ ಆರೋಪಿಗಳಂತೆ ನಟ ದರ್ಶನ್‌ ಕೂದಲಿನ ಮಾದರಿ ಸಂಗ್ರಹಿಸಲು ಪೊಲೀಸರು ಅವರು ಧರಿಸಿದ್ದ ವಿಗ್‌ಅನ್ನು ತೆಗೆಸಿದ್ದಾರೆಂದು ವರದಿಯಾಗಿದೆ. ಪೊಲೀಸರು ಆರೋಪಿ ದರ್ಶನ್ ರಕ್ತ ಹಾಗೂ ಕೂದಲಿನ ಸ್ಯಾಂಪಲ್‌ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ತನಿಖೆಯಲ್ಲಿ ರೋಚಕ ಟ್ವಿಸ್ಟ್ .. ಕೊಲೆ ಕೇಸ್‌ನಿಂದ ಬಚಾವಾಗಲು ಹಣ ನೀಡಿದ್ದಾರಾ ದರ್ಶನ್ & ʻಡಿʼ ಗ್ಯಾಂಗ್?!

ಪ್ರಕರಣ ಸಂಬಂಧ ಆರೋಪಿಗಳ DNA ಪರೀಕ್ಷೆಗೆ ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ದಿನದಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮದಲ್ಲಿಯೂ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News