ಧೋನಿ ಹುಟ್ಟುಹಬ್ಬದ ಆಚರಣೆಯಲ್ಲಿ ಸ್ಟಾರ್‌ ನಟ ಹಾಜರ್‌..!

Salman Khan: ಭಾರತ ತಂಡದ ಮಾಜಿ ನಾಯಕ ಹಾಗೂ ವಿಶ್ವಕಪ್ ವಿಜೇತ ಮಹೇಂದ್ರ ಸಿಂಗ್ ಧೋನಿ ಅವರು ಜೂನ್‌ 07ರ ಭಾನುವಾರ ತಮ್ಮ 43 ನೇ ಹುಟ್ಟುಹಬ್ಬವನ್ನು ಆಚರಿಕೊಳುತ್ತಿದ್ದಾರೆ. ತಲ ಧೋನಿ ಈ ವರ್ಷ ಬಃಳ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಕೆಲವು ಸಂಬಂಧಿಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ತೃಪ್ತಿ ಪಟ್ಟಿದ್ದಾರೆ.   

Written by - Zee Kannada News Desk | Last Updated : Jul 7, 2024, 10:54 AM IST
  • ಧೋನಿ, ಜೂನ್‌ 07ರ ಭಾನುವಾರ ತಮ್ಮ 43 ನೇ ಹುಟ್ಟುಹಬ್ಬವನ್ನು ಆಚರಿಕೊಳುತ್ತಿದ್ದಾರೆ.
  • ಮಹಿ ಅವರ ಮನೆಯಲ್ಲಿ ಕೇಕ್ ಕತ್ತರಿಸಿ, ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ಸಮಾರಂಭದಲ್ಲಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಭಾಗಿಯಾಗಿದ್ದಾರೆ.
  • CSK ಕೂಡ ವಿಶೇಷ ವೀಡಿಯೊವನ್ನು ಪೋಸ್ಟ್ ಮಾಡುವ ಮೂಲಕ ತಲ ಧೋನಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ.
ಧೋನಿ ಹುಟ್ಟುಹಬ್ಬದ ಆಚರಣೆಯಲ್ಲಿ ಸ್ಟಾರ್‌ ನಟ ಹಾಜರ್‌..! title=

Salman Khan: ಭಾರತ ತಂಡದ ಮಾಜಿ ನಾಯಕ ಹಾಗೂ ವಿಶ್ವಕಪ್ ವಿಜೇತ ಮಹೇಂದ್ರ ಸಿಂಗ್ ಧೋನಿ ಅವರು ಜೂನ್‌ 07ರ ಭಾನುವಾರ ತಮ್ಮ 43 ನೇ ಹುಟ್ಟುಹಬ್ಬವನ್ನು ಆಚರಿಕೊಳುತ್ತಿದ್ದಾರೆ. ತಲ ಧೋನಿ ಈ ವರ್ಷ ಬಃಳ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಕೆಲವು ಸಂಬಂಧಿಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ತೃಪ್ತಿ ಪಟ್ಟಿದ್ದಾರೆ. 

ಶನಿವಾರ ಮಧ್ಯರಾತ್ರಿ ಮಹಿ ಅವರ ಮನೆಯಲ್ಲಿ ಕೇಕ್ ಕತ್ತರಿಸಿ, ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ಸಮಾರಂಭದಲ್ಲಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಭಾಗಿಯಾಗಿದ್ದಾರೆ. ಧೋನಿ ಪತ್ನಿ ಸಾಕ್ಷಿ ಸಿಂಗ್ ಈ ಸಂಬಂಧ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ನಿರಾಸೆ ಮಡಿಸಿದ ಐಪಿಎಲ್‌ ಸ್ಟಾರ್ಸ್‌..!ತಪ್ಪು ನಿರ್ಧಾರ ತೆಗೆದುಕೊಂಡ್ರಾ ಬಿಸಿಸಿಐ..?

ಇನ್ನೂ, ಧೋನಿ ಹುಟ್ಟುಹಬ್ಬದ ಪ್ರಯುಕ್ತವಾಗಿ ಬಿಸಿಸಿಐ, 2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗಳೊಂದಿಗೆ ಧೋನಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ನಿಜವಾದ ನಾಯಕನಿಗೆ ಜನ್ಮದಿನದ ಶುಭಾಶಯಗಳು ಎಂದು ಫೋಟೋದ ಜೊತೆಗೆ ಶೀರ್ಷಿಕೆಯನ್ನು ಕೂಡ ಬರೆಯಲಾಗಿದೆ. 

CSK ಕೂಡ ವಿಶೇಷ ವೀಡಿಯೊವನ್ನು ಪೋಸ್ಟ್ ಮಾಡುವ ಮೂಲಕ ತಲ ಧೋನಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಜಿಂಬಾಬ್ವೆ ಪ್ರವಾಸದಲ್ಲಿರುವ ರುತುರಾಜ್ ಗಾಯಕ್ವಾಡ್ ಅವರು ಧೋನಿಗೆ ವಿಡಿಯೋ ಕಾಲ್ ಮೂಲಕ ವಿಶ್ ಮಾಡಿದ್ದಾರೆ. ಈ ನಡುವೆ ಧೋನಿ ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುವ ಮೂಲಕ ಅಂತರ್ಜಾಲದಲ್ಲಿ ಶುಭಾಶಯಗಳ ಮಹಾಪೂರವನ್ನೆ ಹರಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News