Samantha Ruth Prabhu : ಬಹುಭಾಷಾ ನಟಿ ಸಮಂತಾ ಕಳೆದ ಕೆಲವು ತಿಂಗಳುಗಳಿಂದ ಸಿನಿಮಾದಿಂದ ದೂರ ಉಳಿದು, ತಮ್ಮ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ. ಇದೀಗ ಸ್ಯಾಮ್ ನೀಡಿರುವ ಹೇಳಿಕೆಯೊಂದು ಅವರ ಫ್ಯಾನ್ಸ್ ಆತಂಕಕ್ಕೆ ಕಾರಣವಾಗಿದೆ..
ಹೌದು.. ಮಯೋಸಿಟಿಸ್ ಎಂಬ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಸಿನಿಮಾಗೆ ಬ್ರೇಕ್ ನೀಡಿ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ. ಅಲ್ಲದೆ, ಆಗಾಗ ಗೆಳೆಯರ ಜೊತೆ ಪ್ರವಾಸಕ್ಕೂ ತೆರಳುತ್ತಿದ್ದಾರೆ. ಅಲ್ಲದೆ, ಯೋಗ, ಧ್ಯಾನದತ್ತ ಮೊರೆ ಹೋಗುತ್ತಿದ್ದಾರೆ. ಸದ್ಯ ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಮಂತಾ ಹಂಚಿಕೊಂಡಿರುವ ಪೋಸ್ಟ್ ಒಂದು ಸದ್ದು ಮಾಡುತ್ತಿದೆ. ಅದರಲ್ಲಿ ಯಾರ ಮೇಲೂ ಅವಲಂಬಿತರಾಗುವುದು ಸರಿಯಲ್ಲ ಎಂಬಂತೆ ಪೋಸ್ಟ್ ಹಾಕಿದ್ದು, ಅವರ ಅಭಿಮಾನಿಗಳಿಗೆ ಆತಂಕ ಮೂಡಿಸಿದೆ.
ಮಯೋಸಿಟಿಸ್‌ನಿಂದಾಗಿ ವೃತ್ತಿಪರ ಜೀವನದಿಂದ ವಿರಾಮ ತೆಗೆದುಕೊಂಡಿದ್ದೇನೆ. ನನ್ನ ಜೀವನದಲ್ಲಿ ನಾನು ತೆಗೆದುಕೊಂಡ ಅತ್ಯಂತ ಕಠಿಣ ನಿರ್ಧಾರ ಇದು. ಬಾಹ್ಯ ಗಾಯಕ್ಕಿಂತ ಮಾನಸಿಕ ಗಾಯದಿಂದ ಗುಣವಾಗಲು ಹೆಚ್ಚು ಸಮಯ ಬೇಕು ಅಂತ ಸ್ಯಾಮ ಹೇಳಿಕೊಂಡಿದ್ದಾರೆ. ಸಧ್ಯ ಈ ಕುರಿತ ಪೋಸ್ಟ್ ವೈರಲ್ ಆಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.