ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಿನಿಮಾಗಳ ಬಗ್ಗೆ ಅಮಿತ್ ಶಾ ಮೆಚ್ಚುಗೆ

ದೆಹಲಿಯಲ್ಲಿ ಆಯೋಜಿಸಿದ್ದ ಸಾಮ್ರಾಟ್ ಪೃಥ್ವಿರಾಜ್ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ ಗೃಹ ಸಚಿವ ಅಮಿತ್ ಶಾ ಅವರು ಅಕ್ಷಯ್ ಕುಮಾರ್ ಸಿನಿಮಾಗಳ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Jun 2, 2022, 08:49 PM IST
  • ಪ್ರತಿಯೊಬ್ಬರೂ ನೋಡಲೇಬೇಕಾದ ಈ ಚಿತ್ರವನ್ನು ನಿರ್ಮಿಸುವಲ್ಲಿ ನಮ್ಮ ಶ್ರದ್ಧಾಪೂರ್ವಕ ಪ್ರಯತ್ನಗಳನ್ನು ಗುರುತಿಸಿದ್ದಕ್ಕಾಗಿ ಶ್ರೀ ಅಮಿತ್ ಶಾ ಜೀ ಅವರಿಗೆ ನಾವು ತುಂಬಾ ಕೃತಜ್ಞರಾಗಿರುತ್ತೇವೆ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಿನಿಮಾಗಳ ಬಗ್ಗೆ ಅಮಿತ್ ಶಾ ಮೆಚ್ಚುಗೆ  title=
Photo Courtsey: Twitter

ನವದೆಹಲಿ: ದೆಹಲಿಯಲ್ಲಿ ಆಯೋಜಿಸಿದ್ದ ಸಾಮ್ರಾಟ್ ಪೃಥ್ವಿರಾಜ್ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ ಗೃಹ ಸಚಿವ ಅಮಿತ್ ಶಾ ಅವರು ಅಕ್ಷಯ್ ಕುಮಾರ್ ಸಿನಿಮಾಗಳ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರವನ್ನು ವಿಕ್ಷಿಸಿರುವ ಅಮಿತ್ ಶಾ ಅವರು “ಸಾಮ್ರಾಟ್ ಪೃಥ್ವಿರಾಜ್ ನಮ್ಮ ತಾಯ್ನಾಡಿಗಾಗಿ ಕೆಚ್ಚೆದೆಯಿಂದ ಹೋರಾಡಿದ ಅಪ್ರತಿಮ ಯೋಧನ ಕಥೆ ಮಾತ್ರವಲ್ಲ, ಇದು ನಮ್ಮ ಸಂಸ್ಕೃತಿಯ ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ. ಸಾಮ್ರಾಟ್ ಪೃಥ್ವಿರಾಜ್ ಚಿತ್ರವು ಮಹಿಳೆಯರನ್ನು ಗೌರವಿಸುವ ಮತ್ತು ಸಬಲೀಕರಣಗೊಳಿಸುವ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುತ್ತದೆ. ನಮ್ಮ 1000 ವರ್ಷಗಳ ಹೋರಾಟವು ವ್ಯರ್ಥವಾಗಿಲ್ಲ, 2014 ರಲ್ಲಿ ಭಾರತದಲ್ಲಿ ಸಾಂಸ್ಕೃತಿಕ ಜಾಗೃತಿ ಪ್ರಾರಂಭವಾಯಿತು ಮತ್ತು ಅದು ಭಾರತವನ್ನು ಮತ್ತೊಮ್ಮೆ ಎತ್ತರಕ್ಕೆ ಕೊಂಡೊಯ್ಯುತ್ತದೆ. ಅನೇಕ ಅಡೆತಡೆಗಳು ಮತ್ತು ತೊಂದರೆಗಳನ್ನು ನಿವಾರಿಸಿ, ಇಂದು ಭಾರತದ ಹೆಮ್ಮೆ, ಹಿರಿಮೆ, ಸಂಸ್ಕೃತಿ ಮತ್ತು ನಮ್ಮ ‘ಸ್ವಧರ್ಮ’ ಮತ್ತೊಮ್ಮೆ ಅದೇ ವೈಭವಕ್ಕೆ ಮರಳಿದೆ. ವಿಶೇಷವಾಗಿ ಈ ಚಿತ್ರದ ಸೃಜನಶೀಲ ಕಲಾ ನಿರ್ದೇಶನಕ್ಕಾಗಿ ನಾನು ಸಾಮ್ರಾಟ್ ಪೃಥ್ವಿರಾಜ್ ಅವರ ಇಡೀ ತಂಡವನ್ನು ಅಭಿನಂದಿಸುತ್ತೇನೆ" ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಣಿಗಾರಿಕೆ ಆರೋಪ: ಪತಿ ಮಾಡಿದ ತಪ್ಪಿಗೆ ಪತ್ನಿ ವಿರುದ್ಧ ಪ್ರಕರಣ ದಾಖಲು!

ಇದೆ ವೇಳೆ ಚಿತ್ರದಲ್ಲಿ ಪೃಥ್ವಿ ರಾಜ್ ಅವರ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಕ್ಷಯ್ ಕುಮಾರ್ ಮಾತನಾಡಿ “ನಮ್ಮ ಗೌರವಾನ್ವಿತ ಗೃಹ ಸಚಿವ ಶ್ರೀ ಅಮಿತ್ ಶಾ ಜೀ ಅವರು ಈ ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗಿರುವುದು ಸಂತಸ ತಂದಿದೆ.ಈಗ ಅವರ ಉಪಸ್ಥಿತಿಯ ಮೂಲಕ ನಾವು ಭಾರತ ದೇಶದ ನಿರ್ಭೀತ ಯೋಧನಿಗೆ ಗೌರವ ಸಲ್ಲಿಸಿದ ಹಾಗೆ ಆಗಿದೆ.ನಮ್ಮ ದೇಶ ಮತ್ತು ದೇಶವಾಸಿಗಳ ಸ್ವಾತಂತ್ರ್ಯವನ್ನು ರಕ್ಷಿಸಲು ತನ್ನ ಪ್ರಾಣವನ್ನು ತ್ಯಾಗ ಮಾಡಿದ ಬಲಿಷ್ಠ ರಾಜ - ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್ ಪಾತ್ರವನ್ನು ನಿರ್ವಹಿಸುವುದು ನನ್ನ ಗೌರವವಾಗಿದೆ. ಅವರ ಜೀವನ ಮತ್ತು ಅವರು ಬದ್ದವಾಗಿರುವ ಮೌಲ್ಯಗಳಿಗೆ ನಾನು ನ್ಯಾಯ ಸಲ್ಲಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ.ಪ್ರತಿಯೊಬ್ಬ ಭಾರತೀಯನು ತನ್ನ ಜೀವನವನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದಕ್ಕೆ ಅವರು ನಮಗೆ ಮಾದರಿಯಾಗಿದ್ದಾರೆ.ನಮ್ಮ ಚಿತ್ರವು ಸಾಧ್ಯವಾದಷ್ಟು ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದರು.

ಇದನ್ನೂ ಓದಿ: 'ಸಚಿವ ನಾಗೇಶ್ ಅವರ ಮನೆ ಮೇಲಿನ ದಾಳಿ ಹೇಡಿತನದ ಸಂಕೇತ' 

ಇದೆ ವೇಳೆ ಚಿತ್ರದ ನಿರ್ದೇಶಕ ಡಾ. ಚಂದ್ರಪ್ರಕಾಶ್ ದ್ವಿವೇದಿ ಮಾತನಾಡಿ , “ನಮ್ಮ ದೇಶದ ಗೌರವಾನ್ವಿತ ಗೃಹ ಸಚಿವ ಶ್ರೀ ಅಮಿತ್ ಶಾ ಜಿ ಅವರು ಇಂದು ಚಲನಚಿತ್ರವನ್ನು ನೋಡಿದ್ದಾರೆ ಮತ್ತು ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್ ಅವರ ಧೈರ್ಯವನ್ನು ಜೀವಂತಗೊಳಿಸುವ ನಮ್ಮ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.ಪ್ರತಿಯೊಬ್ಬರೂ ನೋಡಲೇಬೇಕಾದ ಈ ಚಿತ್ರವನ್ನು ನಿರ್ಮಿಸುವಲ್ಲಿ ನಮ್ಮ ಶ್ರದ್ಧಾಪೂರ್ವಕ ಪ್ರಯತ್ನಗಳನ್ನು ಗುರುತಿಸಿದ್ದಕ್ಕಾಗಿ ಶ್ರೀ ಅಮಿತ್ ಶಾ ಜೀ ಅವರಿಗೆ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ಪ್ರತಿಯೊಬ್ಬ ಭಾರತೀಯನು ತಿಳಿದಿರಬೇಕಾದ ಮತ್ತು ಮೌಲ್ಯಯುತವಾದ ತ್ಯಾಗದ ಮಹಾಕಾವ್ಯವನ್ನು ಇಡೀ ಭಾರತಕ್ಕೆ ಹೇಳಲು ನಾವು ಪ್ರಯತ್ನಿಸಿದ್ದೇವೆ. ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುವಂತೆ ಮಾಡಲು ನಾವು ಯಶಸ್ವಿಯಾಗುತ್ತೇವೆ ಎಂದು ನಾವು ಭಾವಿಸುತ್ತೇವೆ" ಎಂದು ಹೇಳಿದರು.

ನವದೆಹಲಿಯಲ್ಲಿ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ನಟ ಅಕ್ಷಯ್ ಕುಮಾರ್ ಜೊತೆಗೆ ಚಿತ್ರದ ನಾಯಕಿ ಮಾನುಷಿ ಛಿಲ್ಲರ್ ಮತ್ತು ನಿರ್ದೇಶಕ ಡಾ. ಚಂದ್ರಪ್ರಕಾಶ್ ದ್ವಿವೇದಿ ಕೂಡ ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News