ನಟ ಶಿವರಾಜಕುಮಾರ್‌ ಮುಂದಿನ ಚಿತ್ರ, ನಿರ್ದೇಶಕರು ಯಾರು ಗೊತ್ತಾ?

ಸಚಿನ್ ರವಿ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾದಲ್ಲಿ ಶಿವಣ್ಣ ಮಹಾಭಾರತದ ಅಶ್ವತ್ಥಾಮನಾಗಿ ಬಣ್ಣ ಹಚ್ಚಲಿದ್ದು, ಇದೊಂದು ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. 

Written by - Chetana Devarmani | Last Updated : May 18, 2022, 04:54 PM IST
  • ನಟ ಶಿವರಾಜಕುಮಾರ್‌ ಮುಂದಿನ ಚಿತ್ರ
  • ಅಶ್ವತ್ಥಾಮನಾಗಲಿದ್ದಾರೆ ಶಿವಣ್ಣ
  • ನಿರ್ದೇಶನದ ಜೊತೆಗೆ ನಿರ್ಮಾಣಕ್ಕಿಳಿದ ಸಚಿನ್
ನಟ ಶಿವರಾಜಕುಮಾರ್‌ ಮುಂದಿನ ಚಿತ್ರ, ನಿರ್ದೇಶಕರು ಯಾರು ಗೊತ್ತಾ?  title=
ನಟ ಶಿವರಾಜಕುಮಾರ್‌

ಅವನೇ ಶ್ರೀಮನ್ನಾರಾಯಣ ಸಿನಿಮಾ ನಿರ್ದೇಶಕ ಸಚಿನ್ ರವಿ ಮುಂದಿನ ಸಿನಿಮಾ ಹೇಗಿರಲಿದೆ? ಯಾವ ಸ್ಟಾರ್ ಆಕ್ಷನ್ ಕಟ್ ಹೇಳ್ತಾರೆ? ಯಾವ ಜಾನರಿನ ಸಿನಿಮಾ ಮಾಡಲಿದ್ದಾರೆ? ಅನ್ನೋ ಪ್ರಶ್ನೆ ಚಿತ್ರರಸಿಕರ ಮನದಲ್ಲಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಚಿನ್ ಮುಂದಿನ ಸಿನಿಮಾವನ್ನು ಶಿವಣ್ಣನಿಗೆ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: KGF 2 ತಂಡದಿಂದ ಫ್ಯಾನ್ಸ್‌ಗೆ ಸಿಕ್ತು ಮತ್ತೊಂದು ಸಿಹಿ ಸುದ್ದಿ..

ಅಶ್ವತ್ಥಾಮನಾಗಲಿದ್ದಾರೆ ಶಿವಣ್ಣ: 

ಸಚಿನ್ ರವಿ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾದಲ್ಲಿ ಶಿವಣ್ಣ ಮಹಾಭಾರತದ ಅಶ್ವತ್ಥಾಮನಾಗಿ ಬಣ್ಣ ಹಚ್ಚಲಿದ್ದು, ಇದೊಂದು ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

ನಿರ್ದೇಶನದ ಜೊತೆಗೆ ನಿರ್ಮಾಣಕ್ಕಿಳಿದ ಸಚಿನ್:

ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪೆನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸದ್ಯದಲ್ಲಿಯೇ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿನಿಮಾ ತಂಡ ನೀಡಲಿದೆ.

ಇದನ್ನೂ ಓದಿ: ವರ್ಲ್ಡ್ ವೈಡ್ KGF 2 ಬಾಕ್ಸ್ ಆಫೀಸ್ ಕಲೆಕ್ಷನ್‌ ₹1200 ಕೋಟಿಗೂ ಹೆಚ್ಚು!

ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಜೊತೆಗೆ ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಸದ್ಯ ಸಿನಿಮಾ ಬಗ್ಗೆ ಇಷ್ಟು ಗುಟ್ಟುಬಿಟ್ಟು ಕೊಟ್ಟಿರುವ ಸಚಿನ್, ಮುಂದಿನ ದಿನಗಳಲ್ಲಿ ಉಳಿದ ಕಲಾವಿದರು ಹಾಗೂ ತಂತ್ರಜ್ಞಾನ ತಂಡವನ್ನು ಪರಿಚಯಿಸಲಿದ್ದು, ಬರುವ ಸೆಪ್ಟಂಬರ್ ನಿಂದ ಶೂಟಿಂಗ್ ಶುರುವಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News