Samyukta Hornad Adopted Tiger : ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು. ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ ಮೆಚ್ಚುಗೆ ಪಡೆದವರು ಈ ನಟಿ. ಸಂಯುಕ್ತಾ ಕೂಡ ಪ್ರಾಣಿ ಪ್ರಿಯೆ. ನಾಯಿ, ಮೊಲ ಎಂದರೆ ಸಂಯುಕ್ತಾ ಹೊರನಾಡುಗೆ ಎಲ್ಲಿಲ್ಲದ ಪ್ರೀತಿ. ಇಂತಿಪ್ಪ ಸಂಯುಕ್ತ ಹೊರನಾಡು ತಮ್ಮದೇ ಪ್ರಾಣ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಯನ್ನು ದತ್ತು ಪಡೆದಿದ್ದಾರೆ.
28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ ಮರಿಯನ್ನು ದತ್ತು ಪಡೆದಿದ್ದಾರೆ. ಇದು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ್ಯವಾಗಿ ವಾಸಿಸಲು ಕಷ್ಟ ಸಾಧ್ಯವಾಗಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರ ಕಾಳಜಿ ವಹಿಸಲಾಗುತ್ತಿದೆ. ದತ್ತು ಸ್ವೀಕೃತಿಯಲ್ಲಿ ಅದರ ದಿನನಿತ್ಯದ ಆಹಾರ, ನಿರ್ವಹಣೆ ಮತ್ತು ಪಶು ಚಿಕಿತ್ಸಾವನ್ನು ಭರಿಸಲಾಗುತ್ತದೆ.
ಇದನ್ನೂ ಓದಿ : ರಾಜ್ಯದಲ್ಲಿ ಈ ಸ್ಟಾರ್ ನಟಿಯ ಸಿನಿಮಾ ಬ್ಯಾನ್..!! ಮುಖ್ಯಮಂತ್ರಿ ಮಹತ್ವದ ನಿರ್ಧಾರ..
ಟೆಕೆಯಾನ್ ಸಂಸ್ಥೆ ಮುಖ್ಯಸ್ಥ ರಾಣಾ ರೊಬಿಲ್ಡ್ ಮಾತನಾಡಿ, ಪ್ರಾಣ ಅನಿಮಲ್ ಫೌಂಡೇಶನ್ ಹಾಗೈ ಬನ್ನೇರುಘಟ್ಟ ಜೈವಿಕ ಉದ್ಯಾನದ ಅಧಿಕಾರಿಗಳಿಗೆ ಈ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು. ಆರೋಗ್ಯ, ಶಿಕ್ಷಣ ಹಾಗೂ ಸಮಾನತೆ ಮತ್ತು ಸುಸ್ಥಿರತೆ CSR ಮೂಲ ಉದ್ದೇಶ ಎಂದರು.
ಸಂಯುಕ್ತ ಹೊರನಾಡು ಮಾತನಾಡಿ, ಟೆಕೆಯಾನ್ ಜೊತೆ ಕೈ ಜೋಡಿಸಿರುವುದು ಖುಷಿ ಕೊಟ್ಟಿದೆ. ತೊಂದರೆ ಒಳಗಾದ ಪ್ರಾಣಿಗಳನ್ನು ದತ್ತು ಸ್ವೀಕರಿಸದಕ್ಕೆ ಟೆಕೆಯಾನ್ ಗೆ ಧನ್ಯವಾದ ಎಂದರು.
ಟೆಕೆಯಾನ್ ಸಂಸ್ಥೆ ಮುಖ್ಯಸ್ಥ ರಾಣಾ ರೊಬಿಲ್ಡ್ ಮಾತನಾಡಿ, ಪ್ರಾಣ ಅನಿಮಲ್ ಫೌಂಡೇಶನ್ ಹಾಗೂ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅಧಿಕಾರಿಗಳಿಗೆ ಈ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು. ಆರೋಗ್ಯ, ಶಿಕ್ಷಣ ಹಾಗೂ ಸಮಾನತೆ ಮತ್ತು ಸುಸ್ಥಿರತೆ CSR ಮೂಲ ಉದ್ದೇಶ ಎಂದರು.
ಸಂಯುಕ್ತ ಹೊರನಾಡು ಮಾತನಾಡಿ, ಟೆಕೆಯಾನ್ ಜೊತೆ ಕೈ ಜೋಡಿಸಿರುವುದು ಖುಷಿ ಕೊಟ್ಟಿದೆ. ತೊಂದರೆ ಒಳಗಾದ ಪ್ರಾಣಿಗಳನ್ನು ದತ್ತು ಸ್ವೀಕರಿಸದಕ್ಕೆ ಟೆಕೆಯಾನ್ ಗೆ ಧನ್ಯವಾದ ಎಂದರು.
ಇದನ್ನೂ ಓದಿ : ʼದರ್ಶನ್ ತುಂಬಾ ಒಳ್ಳೆಯವರು.. ದೇವರು ಅವರನ್ನು ಕೈ ಬಿಡೋದಿಲ್ಲʼ-ನಟಿ ಮಾಲಾಶ್ರೀ
ಉಪ ಅರಣ್ಯಾಧಿಕಾರಿ ಎವಿ ಸೂರ್ಯಸೆನ್ ಮಾತನಾಡಿ, ಡೈಮ್ಯಾಂಡ್ ಕ್ಲಾಸ್ ವಿಭಾಗದಲ್ಲಿ ಟೆಕೆಯಾನ್ ಮತ್ತು ಪ್ರಾಣ ಸಂಸ್ಥೆ ಅತಿ ಹೆಚ್ಚು ವೆಚ್ಚದಲ್ಲಿ ಪ್ರಾಣಿಗಳನ್ನು ದತ್ತು ಪಡೆದಿದೆ. ಅವರ ಕೆಲಸ ಇತರರಿಗೂ ಮಾದರಿ ಎಂದು ತಿಳಿಸಿದರು.
ಟೆಕೆಯಾನ್ ಹಾಗೂ ಪ್ರಾಣ ಸಂಸ್ಥೆ ಜೊತೆಗೂಡಿ ದಿನದ 24 ಘಂಟೆ ಪ್ರಾಣಿಗಳ ರಕ್ಷಣೆಗೆ ಆಂಬ್ಯುಲೆನ್ಸ್ ಸೇವೆ ಒದಗಿಸಿದೆ. ಇದೂವರೆಗೆ 500 ಪ್ರಾಣಿಗಳನ್ನು ಈ ಸಂಸ್ಥೆ ರಕ್ಷಣೆ ಮಾಡಿವೆ. ಕನಕಪುರ ರಸ್ತೆಯಲ್ಲಿ ಟೆಕೆಯಾನ್ ಸಂಸ್ಥೆ ಪ್ರಾಣಿ ರಕ್ಷಣೆಗೆ ಪುನರ್ ವಸತಿ ಕೇಂದ್ರ ಸ್ಥಾಪಿಸಿಕೊಟ್ಟಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.