ದರ್ಶನ್ ವಿಚಾರಣೆ ಪಾರದರ್ಶಕವಾಗಿ ನಡೆಯಬೇಕು.. ಆತಂಕ, ಅನುಮಾನ ಕಾಡುತ್ತಿದ್ದೆ: ನಟ ಉಪೇಂದ್ರ

Upendra On Renukaswamy Murder Case: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ ಎಂದು ಬರೆದು ನಟ ಉಪೇಂದ್ರ ಪೋಸ್ಟ್‌ ಮಾಡಿದ್ದಾರೆ. 

Written by - Chetana Devarmani | Last Updated : Jun 17, 2024, 12:40 PM IST
  • ರೇಣುಕಾ ಸ್ವಾಮಿ ಕೊಲೆ ಪ್ರಕರಣ
  • ದರ್ಶನ್ ವಿಚಾರಣೆ ಪಾರದರ್ಶಕವಾಗಿ ನಡೆಯಬೇಕು
  • ನಟ ಉಪೇಂದ್ರ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌
ದರ್ಶನ್ ವಿಚಾರಣೆ ಪಾರದರ್ಶಕವಾಗಿ ನಡೆಯಬೇಕು.. ಆತಂಕ, ಅನುಮಾನ ಕಾಡುತ್ತಿದ್ದೆ:  ನಟ ಉಪೇಂದ್ರ title=

Upendra On Darshan Investigation: ದರ್ಶನ್‌ ಬಂಧನದ ಬಳಿಕ ಇದೇ ಮೊದಲ ಬಾರಿಗೆ ನಟ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ ಎಂದು ಬರೆದು ನಟ ಉಪೇಂದ್ರ ಪೋಸ್ಟ್‌ ಮಾಡಿದ್ದಾರೆ. 

ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ ಎಂದು ನಟ ಉಪೇಂದ್ರ ಹೇಳಿದ್ದಾರೆ. 

ಇದನ್ನೂ ಓದಿ:  ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ.. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕ್ಷಣಕ್ಕೊಂದು ಸಂಚಲನದ ಸಂಗತಿ ಬಹಿರಂಗ!!

ಏಕೆಂದರೆ ಯಾವುದೇ ಕೇಸ್ ಆದರೂ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು. ಅದು ಕಾನೂನಾಗಬೇಕು. ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು. #CriminalJustice Reforms ಎಂಬ ಹ್ಯಾಶ್‌ ಟ್ಯಾಗ್‌ನ್ನು ಬಳಸಿದ್ದಾರೆ.  

ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವಿಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು ಎಂದು ನಟ ಉಪೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಯುವ ವಿಚ್ಛೇದನ ವಿಚಾರದಲ್ಲಿ ಸಪ್ತಮಿ ಗೌಡ ಹೆಸರು ಬಳಕೆ... ಕೋರ್ಟ್‌ನಿಂದ ಹೊರಬಿತ್ತು ಮಹತ್ವದ ಆದೇಶ

ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ನಟ ಉಪೇಂದ್ರ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News