/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ನವದೆಹಲಿ : ರಾಷ್ಟ್ರ ಮಟ್ಟದಲ್ಲಿ ವಿವಾದ ಹುಟ್ಟಿಸಿರುವ `ಪದ್ಮಾವತಿ' ಚಲನಚಿತ್ರದ ಬಿಡುಗಡೆಗೆ ಸಂಬಂಧಿಸಿದಂತೆ ವಕೀಲ ಮನೋಹರ್ ಲಾಲ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ಇದರೊಂದಿಗೆ ಜವಾಬ್ದಾರಿಯುತ ಸ್ಥಾನಗಳಲ್ಲಿರುವ ಅಧಿಕಾರಿಗಳು ಚಲನಚಿತ್ರಗಳ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. 

ಚಿತ್ರದಲ್ಲಿನ ಕೆಲವು ಆಕ್ಷೇಪಾರ್ಹ ದೃಶ್ಯಗಳನ್ನು ಅಳಿಸುವಂತೆ ನಿರ್ದೇಶನ ನೀಡುವಂತೆ ಹಾಗೂ ಚಿತ್ರ ನಿರ್ಮಾಪಕ ಸಂಜಯ್ ಲೀಲಾ ಭಾನ್ಸಾಲಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. 

ಆದರೆ ಈ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. 

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ) ಇನ್ನೂ ಚಲನಚಿತ್ರಕ್ಕೆ ಪ್ರಮಾಣಪತ್ರವನ್ನು ನೀಡಿಲ್ಲ ಎಂದು ಹೇಳಿದೆ. 

ಈ ಚಿತ್ರ ಆರಂಭದಿಂದಲೂ ಹಲವು ವಿವಾದಗಳನ್ನು ಎದುರಿಸುತ್ತಿದ್ದು, ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್ ಅವರ ವಿರುದ್ಧವೂ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. 

ಅಷ್ಟೇ ಅಲ್ಲದೆ, ಚಿತ್ರದ ಬಿಡುಗಡೆಗೆ ಸಂಬಂಧಿಸಿದಂತೆ ಐತಿಹಾಸಿಕ ಸತ್ಯಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ ಶ್ರೀ ರಜಪೂತ ಕರಣಿ ಸೇನಾ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಗಮನಿಸಬಹುದು. 

(With ANI inputs)

 

Section: 
English Title: 
SC rejected the plea against film Padmavati
News Source: 
Home Title: 

`ಪದ್ಮಾವತಿ' ಚಿತ್ರ ವಿರೋಧಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

`ಪದ್ಮಾವತಿ' ಚಿತ್ರ ವಿರೋಧಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
Yes
Is Blog?: 
No
Tags: 
Byline: 
`ಪದ್ಮಾವತಿ' ಚಿತ್ರ ವಿರೋಧಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
Facebook Instant Article: 
Yes
Highlights: 

ಪದ್ಮಾವತಿ ಚಲನಚಿತ್ರದ ಬಿಡುಗಡೆಗೆ ವಿರೋಧಿಸಿ ವಕೀಲ ಮನೋಹರ್ ಲಾಲ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. 

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ) ಇನ್ನೂ ಚಲನಚಿತ್ರಕ್ಕೆ ಪ್ರಮಾಣಪತ್ರವನ್ನು ನೀಡಿಲ್ಲ

ಜವಾಬ್ದಾರಿಯುತ ಸ್ಥಾನಗಳಲ್ಲಿರುವ ಅಧಿಕಾರಿಗಳು ಚಲನಚಿತ್ರಗಳ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಸುಪ್ರಿಂಕೋರ್ಟ್ ನಿರ್ದೇಶನ