ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ ʻಜನʼ ಚಿತ್ರಕ್ಕೆ ಚಾಲನೆ

Jana Movie : ಬಣ್ಣದ ಲೋಕದ ಆಕರ್ಷಣೆಗೆ ಒಳಗಾಗದವರೇ ಇಲ್ಲ, ನಟನಾಗಬೇಕೆಂದು ಬಂದವರು ನಿರ್ದೇಶಕ, ನಿರ್ಮಾಪಕನಾಗಿದ್ದೂ ಇದೆ, ನಿರ್ದೇಶಕನಾಗಬೇಕೆಂದು ಬಂದವರು ನಟ, ನಿರ್ದೇಶಕನಾಗಿಯೂ ಬೆಳೆದಿದ್ದಾರೆ. 

Written by - YASHODHA POOJARI | Last Updated : Feb 17, 2024, 12:50 PM IST
  • ವಿತರಕ ಬಿ.ಜಿ.ಚಂದನ್‌ಕುಮಾರ್ ಈಗ ನಿರ್ದೇಶಕ
  • ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ ʻಜನʼ ಚಿತ್ರಕ್ಕೆ ಚಾಲನೆ
  • ಶುಭ ಹಾರೈಸಿದ ಹಿರಿಯ ನಿರ್ಮಾಪಕ ಚಿನ್ನೇಗೌಡ್ರು
ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ ʻಜನʼ ಚಿತ್ರಕ್ಕೆ ಚಾಲನೆ   title=

Jana Movie Shooting : ಬಣ್ಣದ ಲೋಕದ ಆಕರ್ಷಣೆಗೆ ಒಳಗಾಗದವರೇ ಇಲ್ಲ, ನಟನಾಗಬೇಕೆಂದು ಬಂದವರು ನಿರ್ದೇಶಕ, ನಿರ್ಮಾಪಕನಾಗಿದ್ದೂ ಇದೆ, ನಿರ್ದೇಶಕನಾಗಬೇಕೆಂದು ಬಂದವರು ನಟ, ನಿರ್ದೇಶಕನಾಗಿಯೂ ಬೆಳೆದಿದ್ದಾರೆ. ಆದರೆ ಇಲ್ಲೊಬ್ಬ ವಿತರಕ  ನಿರ್ದೇಶಕನಾಗುತ್ತಿರುವುದು ವಿಶೇಷ. ದಶಕದ ಹಿಂದೆ ತಾನೊಬ್ಬ ನಿರ್ದೇಶಕನಾಗಬೇಕೆಂಬ ಮಹತ್ವಾಕಾಂಕ್ಷೆಯಿಂದ ಮಂಡ್ಯದಿಂದ ಗಾಂಧಿ ನಗರಕ್ಕೆ ಕಾಲಿಟ್ಟ ಬಿ.ಜಿ.ಚಂದನ್‌ಕುಮಾರ್ ವಿತರಕನಾಗಿ ಕಾರ್ಯನಿರ್ವಹಿಸುತ್ತಲೇ ಚಿತ್ರನಿರ್ಮಾಣದ ಎಲ್ಲಾ ಆಯಾಮಗಳನ್ನು ಅರಿತುಕೊಂಡು ಇದೀಗ ನಿರ್ದೇಶಕನಾಗುತ್ತಿದ್ದಾರೆ. 

ಒಬ್ಬ ನಿರ್ದೇಶಕನಿಗೆ ತನ್ನ ಚಿತ್ರವನ್ನು ಜನರಿಗೆ ಹೇಗೆ ತಲುಪಿಸಬೇಕೆಂಬುದು ಸಹ ಗೊತ್ತಿರಬೇಕು ಎಂಬುದನ್ನು ಅರಿತಿರುವ ಚಂದನ್‌ಕುಮಾರ್ ದಶಕದ ಹಾದಿಯಲ್ಲಿ  ಕಥೆ ಬರೆಯುವುದರಿಂದ ಹಿಡಿದು  ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವುದನ್ನು ಚೆನ್ನಾಗಿಯೇ ತಿಳಿದುಕೊಂಡೇ ನಿರ್ದೇಶನಕ್ಕಿಳಿದಿದ್ದಾರೆ. ಅವರ ಹೊಸ ಚಿತ್ರದ ಶೀರ್ಷಿಕೆ "ಜನ". ಈ ಚಿತ್ರದ ಮುಹೂರ್ತ ಸಮಾರಂಭ ದೇವಯ್ಯ ಪಾರ್ಕ್ ಬಳಿಯ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ನಿರ್ದೇಶಕರ ತಂದೆ ಗೋವಿಂದರಾಜ್ ಅವರು ಕ್ಲಾಪ್ ಮಾಡಿದರೆ, ಹಿರಿಯ ನಿರ್ಮಾಪಕ ಚಿನ್ನೇಗೌಡ್ರು ಕ್ಯಾಮೆರಾ ಚಾಲನೆ ಮಾಡಿ ಶುಭ ಹಾರೈಸಿದರು.

ಇದನ್ನೂ ಓದಿ: 'ಶಾರುಖ್ ಖಾನ್....' ಪ್ರಿಯಾಮಣಿ ಕಿಂಗ್ ಖಾನ್ ಬಗ್ಗೆ ಹೀಗೆ ಹೇಳಿದ್ದೇಕೆ?

ಜನ ಚಿತ್ರದ ಮೂಲಕ ಚೇತನ್‌ಕುಮಾರ್ ಎಂಬ ಯುವಪ್ರತಿಭೆ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇದೊಂದು ಜರ್ನಿಯಲ್ಲಿ ಸಾಗುವ ಕಥೆಯಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಚಿತ್ರೀಕರಿಸುವ ಯೋಜನೆ ನಿರ್ದೇಶಕರಿಗಿದೆ. ಮಾಸ್, ಕ್ಲಾಸ್ ಹೀಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡಿಕೊಂಡಿರುವ ನಿರ್ದೇಶಕ ಚಂದನ್‌ಕುಮಾರ್ ಚಿತ್ರದಲ್ಲಿ ಅಂಡರ್‌ವರ್ಲ್ಡ್ ಶೇಡ್ ಕೂಡ ಇರುತ್ತೆ ಎಂದು ಹೇಳಿದ್ದಾರೆ. 

ಈ ಚಿತ್ರವನ್ನು ಸಕ್ಕರೆನಾಡು ಕಂಬೈನ್ಸ್ ಮೂಲಕ ಶ್ರೀಮತಿ ಯಶೋದಮ್ಮ ಗೋವಿಂದರಾಜ್ ಹಾಗೂ ದೀಪಾ ಚಂದನ್‌ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ನರಸಿಂಹಮೂರ್ತಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.  ಮುಂಜಾನೆ ಮಂಜು ಅವರ ಛಾಯಾಗ್ರಹಣ, ಕಾರ್ತೀಕ್ ಅಲೆ ಅವರ ಸಂಗೀತ ಸಂಯೋಜನೆ, ಚಾಲೆಂಜಿಂಗ್ ಸೂರಿ ಅವರ ನೃತ್ಯನಿರ್ದೇಶನ ಜನ ಚಿತ್ರಕ್ಕಿದೆ.

ಇದನ್ನೂ ಓದಿ: ಲಂಗಾ-ರವಿಕೆಯಲ್ಲಿ ನಾಗಿಣಿ ಖ್ಯಾತಿಯ ನಮ್ರತಾ : ಫೋಟೋಸ್ ಇಲ್ಲಿವೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News