ಹಾಲಿವುಡ್ ಶೈಲಿಯ ‘ಮರ್ಡರ್ ಲೈವ್’ನಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ ನಟನೆ..!

ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ 'ಮರ್ಡರ್ ಲೈವ್' ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

Written by - YASHODHA POOJARI | Edited by - Krishna N K | Last Updated : Oct 1, 2022, 01:26 PM IST
  • 10 ವರ್ಷಗಳ ಬಳಿಕ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ ಶರ್ಮಿಳಾ
  • ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ಶರ್ಮಿಳಾ ಮಾಂಡ್ರೆ ನಟನೆ
  • ‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರದಲ್ಲಿ ಕನ್ನಡತಿ
ಹಾಲಿವುಡ್ ಶೈಲಿಯ ‘ಮರ್ಡರ್ ಲೈವ್’ನಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ ನಟನೆ..!  title=

ಬೆಂಗಳೂರು : ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ 'ಮರ್ಡರ್ ಲೈವ್' ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು ನಿರ್ದೇಶಿಸಿರುವ ನಿಕೋ ಮಾಸ್ತೋರಾಕಿಸ್ ಅವರ ಕಥೆಯನ್ನು ಆಧರಿಸಿದೆ. ಸೈಕೋ ಕಿಲ್ಲರ್ ಮತ್ತು ನಾಲ್ವರು ಮಹಿಳೆಯರ ಸುತ್ತ ಸುತ್ತುವ ಈ ಚಿತ್ರದಲ್ಲಿ, ಕಷ್ಟದ ಪರಿಸ್ಥಿಯಲ್ಲಿ ಸಾಮಾನ್ಯ ಮನುಷ್ಯರೂ ಹೇಗೆ ಸಿಡಿದೆದ್ದು ಹೀರೋಗಳಾಗುತ್ತಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ 346 ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ನೋಡಿ ಮಾಹಿತಿ

ಸೈಕೋ ಕಿಲ್ಲರ್ ಒಬ್ಬ ಜಗತ್ತಿನ ಯಾವುದೇ ಕಂಪ್ಯೂಟರ್ ಹ್ಯಾಕ್ ಮಾಡಿ, ಅದರ ಮೂಲಕ ಲೈವ್ ಆಗಿ ಕೊಲೆ ಮಾಡುವ ಕಥೆ ಇರುವ ಈ ಚಿತ್ರವನ್ನು ಸಂಪೂರ್ಣವಾಗಿ ಇಂಗ್ಲೆಂಡ್‌ನಲ್ಲಿ ಚಿತ್ರೀಕರಿಸಲಾಗಿದೆ. ಸೂರ್ಯ ಅಭಿನಯದ ‘ಇಟಿ’ ಮತ್ತು ಶಿವಕಾರ್ತಿಕೇಯನ್ ಅಭಿನಯದ ‘ಡಾಕ್ಟರ್’ ಚಿತ್ರಗಳಲ್ಲಿ ವಿಲನ್ ಪಾತ್ರ ಮಾಡಿದ್ದ ವಿನಯ್ ರೈ, ಈ ಚಿತ್ರದಲ್ಲಿ ಬಹಳ ಕ್ಲಿಷ್ಟಕರವಾದ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ವಿಭಿನ್ನ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಕನ್ನಡತಿ ಶರ್ಮಿಳಾ ಮಾಂಡ್ರೆ, ಈ ದ್ವಿಭಾಷಾ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಇವರಿಬ್ಬರ ಜೊತೆಗೆ ಹಾಲಿವುಡ್ ನಟಿ ನವೋಮಿ ವಿಲ್ಲೋ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ಇದನ್ನೂ ಓದಿ: ಶಿವಣ್ಣ ಫ್ಯಾನ್ಸ್‌ಗೆ ಸಿಹಿ ಸುದ್ದಿ : ವರ್ಷದ ಕೊನೆ ತಿಂಗಳಲ್ಲಿ ತೆರೆಗೆ ಅಪ್ಪಳಿಸಲಿದೆ ʼವೇದʼ..!

ಡಾಟ್‌ಕಾಮ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಈ ಚಿತ್ರ ನಿರ್ಮಾಣವಾಗಿದ್ದು, ಮುರುಗೇಶ್ ನಿರ್ದೇಶನ ಮಾಡಿದ್ದಾರೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಅತ್ಯುನ್ನತ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಲಾಗಿದೆ. ಪ್ರಶಾಂತ್ ಡಿ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಮದನ್ ಅವರ ಸಂಕಲನವಿದೆ.
ಈಗಾಗಲೇ 'ಮರ್ಡರ್ ಲೈವ್' ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News