Shilpa Shetty: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ED ಬಿಗ್‌ ಶಾಕ್‌.. 98 ಕೋಟಿ ಮೌಲ್ಯದ ಆಸ್ತಿ ಜಪ್ತಿ !

ED probe Shilpa Shetty Raj Kundra: ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿಗೆ ED ಅಧಿಕಾರಿಗಳು ಬಿಗ್‌ ಶಾಕ್‌ ನೀಡಿದ್ದಾರೆ. ED ಅಂದರೆ ಜಾರಿ ನಿರ್ದೇಶನಾಲಯ ರಾಜ್ ಕುಂದ್ರಾ ಅವರ ಸುಮಾರು 98 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. 

Written by - Chetana Devarmani | Last Updated : Apr 18, 2024, 02:06 PM IST
  • ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿಗೆ ED ಅಧಿಕಾರಿಗಳು ಬಿಗ್‌ ಶಾಕ್‌
  • ರಾಜ್ ಕುಂದ್ರಾ ಅವರ ಸುಮಾರು 98 ಕೋಟಿ ಮೌಲ್ಯದ ಆಸ್ತಿ ಜಪ್ತಿ
  • ಶಿಲ್ಪಾ ಅವರ ಜುಹು ಬಂಗಲೆ ಕೂಡ ಸೀಜ್ ಮಾಡಲಾಗಿದೆ
Shilpa Shetty: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ED ಬಿಗ್‌ ಶಾಕ್‌.. 98 ಕೋಟಿ ಮೌಲ್ಯದ ಆಸ್ತಿ ಜಪ್ತಿ ! title=

Shilpa Shetty Property Seized: ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿಗೆ ED ಅಧಿಕಾರಿಗಳು ಬಿಗ್‌ ಶಾಕ್‌ ನೀಡಿದ್ದಾರೆ. ED ಅಂದರೆ ಜಾರಿ ನಿರ್ದೇಶನಾಲಯ ರಾಜ್ ಕುಂದ್ರಾ ಅವರ ಸುಮಾರು 98 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ವರದಿಗಳ ಪ್ರಕಾರ, ಇಡಿ ಜಪ್ತಿ ಮಾಡಿರುವ ಕುಂದ್ರಾ ಆಸ್ತಿಯಲ್ಲಿ ಶಿಲ್ಪಾ ಅವರ ಜುಹು ಬಂಗಲೆ ಕೂಡ ಸೇರಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಉದ್ಯಮಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಜುಹುದಲ್ಲಿರುವ ಫ್ಲ್ಯಾಟ್, ಪುಣೆಯಲ್ಲಿರುವ ಬಂಗಲೆ, ರಾಜ್ ಕುಂದ್ರಾ ಹೆಸರಲ್ಲಿರುವ ಶೇರುಗಳನ್ನು ಸೀಜ್ ಮಾಡಲಾಗಿದೆ.

ಇಡಿ ನೀಡಿರುವ ಹೇಳಿಕೆಯ ಪ್ರಕಾರ, ರಾಜ್ ಕುಂದ್ರಾ ಅವರ ಚರ ಮತ್ತು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಲಾಗಿದ್ದು, ಇದರ ಒಟ್ಟು ಮೌಲ್ಯ 97.79 ಕೋಟಿ ರೂ. ಆಗಿದೆ. ಇದರಲ್ಲಿ ಪಿಎಂಎಲ್‌ಎ, 2002ರ ಕಾಯಿದೆಯಡಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿದ್ದ ರಾಜ್ ಕುಂದ್ರಾ ಅವರ ಜುಹು ಬಂಗಲೆಯನ್ನು ಸಹ ಜಪ್ತಿ ಮಾಡಲಾಗಿದೆ. ಇದರೊಂದಿಗೆ ಪುಣೆಯಲ್ಲಿರುವ ಬಂಗಲೆ ಹಾಗೂ ರಾಜ್ ಕುಂದ್ರಾ ಅವರ ಹೆಸರಿನಲ್ಲಿರುವ ಷೇರುಗಳನ್ನು ಸಹ ಜಪ್ತಿ ಮಾಡಲಾಗಿದೆ. 

ಇದನ್ನೂ ಓದಿ: ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ! 

ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಇಡಿ ಈ ಕ್ರಮ ಕೈಗೊಂಡಿದೆ. ವರದಿಗಳ ಪ್ರಕಾರ, ಮಹಾರಾಷ್ಟ್ರ ಪೊಲೀಸ್ ಮತ್ತು ದೆಹಲಿ ಪೊಲೀಸರ ಪರವಾಗಿ ಇಡಿ, ಒನ್ ವೇರಿಯೇಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಮತ್ತು ಆರೋಪಿಗಳಾದ ದಿವಂಗತ ಅಮಿತ್ ಭಾರದ್ವಾಜ್, ವಿವೇಕ್ ಭಾರದ್ವಾಜ್, ಸಿಂಪಿ ಭಾರದ್ವಾಜ್ ಮತ್ತು ಮಹೇಂದ್ರ ಭಾರದ್ವಾಜ್ ಮತ್ತು ಇತರರ ವಿರುದ್ಧ ತನಿಖೆ ಆರಂಭಿಸಿದೆ. ವರದಿಗಳ ಪ್ರಕಾರ, ಅವರು ಬಿಟ್‌ಕಾಯಿನ್‌ ರೂಪದಲ್ಲಿ ಜನರಿಂದ ಭಾರಿ ಹಣವನ್ನು ತೆಗೆದುಕೊಂಡಿದ್ದಾರೆ ಮತ್ತು ಪ್ರತಿ ತಿಂಗಳು 10 ಪ್ರತಿಶತವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. 

2017ರಲ್ಲಿ  ರಾಜ್​ ಕುಂದ್ರಾ ಹಾಗೂ ಅವರ ಸಂಗಡಿಗರು ಬಿಟ್‌ಕಾಯಿನ್ ಮೂಲಕ 6600 ಕೋಟಿ ರೂಪಾಯಿಯನ್ನು ಸಂಪಾದಿಸಿದ್ದರು. ಜೊತೆಗೆ ತಿಂಗಳಿಗೆ ಶೇ.10 ಪಾವತಿಸುವುದಾಗಿ ಜನರಿಗೆ ಆಮಿಷ ಒಡ್ಡಿದ್ದರು ಎಂಬ ಆರೋಪವಿದೆ. ಇದನ್ನು ಬೃಹತ್ ಬಿಟ್‌ಕಾಯಿನ್ ಹಗರಣ ಎಂದು ಆರೋಪಿಸಲಾಗಿದ್ದು, ರಾಜ್ ಕುಂದ್ರಾ ಪ್ರಸ್ತುತ 150 ಕೋಟಿ ಲಾಭ ಗಳಿಸುತ್ತಿದ್ದಾರೆ ಎಂದು ಇಡಿ ಹೇಳಿದೆ. 

ಬಿಟ್‌ಕಾಯಿನ್ ಹಗರಣದಲ್ಲಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರ ಹೆಸರು ಸಹ ಕೇಳಿಬಂದಿತ್ತು. ಇದು ಸಾವಿರಾರು ಕೋಟಿ ರೂಪಾಯಿ ಹಗರಣ ಎಂದು ವರದಿಯಾಗಿದ್ದು. ಈ ಪ್ರಕರಣದಲ್ಲಿ ಇಬ್ಬರಿಗೂ ಇಡಿ 2018ರಲ್ಲಿ ಸಮನ್ಸ್ ಜಾರಿ ಮಾಡಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಅಮಿತ್ ಭಾರದ್ವಾಜ್ ಅವರನ್ನು ಆ ಸಮಯದಲ್ಲಿ ಅರೆಸ್ಟ್‌ ಮಾಡಲಾಗಿತ್ತು. ಈ ಹಗರಣವು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ್ದು, gatbitcoin.com ಎಂಬ ವೆಬ್‌ಸೈಟ್‌ನಿಂದ ಕೋಟ್ಯಂತರ ರೂಪಾಯಿ ವಂಚಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

ಇದನ್ನೂ ಓದಿ: ದೀಪಿಕಾ ಪಡುಕೋಣೆ ಮೈಮೇಲಿನ ʻರಣಬೀರ್‌ ಕಪೂರ್‌ʼ ಹೆಸರಿನ ಟ್ಯಾಟೂ ನೋಡಿದ್ದೀರಾ? ಆಲಿಯಾಗೂ ಗೊತ್ತಾ ಇವರ ಸೀಕ್ರೇಟ್‌ ಸಂಬಂಧ! 

ಈ ಬಗ್ಗೆ ಜಾರಿ ನಿರ್ದೇಶನಾಲಯ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ. "ರಾಜ್ ಕುಂದ್ರಾ ಅವರಿಗೆ ಸೇರಿದ 97.7 ಕೋಟಿ ರೂಪಾಯಿ ಆಸ್ತಿ ಜಪ್ತಿ ಮಾಡಲಾಗಿದೆ. ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಇರುವ ಜುಹು ಮನೆ, ಪುಣೆಯಲ್ಲಿರುವ ನಿವಾಸ, ರಾಜ್ ಕುಂದ್ರಾ ಹೆಸರಲ್ಲಿರುವ ಇಕ್ವಿಟಿ ಷೇರುಗಳು ಸೀಜ್‌ ಆಗಿದೆ" ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News