ಅಕ್ಟೋಬರ್ 18 ರಂದು ಮೈಸೂರಿನಲ್ಲಿ "ಘೋಸ್ಟ್" ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ

Shivarajkumar Ghost movie : ಬಹು ನಿರೀಕ್ಷಿತ "ಘೋಸ್ಟ್" ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ.

Written by - Krishna N K | Last Updated : Oct 13, 2023, 03:12 PM IST
  • "ಘೋಸ್ಟ್" ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ.
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿಯಾಗಿ ಘೋಸ್ಟ್‌ ಮೆರವಣಿಗೆ.
  • ಜ್ವಾಲಾಮುಖಿ ಡಾ||ರಾಜಕುಮಾರ್ ಅಭಿಮಾನಿಗಳ ಬಳಗ ಈ ಅದ್ದೂರಿ ಮೆರವಣಿಗೆ.
ಅಕ್ಟೋಬರ್ 18 ರಂದು ಮೈಸೂರಿನಲ್ಲಿ "ಘೋಸ್ಟ್" ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ title=

Ghost movie procession : ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಘೋಸ್ಟ್" ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ.

ಜ್ವಾಲಾಮುಖಿ ಡಾ||ರಾಜಕುಮಾರ್ ಅಭಿಮಾನಿಗಳ ಬಳಗ ಈ ಅದ್ದೂರಿ ಮೆರವಣಿಗೆ ಆಯೋಜಿಸಿದೆ. ಡೋಲು, ನಗರಿ, ಕೇರಳದ ಚಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ ಕಲಾ ತಂಡಗಳು, ನೂರೈವತ್ತಕ್ಕೂ ಆಟೋಗಳಲ್ಲಿ ನಕ್ಷತ್ರಗಳು ಈ ಮೆರವಣಿಗೆಯ ಪ್ರಮುಖ ಆಕರ್ಷಣೆ. ಸಾವಿರಾರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ :ಮದುವೆ ಪ್ರಿಪರೇಷನ್‌ ಮಧ್ಯೆ ಬ್ಯಾಚುಲರ್‌ ಟ್ರಿಪ್‌ನಲ್ಲಿ ನಟ ವರುಣ್‌ ತೇಜ್

ಮೈಸೂರಿನ ಇಟ್ಟಿಗೆಗೂಡಿನಿಂದ ಆರಂಭವಾಗುವ ಮೆರವಣಿಗೆ ಡಿಸಿ ಕಛೇರಿ ಮೂಲಕ ಸಾಗಿ ವುಡ್ ಲ್ಯಾಂಡ್ಸ್ ಚಿತ್ರಮಂದಿರ ತಲುಪಲಿದೆ. ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ನಿರ್ಮಾಪಕರಾದ ಸಂದೇಶ್ ಮುಂತಾದವರು ಈ ಅದ್ದೂರಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಮೈಸೂರಿನಲ್ಲಿ ಈಗ ದಸರಾ ಸಡಗರ. ಅದರೊಂದಿಗೆ "ಘೋಸ್ಟ್" ಚಿತ್ರ ಸಹ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಆನಂದವನ್ನು ಮತ್ತಷ್ಟು ಹೆಚ್ಚಿಸಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News