SIIMA 2023 : ದಕ್ಷಿಣ ಭಾರತ ಸಿನಿಮಾಗಳ ಹಬ್ಬ ʼಸೈಮಾʼ ಈ ಬಾರಿ ದುಬೈನಲ್ಲಿ..!

SIIMA awards 2023 : 2023ರ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ದುಬೈನಲ್ಲಿ ನಡೆಯಲಿದೆ. ಸತತ 11 ನೇ ವರ್ಷದಿಂದ "ಸೈಮಾ" ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗುತ್ತಿದ್ದು, ದಕ್ಷಿಣ ಭಾರತದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ.

Written by - YASHODHA POOJARI | Edited by - Krishna N K | Last Updated : Aug 14, 2023, 01:19 PM IST
  • 2023ರ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ನಡೆಯಲಿದೆ.
  • ಸೆಪ್ಟಂಬರ್ 15 ಮತ್ತು 16 ರಂದು ದುಬೈನಲ್ಲಿ ಜರುಗಲಿದೆ.
  • ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್ ಮಾಹಿತಿ.
SIIMA 2023 : ದಕ್ಷಿಣ ಭಾರತ ಸಿನಿಮಾಗಳ ಹಬ್ಬ ʼಸೈಮಾʼ ಈ ಬಾರಿ ದುಬೈನಲ್ಲಿ..! title=

SIIMA 2023 : ದಕ್ಷಿಣ ಭಾರತ ಸಿನಿಮಾಗಳ ಹಬ್ಬ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ದುಬೈನಲ್ಲಿ ನಡೆಯಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಸಿನಿಮಾಗಳಲ್ಲಿ ಅತ್ಯತ್ತುಮ‌ ನಟನೆ, ನಿರ್ದೇಶನ, ನಿರ್ಮಾಣ ಹೀಗೆ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ನೀಡುವ ಸಿನಿಮಾ ಮಂದಿಯನ್ನು ಪ್ರೋತ್ಸಾಹಿಸಲು ನಿರ್ಧರಿಸಲಾಗಿದೆ‌.

ಹೌದು.. ಈ ಬಾರಿಯ ಸೈಮಾ 2023 ನೇ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟಂಬರ್ 15 ಮತ್ತು 16 ರಂದು ದುಬೈನಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹುಭಾಷಾ ನಟಿ ನಟಿ ಶೃತಿ ಹಾಸನ್, ಬೆಂಗಳೂರಿಗೆ ಮರಳಿ ಬಂದಿರುವುದು ಖುಷಿ ಆಗಿದೆ. ಮೊದಲ ವರ್ಷ ಕಾರ್ಯಕ್ರಮದಲ್ಲಿ ನೃತ್ಯ ಮಾಡಿದ್ದೆ. ಸೈಮಾ ಮತ್ತಷ್ಟು ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಚಿತ್ರರಂಗದ ಮಂದಿಯನ್ನು, ಪ್ರತಿಭಾವಂತರನ್ನು ಗೌರವಿಸುವ ಕೆಲಸ ಮುಂದುವರಿಸಲಿ ಎಂದು ಹಾರೈಸಿದರು.

ಇದನ್ನೂ ಓದಿ: ಹೊಲಗೇರಿ ಪದ ಬಳಕೆ: ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಇದೇ ವೇಳೆ ನಟ ಡಾಲಿ ಧನಂಜಯ ಮಾತನಾಡಿ ಎರಡನೇ ಸೈಮಾ‌ ದಿಂದ ಸಂಪರ್ಕವಿದೆ, ನಟಿ ಪ್ರಣೀತಾ ಪ್ರಣೀತಾ ಸುಭಾಷ್ ಅವರನ್ನು ನಾನು ಸೈಮಾದಲ್ಲಿ‌ ಭೇಟಿಯಾಗಿದೆ ಎಂದರು. ನಟಿ ಪ್ರಣೀತಾ ಸುಭಾಷ್ ಮಾತನಾಡಿ ಸೈಮಾ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್, ಮಾತನಾಡಿ, ಸತತ 11 ನೇ ವರ್ಷದಿಂದ "ಸೈಮಾ" ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಪ್ರಶಸ್ತಿ ನೀಡುವಲ್ಲಿ ಮುಂಚೂಣಿಯಲ್ಲಿದ್ದೇವೆ. ಜಾಗತಿಕ ಮಟ್ಟದಲ್ಲಿ ದಕ್ಷಿಣ ಭಾರತದ ಸಿನಿಮಾಗಳನ್ನು ಗುರುತಿಸಿ ಪ್ರೋತ್ಸಾಹ ನೀಡಲಾಗುವುದು. ಈ ಬಾರಿ "ಸೈಮಾ" ಅದ್ದೂರಿ ಪ್ರಶಸ್ತಿ ಪ್ರದಾನ ಸಮಾರಂಭದ ದುಬೈ ನಲ್ಲಿ ನಡೆಯಲಿದೆ. ದಕ್ಷಿಣ ಭಾರತದ ಪ್ರತಿಭೆಗಳನ್ನು ಈ ಬಾರಿ ಹೆಚ್ಚು ಹೆಚ್ಚು ಪ್ರದರ್ಶನ ಮಾಡಲಾಗುವುದು. ಈ ಬಾರಿ ಹೆಚ್ಚು ಚಿತ್ರಗಳಿವೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News