"ಕಾಂತಾರ" ಚಿತ್ರದ "ಸಿಂಗಾರ ಸಿರಿಯೆ" ಹಾಡಿಗೆ ಕನ್ನಡ ಕಲಾರಸಿಕರು ಫಿದಾ

ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ "ಸಿಂಗಾರ ಸಿರಿಯೆ" ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ.   

Written by - YASHODHA POOJARI | Edited by - Ranjitha R K | Last Updated : Aug 16, 2022, 08:29 AM IST
  • ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ
  • ಚಿತ್ರದ "ಸಿಂಗಾರ ಸಿರಿಯೆ" ಹಾಡು ಬಿಡುಗಡೆ
  • ವೀಕ್ಷಕರಿಂದ ವ್ಯಕ್ತವಾಯಿತು ಭಾರೀ ಮೆಚ್ಚುಗೆ
"ಕಾಂತಾರ" ಚಿತ್ರದ "ಸಿಂಗಾರ ಸಿರಿಯೆ" ಹಾಡಿಗೆ ಕನ್ನಡ ಕಲಾರಸಿಕರು ಫಿದಾ title=
Kantara film song released

ಬೆಂಗಳೂರು : ಹೆಸರಾಂತ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ  "ಕಾಂತಾರ" ಚಿತ್ರದ "ಸಿಂಗಾರ ಸಿರಿಯೆ" ಎಂಬ ಅದ್ಭುತ ಹಾಡು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆಯಾಗಿದೆ. ಈ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿದ್ದು,  ನಾಯಕ ನಟನಾಗಿ ಕೂಡಾ ಅವರೇ ಕಾಣಿಸಿಕೊಳ್ಳಲಿದ್ದಾರೆ.  

ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ "ಸಿಂಗಾರ ಸಿರಿಯೆ" ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ ಈ ಹಾಡಿನಲ್ಲಿ ಸೊಗಸಾಗಿ ಮೂಡಿಬಂದಿದೆ. 

ಇದನ್ನೂ ಓದಿ : ವಿಶ್ವಭಾರತಿಗೆ ಕನ್ನಡದಾರತಿ: ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಡುಗಡೆಯಾಯ್ತು ವಂದೇ ಮಾತರಂ

 

ವಿಜಯ್ ಪ್ರಕಾಶ್,  ಅನನ್ಯ ಭಟ್ ಹಾಗೂ ಪನ್ನಾರ್ ವಲ್ಟುರ್ ಅವರ ಇಂಪಾದ ಗಾಯನ ಹಾಡಿನ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರ ಅಭಿನಯ ಅದ್ಭುತವಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಚಿತ್ರ ಯಾವಾಗ ತೆರೆಗೆ ಬರುವುದೊ? ಎಂಬ ಕಾತುರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. 

ಇದನ್ನೂ ಓದಿ : “ಅವಳಿಗೆ ಟ್ರೋಲ್ ಆಗಿ ಫೇಮಸ್ ಆಗೋ ಆಸೆ”: ‘ಬಿಗ್’ ಮನೆಯಲ್ಲಿ ಉದಯ್ ಹೀಗಂದಿದ್ದು ಯಾರಿಗೆ ಗೊತ್ತಾ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News