Arundhathi Nair: ಸಾವು ಬದುಕಿನ ನಡುವೆ ಹೋರಾಡುತ್ತಿರುವ ಖ್ಯಾತ ನಟಿ!

Actress Arundhathi Nair Car Accident: ಸೌತ್ ನಟಿ ಅರುಂಧತಿ ನಾಯರ್ ಅಭಿಮಾನಿಗಳಿಗೆ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ರಸ್ತೆ ಅಪಘಾತದಲ್ಲಿ ನಟಿ ಅರುಂಧತಿ ನಾಯರ್ ತೀವ್ರವಾಗಿ ಗಾಯಗೊಂಡಿದ್ದಾರೆ. 

Written by - Chetana Devarmani | Last Updated : Mar 19, 2024, 12:50 PM IST
    • ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ನಾಯರ್ ರಸ್ತೆ ಅಪಘಾತ
    • ಚಿಂತಾಜನಕ ಸ್ಥಿತಿಯಲ್ಲಿ ನಟಿ ಅರುಂಧತಿ ನಾಯರ್
    • ಸಹೋದರನೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ನಡೆದ ಘಟನೆ
Arundhathi Nair: ಸಾವು ಬದುಕಿನ ನಡುವೆ ಹೋರಾಡುತ್ತಿರುವ ಖ್ಯಾತ ನಟಿ!  title=

Arundhathi Nair Accident: ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ನಾಯರ್ ಮಾರ್ಚ್ 14 ರಂದು ಅಪಘಾತಕ್ಕೀಡಾಗಿದ್ದು, ತೀವ್ರವಾಘಿ ಗಾಯಗೊಂಡಿದ್ದಾರೆ. ನಟಿ ಅರುಂಧತಿ ನಾಯರ್  ಅವರನ್ನು ವೆಂಟಿಲೇಟರ್‌ ಮೇಲೆ ಇರಿಸಲಾಗಿದೆ ಎಂದು ಅವರ ಸಹೋದರಿ ಸೋಮವಾರ ಹೇಳಿಕೆ ನೀಡಿದ್ದಾರೆ. ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದ ಅರುಂಧತಿ ನಾಯರ್‌ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ನಟಿಯ ಸ್ಥಿತಿ ಚಿಂತಾಜನಕವಾಗಿದೆ

ತಮಿಳುನಾಡಿನ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳಲ್ಲಿ ಪ್ರಕಟವಾದ ಸುದ್ದಿಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಬೇಕೆಂದು ನಾವು ಭಾವಿಸಿದ್ದೇವೆ. ಮೂರು ದಿನಗಳ ಹಿಂದೆ ನನ್ನ ಸಹೋದರಿ ಅರುಂಧತಿ ನಾಯರ್ ಅವರಿಗೆ ಅಪಘಾತವಾಗಿದ್ದು ನಿಜ. ಆಕೆ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾಳೆ. ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾರೆ ಎಂದು ನಟಿ ಅರುಂಧತಿ ಅವರ ಸಹೋದರಿ ಸೋಷಿಯಲ್‌ ಮೀಡಿಯಾ ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ:  2300 ಕೋಟಿ ಒಡೆಯನನ್ನು 2ನೇ ಮದುವೆಯಾದ ಸ್ಟಾರ್‌ ನಟಿ! ಕನ್ನಡಿಗರ ಮನಗೆದ್ದ ಈ ಚೆಲುವೆ ಯಾರು ಗೊತ್ತಾ? 6 ವರ್ಷದ ಬಳಿಕ ಗುಟ್ಟು ರಟ್ಟು!

ಸಹೋದರನೊಂದಿಗೆ ಮನೆಗೆ ಹಿಂದಿರುಗುವಾಗ ಅಪಘಾತ

ಕೋವಲಂ ಬೈಪಾಸ್‌ನಲ್ಲಿ ಈ ರಸ್ತೆ ಅಪಘಾತ ಸಂಭವಿಸಿದ್ದು, ಅರಂಧತಿ ಅವರ ತಲೆಗೆ ಗಾಯವಾಗಿದೆ ಎಂದು ವರದಿಯಾಗಿದೆ. ತಮ್ಮ ಸಹೋದರನೊಂದಿಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಮನೆಗೆ ಮರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅಪಾರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. 

10 ವರ್ಷಗಳ ಹಿಂದೆ ನಟನೆಗೆ ಪದಾರ್ಪಣೆ ಮಾಡಿದ್ದ ನಟಿ 

ಅರುಂಧತಿ 2014 ರಲ್ಲಿ ತಮಿಳು ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ಅವರು 'ಸೈತಾನ್' ಮತ್ತು 'ಪಿಸ್ತಾ' ಚಿತ್ರಗಳಲ್ಲಿಯೂ ನಟಿಸಿದ್ದಾರೆ. 2018 ರಿಂ ಮಲಯಾಳಮ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.
 
ಇದನ್ನೂ ಓದಿ: "ಆ ನಟ ಮೂರು ಮದುವೆ ಮುಚ್ಚಿಟ್ಟು ನನ್ನನ್ನು ಗರ್ಭಿಣಿ ಮಾಡಿದ" : 17 ನೇ ವಯಸ್ಸಿಗೆ 50 ವರ್ಷದ ಹೀರೋ ಜೊತೆ ಓಡಿಹೋಗಿ ಮದುವೆಯಾದ ನಟಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News