Rajinikanth: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

Rajinikanth Admitted in Hospital: ಫುಲ್ ಬಾಡಿ ಚೆಕಪ್ ಗಾಗಿ ಆಸ್ಪತ್ರೆಗೆ ತೆರಳಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Written by - Zee Kannada News Desk | Last Updated : Oct 29, 2021, 06:37 AM IST
  • ಫುಲ್ ಬಾಡಿ ಚೆಕಪ್ ಗಾಗಿ ಆಸ್ಪತ್ರೆಗೆ ತೆರಳಿದ್ದ ಸೂಪರ್ ಸ್ಟಾರ್ ರಜನೀಕಾಂತ್
  • ರಜನೀಕಾಂತ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ
  • ಸೂಪರ್ ಸ್ಟಾರ್ ರಜನಿಕಾಂತ್ಅ ವರು ಆಸ್ಪತ್ರೆಯಲ್ಲಿ ನಿಯಮಿತವಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ
Rajinikanth: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು title=
Rajinikanth: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

Rajinikanth Admitted in Hospital: ಸೂಪರ್ ಸ್ಟಾರ್ ರಜನಿಕಾಂತ್ ಹಠಾತ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಟ ರಜನಿಕಾಂತ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಅಲ್ವಾರ್‌ಪೇಟ್‌ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದರ ಬೆನ್ನಲ್ಲೇ ಮಾಹಿತಿ ನೀಡಿರುವ ಲತಾ ರಜನೀಕಾಂತ್, ರಜನಿಕಾಂತ್ ಅವರು  ಫುಲ್ ಬಾಡಿ ಚೆಕಪ್ ಗಾಗಿ ಆಸ್ಪತ್ರೆಗೆ (Rajnikant Hospitalised) ತೆರಳಿದ್ದಾರೆ. ಒಂದು ದಿನ ಆಸ್ಪತ್ರೆಯಲ್ಲಿಯೇ ಇದ್ದು ಅಲ್ಲಿಂದಲೇ ಅವರನ್ನು ತಪಾಸಣೆ ಮಾಡಲಾಗುವುದು. ರಜನಿಕಾಂತ್ ಆರೋಗ್ಯವಾಗಿದ್ದಾರೆ ಹಾಗಾಗಿ ಅಭಿಮಾನಿಗಳು ಆತಂಕ ಪಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ- Aryan Khan get Bail : ಆರ್ಯನ್ ಖಾನ್ ಗೆ ಜಾಮೀನು ಕೊಡಿಸಿದ ವಕೀಲ ಮುಕುಲ್ ರೋಹಟಗಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಸೂಪರ್ ಸ್ಟಾರ್ ರಜನಿಕಾಂತ್ (Superstar Rajinikanth) ಅವರು ಆಸ್ಪತ್ರೆಯಲ್ಲಿ ನಿಯಮಿತವಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. "ಇದು ಸಾಮಾನ್ಯವಾಗಿ ನಿಯಮಿತ ಮಧ್ಯಂತರದಲ್ಲಿ ಮಾಡಲಾಗುವ ವೈದ್ಯಕೀಯ ಪರೀಕ್ಷೆಯಾಗಿದೆ. ಆದ್ದರಿಂದ ಅವರನ್ನು ಈಗ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ದಾಖಲಿಸಲಾಗಿದೆ" ಎಂದು ಆಪ್ತ ಮೂಲವೊಂದು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದೆ.

ಇದನ್ನೂ ಓದಿ- Aryan Drugs Case : ಆರ್ಯನ್ ಖಾನ್‌ಗೆ ಕೊನೆಗೂ ಸಿಕ್ಕಿತು ಜಾಮೀನು : ಇಂದಿಗೆ ಅಂತ್ಯೆ 25 ದಿನಗಳ ಜೈಲು ವಾಸ!

70 ವರ್ಷ ವಯಸ್ಸಿನ ನಟ ರಜನಿಕಾಂತ್ ಅವರು 2019 ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಟೋಬರ್ 25ರಂದು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ರಜನಿಕಾಂತ್ ಅವರಿಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News