ಸಂಸದ ತೇಜಸ್ವಿ ಸೂರ್ಯ ಅವರಿಂದ ಅನಾವರಣವಾಯಿತು ದೇಶಪ್ರೇಮದ ಕಥಾಹಂದರ ಹೊಂದಿರುವ "ಹೈನ" ಚಿತ್ರದ ಟ್ರೇಲರ್

Haina Kannada Movie: ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ಹೈನ" ಚಿತ್ರ ಪೆಟ್ರಿಯಾಟಿಕ್ ಕಥಾಹಂದರ ಹೊಂದಿರುವ ಚಿತ್ರ. ಇದೇ ತಿಂಗಳ 31 ರಂದು ತೆರೆಗೆ ಬರಲು ಸಜ್ಜಾಗಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ "ಹೈನ" ಚಿತ್ರದ ಟ್ರೇಲರ್  ಅನಾವರಣ ‌ಮಾಡಿ ಶುಭ ಹಾರೈಸಿದ್ದಾರೆ‌  

Written by - YASHODHA POOJARI | Edited by - Zee Kannada News Desk | Last Updated : Jan 17, 2025, 11:40 AM IST
  • ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ಹೈನ".
  • ಇದೇ ತಿಂಗಳ 31 ರಂದು ತೆರೆಗೆ ಬರಲು ಸಜ್ಜಾಗಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
  • ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ "ಹೈನ" ಚಿತ್ರದ ಟ್ರೇಲರ್ ಅನಾವರಣ ‌ಮಾಡಿ ಶುಭ ಹಾರೈಸಿದ್ದಾರೆ‌
ಸಂಸದ ತೇಜಸ್ವಿ ಸೂರ್ಯ ಅವರಿಂದ ಅನಾವರಣವಾಯಿತು ದೇಶಪ್ರೇಮದ ಕಥಾಹಂದರ ಹೊಂದಿರುವ "ಹೈನ" ಚಿತ್ರದ ಟ್ರೇಲರ್  title=

Haina Kannada Movie: ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ಹೈನ" ಚಿತ್ರ ಪೆಟ್ರಿಯಾಟಿಕ್ ಕಥಾಹಂದರ ಹೊಂದಿರುವ ಚಿತ್ರ. ಇದೇ ತಿಂಗಳ 31 ರಂದು ತೆರೆಗೆ ಬರಲು ಸಜ್ಜಾಗಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ "ಹೈನ" ಚಿತ್ರದ ಟ್ರೇಲರ್  ಅನಾವರಣ ‌ಮಾಡಿ ಶುಭ ಹಾರೈಸಿದ್ದಾರೆ‌

 ಸಮಾಜಕ್ಕೆ ಉತ್ತಮ ಸಂದೇಶ ನೀಡಲು "ಹೈನ" ಚಿತ್ರ ಮಾಡಿದ್ದಾರೆ‌. ಪ್ರಚಲಿತ ವಿಷಯ ಮುಂದಿಟ್ಟುಕೊಂಡು ಜನರಲ್ಲಿ‌ ಅರಿವು ಮೂಡಿಸುವ ಪ್ರಯತ್ನ ಕೂಡ ಈ ಚಿತ್ರದ‌ ಮೂಲಕ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇದರಿಂದ ಸಮಾಜದಲ್ಲಿ ಜಾಗೃತಿ ಉಂಟಾಗಲಿ, ವೆಂಕಟ್ ಭಾರಧ್ವಜ್ ಅವರ ಪ್ರಯತ್ನಕ್ಕೆ ಒಳ್ಳೆಯದಾಗಲಿ, ಇನ್ನಷ್ಟು ಸಿನಿಮಾ ಅವರಿಂದ ಬರಲಿ ಎಂದು ಸಂಸದ ತೇಜಸ್ವಿ ಸೂರ್ಯ ಹಾರೈಸಿದರು

ಇದೊಂದು ರಾಷ್ಟ್ರಭಕ್ತಿಯ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತನಾಡಿದ ನಿರ್ದೇಶಕ ವೆಂಕಟ್ ಭಾರದ್ವಾಜ್, ಇಂತಹ ಚಿತ್ರ ನಿರ್ದೇಶನ ಮಾಡಲು ಬಹಳ ಖುಷಿಯಾಗಿದೆ. ಗುಪ್ತಾಚಾರ ಇಲಾಖೆ, ಪೊಲೀಸ್ ಇಲಾಖೆ ಹಾಗೂ ರಕ್ಷಣಾ ಇಲಾಖೆಯ ಕಾರ್ಯವೈಖರಿಯ‌ ಬಗ್ಗೆ ನಮ್ಮ ಚಿತ್ರದಲ್ಲಿ ತೋರಿಸಲಾಗಿದೆ. ಇಂತಹ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿಕೊಟ್ಟ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದ. ನಮ್ಮ ಚಿತ್ರದಲ್ಲಿ ಬೇರೆ ಕೆಲವು ದೇಶಗಳ ಹೆಸರನ್ನು ಬಳಸಿದ್ದೆವು. ಆ ಹೆಸರನ್ನು ಬಳಸದಂತೆ ಸೆನ್ಸಾರ್ ಮಂಡಳಿ ಹೇಳಿದೆ‌. ಅದು ಸ್ವಲ್ಪ ಬೇಸರವಾಗಿದೆ. ಉಳಿದಂತೆ ಚಿತ್ರತಂಡದ ಸಹಕಾರದಿಂದ "ಹೈನ" ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿ 31ರಂದು ಬಿಡುಗಡೆಯಾಗುತ್ತಿದೆ ಎಂದರು. 

ಅಕ್ರಮ‌ ವಲಸಿಗರು ದೇಶಕ್ಕೆ ನುಸುಳಿ, ಹೇಗೆ ಉಪಯೋಗಿಸುತ್ತಿದ್ದಾರೆ . ದೇಶದ ಆಂತರಿಕ ಭದ್ರತೆ , ಭಯೋತ್ಪಾದಕರಿಗೆ ಹಣ ಹೇಗೆ ಬರುತ್ತದೆ ಎನ್ನುವುದನ್ನು  ಚಿತ್ರದಲ್ಲಿ ತೋರಿಸಲಾಗಿದೆ ಎಂದು ಕಥೆ ಬರೆದಿರುವ ಲಕ್ಷ್ಮಣ್ ಶಿವಶಂಕರ್ ಹೇಳಿದರು.

ಛಾಯಾಗ್ರಾಹಕ ನಿಶಾಂತ್ ನಾಣಿ , ಸಂಕಲನಕಾರ ಶಮೀಕ್ ಸೇರಿದಂತೆ ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು

ವೆಂಕಟ್ ಭಾರದ್ವಾಜ್ ಹಾಗೂ ರಾಜ್ ಕಮಲ್ ನಿರ್ಮಿಸಿರುವ ಈ
ಚಿತ್ರದ ತಾರಾಬಳಗದಲ್ಲಿ ಹರ್ಷ ಅರ್ಜುನ್, ದಿಗಂತ ಸ್ವರೂಪ, ರಾಜ್ ಕಮಲ್, ಲಕ್ಷ್ಮಣ ಶಿವಶಂಕರ್, ನಂದಕಿಶೋರ್ ಮತ್ತು ಲಾರೆನ್ಸ್ ಪ್ರೀತಂ ಅವರಂತಹ ಪ್ರತಿಭಾನ್ವಿತ ನಟರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News