ಕನ್ನಡದಲ್ಲಿ 'ಟೆನೆಂಟ್' ಸಿನಿಮಾ.. ಫಸ್ಟ್ ಲುಕ್ ಗೆ ಫಿದಾ ಆದ ಸಿನಿ ಪ್ರಿಯರು

Tenant Movie First Look: ಧರ್ಮ ಕೀರ್ತಿರಾಜ್, ತಿಲಕ್ ರಾಜ್, ಸೋನು ಗೌಡ, ರಾಕೇಶ್ ಮಯ್ಯ ಹಾಗೂ ಉಗ್ರಂ ಮಂಜು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

Written by - YASHODHA POOJARI | Last Updated : Aug 3, 2024, 11:08 AM IST
    • ಟೆನೆಂಟ್ ಸಿನಿಮಾ ಫಸ್ಟ್ ಲುಕ್ ರಿಲೀಸ್
    • ಧರ್ಮ ಕೀರ್ತಿರಾಜ್ ನಟಿಸುತ್ತಿರುವ ಸಿನಿಮಾ
    • ಯುವ ಪ್ರತಿಭೆ ಶ್ರೀಧರ್ ಶಾಸ್ತ್ರೀ ನಿರ್ದೇಶನದ ಸಿನಿಮಾ
ಕನ್ನಡದಲ್ಲಿ 'ಟೆನೆಂಟ್' ಸಿನಿಮಾ.. ಫಸ್ಟ್ ಲುಕ್ ಗೆ ಫಿದಾ ಆದ ಸಿನಿ ಪ್ರಿಯರು title=

Tenant Movie : ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಅದರ ಭಾಗವಾಗಿ ಟೆನೆಂಟ್ ಸಿನಿಮಾ ಮೂಡಿ ಬರುತ್ತಿದೆ. ಟೆನೆಂಟ್ ಎಂದರೆ ಬಾಡಿಗೆದಾರ. ಯುವ ಪ್ರತಿಭೆ ಶ್ರೀಧರ್ ಶಾಸ್ತ್ರೀ ನಿರ್ದೇಶನ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. 

ವಿಎಫ್ ಎಕ್ಸ್ ನಲ್ಲಿ 4 ವರ್ಷದ ಅನುಭವವಿರುವ ಶ್ರೀಧರ್ ಮೊದಲ ಪ್ರಯತ್ನ ಟೆನೆಂಟ್. ಒಂದಷ್ಟು ಕಿರುಚಿತ್ರ ನಿರ್ದೇಶಿಸಿರುವ ಅವರೀಗ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುತ್ತಿದ್ದಾರೆ. ಶ್ರೀಧರ್ ಹೊಸ ಪ್ರಯತ್ನಕ್ಕೆ ಪ್ರತಿಭಾನ್ವಿತ ತಾರಾಬಳಗ ಸಾಥ್ ಕೊಟ್ಟಿದೆ. ಧರ್ಮ ಕೀರ್ತಿರಾಜ್, ತಿಲಕ್ ರಾಜ್, ಸೋನು ಗೌಡ, ರಾಕೇಶ್ ಮಯ್ಯ ಹಾಗೂ ಉಗ್ರಂ ಮಂಜು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Bollywood: ಮಕ್ಕಳು ಮಾಡಿಕೊಳ್ಳೋಣ ಎಂದ ಪತಿಗೆ ರಾತ್ರೋ ರಾತ್ರಿ ಡಿವೋರ್ಸ್‌ ಕೊಟ್ಟ ಖ್ಯಾತ ನಟಿ !

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶ್ರೀಧರ್ ಶಾಸ್ತ್ರೀ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ ಟೆನೆಂಟ್ ಸಿನಿಮಾ ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ.

ಗಿರೀಶ್ ಹೋತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ, ಮನೋಹರ್ ಜೋಷಿ ಛಾಯಾಗ್ರಹಣ ಚಿತ್ರಕ್ಕಿದೆ. ಶ್ರೀಧರ್ ಶಾಸ್ತ್ರಿ, ಪ್ರವೀಣ್ ಪ್ರಕಾಶ್, ಪ್ರದೀಪ್ ಚಂದ್ರ, ಪ್ರಸನ್ನ ಭಟ್, ಪುರಷೋತ್ತಮ್ ಎ, ರಾಘವೇಂದ್ರ ಸಿ.ಪಿ, ಕಾರ್ತಿಕ್ ಎಸ್.ಎಸ್ ಸಂಭಾಷಣೆ ಬರೆದಿದ್ದು, ಐಶ್ವರ್ಯ ರಂಗರಾಜನ್, ಅನಿರುದ್ಧ ಶಾಸ್ತ್ರಿ, ಗಿರೀಶ್ ಹೋತೂರ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸದ್ಯ ಫಸ್ಟ್ ಲುಕ್ ರಿಲೀಸ್ ಮಾಡಿರುವ ಚಿತ್ರತಂಡ ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. 

ಇದನ್ನೂ ಓದಿ: ಬಿಗ್‌ ಬಾಸ್‌ ಮನೆಗೆ ವಿಲನ್‌ ಆಗಿ ಕಾಡಿದ್ದ ಸ್ಪರ್ಧಿಗೆ ಕಪ್‌..ವಿನ್ನರ್‌ ಕಂಡು ಇತರ ಸ್ಪರ್ಧಿಗಳು ಶಾಕ್‌..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News