ಬೆಂಗಳೂರು: ಪೃಥ್ವಿ ರಾಜ್ ಸುಕುಮಾರನ್ ಅಭಿನಯದ ದಿ ಗೋಟ್ ಲೈಫ್, ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ ನಿರ್ದೇಶನದ ಸಿನಿಮಾ.
ದಿ ಗೋಟ್ ಲೈಫ್ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.
ಇದನ್ನೂ ಓದಿ: ಕಾಂತರಾಜು ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧ: ಸಚಿವ ಶಿವರಾಜ್ ತಂಗಡಗಿ
ಬ್ಲೆಸ್ಸಿ ನಿರ್ದೇಶನದ ಈ ಸಿನಿಮಾವನ್ಬು ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದೆ. ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಪ್ರಸಿದ್ಧ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಟ್ ಲೈಫ್ ಅಕಾಡೆಮಿ ಪ್ರಶಸ್ತಿ ವಿಜೇತರಾದ ಎ.ಆರ್.ರೆಹಮಾನ್ ಮತ್ತು ರೆಸುಲ್ ಪೂಕುಟ್ಟಿ ಅವರ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವಿದೆ.ಚಿತ್ರದ ಅದ್ಭುತ ದೃಶ್ಯಗಳನ್ನು ಸುನಿಲ್ ಕೆ.ಎಸ್ ತಮ್ಮ ಕ್ಯಾಮೆರಾದಲ್ಲಿ ಚಿತ್ರೀಕರಿಸಿದ್ದಾರೆ ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮಲಯಾಳಂ ಚಿತ್ರೋದ್ಯಮದ ಅತಿದೊಡ್ಡ ಸಿನಿಮಾ ಎನಿಸಿದೆ.
ಇದನ್ನೂ ಓದಿ: ತೆಲಂಗಾಣ ರಾಜ್ಯದಲ್ಲಿ ಮತದಾನ ಆರಂಭ
ಅಂದಹಾಗೆ ಈ ಚಿತ್ರ ಮಲಯಾಳಂ ಸಾಹಿತ್ಯ ಪ್ರಪಂಚದ ಅತ್ಯಂತ ಜನಪ್ರಿಯ ಕಾದಂಬರಿ 'ಆಡು ಜೀವಿತಂ' ಆಧರಿಸಿದೆ, ಇದು ವಿದೇಶಿ ಸೇರಿದಂತೆ 12 ವಿವಿಧ ಭಾಷೆಗಳಲ್ಲಿ ಅನುವಾದಗೊಂಡಿದೆ. ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಾದಂಬರಿ 90 ರ ದಶಕದಲ್ಲಿ ಅದೃಷ್ಟ ಹುಡುಕಿ ವಲಸೆ ಬಂದ ನಜೀಬ್ ಎಂಬ ಯುವಕನ ನೈಜ ಕಥೆಯನ್ನು ಹೊಂದಿದೆ.ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಬ್ಲೆಸ್ಸಿ, "ದಿ ಗೋಟ್ ಲೈಫ್ ಎಲ್ಲೆಡೆ ಸಲ್ಲುವ ಕಥೆ. ನಿರೂಪಣೆ ಸಲುವಾಗಿ ಸಾಜಷ್ಟು ಶ್ರಮ ವಹಿಸಿ ಕೆಲಸ ಮಾಡಿದ್ದೇನೆ. ಕಾದಂಬರಿಯನ್ನು ಸಿನಿಮಾ ಮಾಡುವಾಗ ಅನೇಕ ಸವಾಲು ಎದುರಾದವು. ಪ್ರೇಕ್ಷಕರಿಗೆ ಒಳ್ಳೆಯ ಸಿನಿಮಾ ಕೊಡುವ ಪ್ರಯತ್ನ ಮಾಡಿದ್ದೇನೆ ಎನ್ನುತ್ತಾರೆ. ಅಂದಹಾಗೆ, ಗೋಟ್ ಲೈಫ್ ಏಪ್ರಿಲ್ 10 ರಂದು ಹಿಂದಿ, ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡದಲ್ಲಿ ಬಿಡುಗಡೆಯಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.