ಹೈದರಾಬಾದ್ : ಪುಷ್ಪ 2 ಪ್ರೀಮಿಯರ್ನ ಅಂಗವಾಗಿ ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಪೊಲೀಸರು BNS ಕಾಯಿದೆಯ 105, 118(1)r/w3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ಶುಕ್ರವಾರದಂದು ವಶಕ್ಕೆ ತೆಗೆದುಕೊಂಡಿದ್ದಾರೆ.ಇದೇ ವೇಳೆ ಅಲ್ಲು ಅರ್ಜುನ್ ಬಂಧನಕ್ಕೆ ಚಿತ್ರರಂಗದ ಹಾಗೂ ರಾಜಕೀಯ ವಲಯದ ಗಣ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಸಾಮಾಜಿಕ ಮಾಧ್ಯಮಗಳಲ್ಲೂ ಸಹಿತ ತೀವ್ರ ಟೀಕೆ ವ್ಯಕ್ತವಾಗಿರುವ ಬೆನ್ನಲ್ಲೇ ಈಗ ಈ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ರೇವತಿ ಪತಿ ಭಾಸ್ಕರ್ ಸಂಚಲನದ ಹೇಳಿಕೆ ನೀಡಿದ್ದಾರೆ.ಅಗತ್ಯ ಬಿದ್ದರೆ ಪ್ರಕರಣ ಹಿಂಪಡೆಯುವುದಾಗಿ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದಾರೆ.ರೇವತಿ ಸಾವಿಗೂ ಅಲ್ಲು ಅರ್ಜುನ್ಗೂ ಯಾವುದೇ ಸಂಬಂಧವಿಲ್ಲ, ಹಾಗಾಗಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ- ಪ್ರಪಂಚದ ಶ್ರೀಮಂತರ ಪೈಕಿ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಆಸ್ತಿಯ ಮೌಲ್ಯ ಒಟ್ಟು ಎಷ್ಟು ಗೊತ್ತಾ ?
ಏತನ್ಮಧ್ಯೆ, ಅಲ್ಲು ಅರ್ಜುನ್ ಅವರನ್ನು ಪೊಲೀಸರು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಬಳಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.ಈಗ ನ್ಯಾಯಾಲಯ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ನೀಡಿದೆ.
ಈಗ ತೆಲಂಗಾಣದಲ್ಲಿನ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧ ಬಿಆರ್ಎಸ್ ಮುಖಂಡರಾದ ಕೆಟಿಆರ್, ಹರೀಶ್ ರಾವ್, ಕೌಶಿಕ್ ರೆಡ್ಡಿ, ಬಿಜೆಪಿ ಮುಖಂಡರಾದ ಬಂಡಿ ಸಂಜಯ್, ರಾಜಾ ಸಿಂಗ್ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನೊಂದೆಡೆಗೆ ಬಾಲಿವುಡ್ ನಟ ವರುಣ್ ಧವನ್ ಅಲ್ಲು ಅರ್ಜುನ್ ಬಿಡುಗಡೆ ಒತ್ತಾಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.