Martin: ಚಿತ್ರೀಕರಣದಲ್ಲೂ ಹೊಸ ದಾಖಲೆ ಬರೆದ ಕನ್ನಡದ 'ಮಾರ್ಟಿನ್' ಸಿನಿಮಾ

 ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್"  ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Written by - YASHODHA POOJARI | Edited by - Manjunath Naragund | Last Updated : Mar 19, 2024, 09:26 PM IST
  • ಚಿತ್ರೀಕರಣದಲ್ಲೂ "ಮಾರ್ಟಿನ್" ದಾಖಲೆ ಬರೆದಿದೆ.
  • ಒಟ್ಟು 240 ದಿನಗಳ ಚಿತ್ರೀಕರಣ ನಡೆದಿದೆ.
  • ಇನ್ನು ಚಿತ್ರದ ಆಡಿಯೋ ಹಕ್ಕನ್ನು ಅಧಿಕ ಮೊತ್ತ ನೀಡಿ ಜನಪ್ರಿಯ ಆಡಿಯೋ ಸಂಸ್ಥೆಯಾದ "ಸರೆಗಮಪ" ಪಡೆದುಕೊಂಡಿದೆ.
Martin: ಚಿತ್ರೀಕರಣದಲ್ಲೂ ಹೊಸ ದಾಖಲೆ ಬರೆದ ಕನ್ನಡದ 'ಮಾರ್ಟಿನ್' ಸಿನಿಮಾ title=

Martin: ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್"  ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಚಿತ್ರೀಕರಣದಲ್ಲೂ "ಮಾರ್ಟಿನ್" ದಾಖಲೆ ಬರೆದಿದೆ. ಒಟ್ಟು 240 ದಿನಗಳ ಚಿತ್ರೀಕರಣ ನಡೆದಿದೆ. ಇನ್ನು ಚಿತ್ರದ ಆಡಿಯೋ ಹಕ್ಕನ್ನು ಅಧಿಕ ಮೊತ್ತ ನೀಡಿ  ಜನಪ್ರಿಯ ಆಡಿಯೋ ಸಂಸ್ಥೆಯಾದ "ಸರೆಗಮಪ" ಪಡೆದುಕೊಂಡಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದ್ದು,  ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ : Weather Update: ಇನ್ನೆರಡು ದಿನ ದೇಶದ ಈ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಿದ ಐಎಂಡಿ

ಸತ್ಯ ಹೆಗಡೆ ಛಾಯಾಗ್ರಹಣ , ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ  ಸಾಹಸ ನಿರ್ದೇಶನವಿರುವ "ಮಾರ್ಟಿನ್" ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ ,ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News